ಇಶಾನ್ಗೆ ಇಲ್ಲ ಚಾನ್ಸ್: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿ ಬುಧವಾರದಿಂದ (ನವೆಂಬರ್ 4) ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯಕ್ಕೆ ಆಕ್ಲೆಂಡ್‌ನ ಈಡನ್ ಪಾರ್ಕ್ ಮೈದಾನ ಆತಿಥ್ಯ ವಹಿಸಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ರೂಪಿಸಲಿರುವ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನಾಳೆಯಿಂದ (ನವೆಂಬರ್ 4) ಆರಂಭವಾಗಲಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಸಮತೋಲಿತ ಸಂಯೋಜನೆಯೊಂದಿಗೆ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಕಣಕ್ಕಿಳಿಯುವುದು ಖಚಿತ.
ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಣಕ್ಕಿಳಿದರೆ, ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತ ಕೆಎಲ್ ರಾಹುಲ್ ಕಣಕ್ಕಿಳಿಯುವುದರಿಂದ ಇಶಾನ್ ಕಿಶನ್ಗೆ ಚಾನ್ಸ್ ಸಿಗುವ ಸಾಧ್ಯತೆಯಿಲ್ಲ ಎಂದೇ ಹೇಳಬಹುದು.
ಅತ್ತ ಆಲ್ರೌಂಡರ್ಗಳಾಗಿ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಮತ್ತು ನಿತೀಶ್ ಕುಮಾರ್ ರೆಡ್ಡಿ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯಲಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಕೇವಲ ಮೊದಲ ಪಂದ್ಯದ ತಂಡಕ್ಕೆ ಮಾತ್ರ ಆಯ್ಕೆ ಮಾಡಿರುವುದರಿಂದ, ಅವರು ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ ಎನ್ನಬಹುದು.
ಹಾಗೆಯೇ ಮುಖ್ಯ ಸ್ಪಿನ್ನರ್ ಆಗಿ ಚೈನಾಮನ್ ಬೌಲರ್ ಕುಲ್ದೀಪ್ ಯಾದವ್ ಸ್ಥಾನ ಪಡೆದರೆ. ವೇಗದ ಬೌಲಿಂಗ್ ವಿಭಾಗದಲ್ಲಿ ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್ ಹಾಗೂ ಅನ್ಶುಲ್ ಕಂಬೋಜ್ಗೆ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ಶುಭ್ಮನ್ ಗಿಲ್ (ನಾಯಕ)
- ರೋಹಿತ್ ಶರ್ಮಾ
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಅಕ್ಷರ್ ಪಟೇಲ್
- ಕೆಎಲ್ ರಾಹುಲ್ (ವಿಕೆಟ್ ಕೀಪರ್)
- ನಿತೀಶ್ ಕುಮಾರ್ ರೆಡ್ಡಿ
- ಗುರ್ನೂರ್ ಬ್ರಾರ್
- ಕುಲ್ದೀಪ್ ಯಾದವ್
- ಅರ್ಷದೀಪ್ ಸಿಂಗ್
- ಅನ್ಶುಲ್ ಕಂಬೋಜ್.
ಇದನ್ನೂ ಓದಿ: 3 ಆಟಗಾರರ ಡೀಲ್… ಮುಂಬೈ ಇಂಡಿಯನ್ಸ್ಗೆ ಅರ್ಷದೀಪ್ ಸಿಂಗ್?
ಭಾರತದ ಏಕದಿನ ತಂಡ (ಮೊದಲ 3 ಪಂದ್ಯಗಳಿಗೆ): ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಕುಲ್ದೀಪ್ ಯಾದವ್.




