
ಭಾರತ ಮತ್ತು ಸೌತ್ ಆಫ್ರಿಕಾ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿಯು ನಾಳೆಯಿಂದ (ನ.14) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. ಅದರಂತೆ ಈ ಪಂದ್ಯದಲ್ಲಿ ಭಾರತದ ಪರ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಐದನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಬ್ಯಾಟ್ ಬೀಸಲಿದ್ದಾರೆ.
ಆರನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಸೌತ್ ಆಫ್ರಿಕಾ ಎ ವಿರುದ್ಧದ ಟೆಸ್ಟ್ ಪಂದ್ಯಗಳಲ್ಲಿ ಜುರೆಲ್ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿದ್ದರು. ಹೀಗಾಗಿ ಅವರನ್ನು ಆರನೇ ಕ್ರಮಾಂಕದಲ್ಲಿ ಆಡಿಸುವ ಸಾಧ್ಯತೆಯಿದೆ.
ಇಲ್ಲಿ ಧ್ರುವ್ ಜುರೆಲ್ ಹಾಗೂ ರಿಷಭ್ ಪಂತ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಂಡರೆ ಯಾರು ವಿಕೆಟ್ ಕೀಪಿಂಗ್ ಮಾಡಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ.
ಈ ಪ್ರಶ್ನೆಗೆ ಉತ್ತರ ರಿಷಭ್ ಪಂತ್. ಏಕೆಂದರ ಧ್ರುವ್ ಜುರೆಲ್ ಈ ಹಿಂದೆ ಫೀಲ್ಡರ್ ಆಗಿ ಹಲವು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಅವರನ್ನು ಮೊದಲ ಟೆಸ್ಟ್ನಲ್ಲಿ ಕೇವಲ ಬ್ಯಾಟರ್ ಆಗಿ ಕಣಕ್ಕಿಳಿಸಲಿದ್ದಾರೆ. ಹಾಗಾಗಿ ಮೊದಲ ಟೆಸ್ಟ್ನಲ್ಲಿ ಪಂತ್ ಅವರೇ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯುವುದು ಖಚಿತ. ಇವರ ಜೊತೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಒಂದು ವೇಳೆ ಕುಲ್ದೀಪ್ ಯಾದವ್ ಅವರನ್ನು ಹೊರಗಿಟ್ಟರೆ ಅಕ್ಷರ್ ಪಟೇಲ್ಗೆ ಚಾನ್ಸ್ ಸಿಗಬಹುದು.
ಇನ್ನುಳಿದಂತೆ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಬಹುದು. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ಗೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಭಾರತದ ಸಂಭಾವ್ಯ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಧ್ರುವ್ ಜುರೆಲ್, ಶುಭ್ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: IPL 2026: RCB ಈ ಇಬ್ಬರನ್ನು ತಂಡದಲ್ಲೇ ಉಳಿಸಿಕೊಳ್ಳುವಂತಿಲ್ಲ..!
Published On - 2:25 pm, Thu, 13 November 25