AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ವಿಕೆಟ್​ ಕೀಪರ್​ಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಮ್ಯಾಚ್ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ. ಇನ್ನು ನವೆಂಬರ್ 22 ರಿಂದ ಶುರುವಾಗಲಿರುವ ದ್ವಿತೀಯ ಪಂದ್ಯಕ್ಕೆ ಗುವಾಹಟಿಯ ಬರ್ಸಪಾರ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಇಬ್ಬರು ವಿಕೆಟ್​ ಕೀಪರ್​ಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Team India
ಝಾಹಿರ್ ಯೂಸುಫ್
|

Updated on:Nov 13, 2025 | 2:26 PM

Share

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ನ.14) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಈ ಪಂದ್ಯದಲ್ಲಿ ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್​​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ  ರಿಷಭ್ ಪಂತ್ ಬ್ಯಾಟ್ ಬೀಸಲಿದ್ದಾರೆ.

ಆರನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ಎ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಜುರೆಲ್ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ್ದರು. ಹೀಗಾಗಿ ಅವರನ್ನು ಆರನೇ ಕ್ರಮಾಂಕದಲ್ಲಿ ಆಡಿಸುವ ಸಾಧ್ಯತೆಯಿದೆ.

ಇಲ್ಲಿ ಧ್ರುವ್ ಜುರೆಲ್ ಹಾಗೂ ರಿಷಭ್ ಪಂತ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಂಡರೆ ಯಾರು ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ.

ಈ ಪ್ರಶ್ನೆಗೆ ಉತ್ತರ ರಿಷಭ್ ಪಂತ್. ಏಕೆಂದರ ಧ್ರುವ್ ಜುರೆಲ್ ಈ ಹಿಂದೆ ಫೀಲ್ಡರ್ ಆಗಿ ಹಲವು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಅವರನ್ನು ಮೊದಲ ಟೆಸ್ಟ್​ನಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಸಲಿದ್ದಾರೆ. ಹಾಗಾಗಿ ಮೊದಲ ಟೆಸ್ಟ್​ನಲ್ಲಿ ಪಂತ್ ಅವರೇ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಇನ್ನು ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವುದು ಖಚಿತ. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್​ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಒಂದು ವೇಳೆ ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟರೆ ಅಕ್ಷರ್ ಪಟೇಲ್​ಗೆ ಚಾನ್ಸ್ ಸಿಗಬಹುದು.

ಇನ್ನುಳಿದಂತೆ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್  ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

ಭಾರತದ ಸಂಭಾವ್ಯ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಧ್ರುವ್ ಜುರೆಲ್, ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್​​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: IPL 2026: RCB ಈ ಇಬ್ಬರನ್ನು ತಂಡದಲ್ಲೇ ಉಳಿಸಿಕೊಳ್ಳುವಂತಿಲ್ಲ..!

ಭಾರತ ಟೆಸ್ಟ್​ ತಂಡ:

ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್​ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಆಕಾಶ್ ದೀಪ್.

Published On - 2:25 pm, Thu, 13 November 25

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ