AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ದ್ವಿತೀಯ ಏಕದಿನಕ್ಕೆ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ XI

India playing XI vs South Africa 2nd ODI: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ 1 ಗಂಟೆಗೆ ನಡೆಯಲಿದೆ. ಈ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ನೋಡುವುದಾದರೆ...

IND vs SA: ದ್ವಿತೀಯ ಏಕದಿನಕ್ಕೆ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ: ಇಲ್ಲಿದೆ ಸಂಭಾವ್ಯ ಪ್ಲೇಯಿಂಗ್ XI
India Playing XI vs SA 2nd ODI
TV9 Web
| Edited By: |

Updated on:Oct 09, 2022 | 9:11 AM

Share

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 0-1 ಅಂಕಗಳ ಹಿನ್ನಡೆ ಅನುಭವಿಸಿರುವ ಭಾರತ (India vs South Africa) ತಂಡ ಇದೀಗ ಮತ್ತೊಂದು ಸೆಣೆಸಾಟಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್​ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಏಕದಿನ ಪಂದ್ಯ ಆಯೋಜಿಸಲಾಗಿದ್ದು, ಟೀಮ್ ಇಂಡಿಯಾಕ್ಕೆ (Team India) ಇದು ಮಾಡು ಇಲ್ಲವೇ ಮಡಿ ಮ್ಯಾಚ್. ಇದರ ನಡುವೆ ಧವನ್ ಪಡೆಗೆ ಇಂಜುರಿ ಟೆನ್ಶನ್ ಕೂಡ ಶುರುವಾಗಿದ್ದು ಈಗಾಗಲೇ ದೀಪಕ್ ಚಹರ್ (Deepak Chahar) ಸರಣಿಯಿಂದ ಹೊರಬಿದ್ದಿದ್ದಾರೆ. ಇವರ ಜಾಗಕ್ಕೆ ವಾಷಿಂಗ್ಟನ್ ಸುಂದರ್ ಬಂದಿದ್ದಾರೆ. ಮೊದಲ ಏಕದಿನಕ್ಕೆ ಅಡ್ಡಿ ಪಡಿಸಿದ್ದ ವರುಣ ಇಂದುಕೂಡ ಕಾಡುವ ಲಕ್ಷಣಗಳಿವೆ. ಹೀಗಾಗಿ ಎಷ್ಟು ಓವರ್​ಗಳ ಪಂದ್ಯ ನಡೆಯುತ್ತೆ ಎಂಬ ಖಚಿತತೆ ಇಲ್ಲ. ಎಲ್ಲದಕ್ಕೂ ಭಾರತ ಸಿದ್ಧವಾಗಬೇಕಿದೆ. ಇದೀಗ ಎರಡನೇ ಪಂದ್ಯದಲ್ಲಿ ಗೆಲ್ಲಲೇ ಬೇಕಾಗಿರುವುದರಿಂದ ತಂಡದಲ್ಲಿ ಮುಖ್ಯ ಬದಲಾವಣೆ ನಿರೀಕ್ಷಿಸಲಾಗಿದೆ.

ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಬೇಕಾದ ಒತ್ತಡದಲ್ಲಿದ್ದಾರೆ. ಧವನ್ ನಾಯಕನ ಆಟ ಆಡಬೇಕಿದೆ. ರುತುರಾಜ್ ಗಾಯಕ್ವಾಡ್ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗದಲ್ಲಿ ಇಂದು ರಜತ್ ಪಟಿದಾರ್ ಆಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ.

ಇತ್ತೀಚೆಗಷ್ಟೆ ನ್ಯೂಜಿಲೆಂಡ್‌ ಎ ವಿರುದ್ಧದ ಮೊದಲ ಪಂದ್ಯದಲ್ಲಿ 176 ರನ್‌ ಸಿಡಿಸಿದ್ದ ಪಟಿದಾರ್‌ ಮೂರನೇ ಪಂದ್ಯದಲ್ಲಿ ಅಜೇಯ 109 ರನ್ ಬಾರಿಸಿದ್ದರು. ಅದಲ್ಲದೆ, ಮಧ್ಯಪ್ರದೇಶ ತಂಡದ ರಣಜಿ ಟ್ರೋಫಿ ಗೆಲುವಿನಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಆಕರ್ಷಕ 122 ರನ್‌ ಬಾರಿಸುವ ಮೂಲಕ ರಜತ್‌ ಗಮನಸೆಳೆದಿದ್ದರು. ಹೀಗಾಗಿ ಇವರು ಇಂದಿನ ಪಂದ್ಯದ ಮೂಲಕ ಟೀಮ್ ಇಂಡಿಯಾಕ್ಕೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ
Image
IND vs SA 2nd ODI: ಇಂದು ಭಾರತ- ಆಫ್ರಿಕಾ ಎರಡನೇ ಏಕದಿನ: ಧವನ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯ
Image
ಮೊದಲ ಎಸೆತದಲ್ಲೇ ಸೂರ್ಯ- ಕಾರ್ತಿಕ್ ವಿಕೆಟ್ ಪಡೆದಿದ್ದ ಐರ್ಲೆಂಡ್ ವೇಗಿ ಟಿ20 ವಿಶ್ವಕಪ್​ನಿಂದ ಔಟ್..!
Image
Babar Azam: ಭರ್ಜರಿ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಪಾಕ್ ನಾಯಕ ಬಾಬರ್..!
Image
‘ರನ್ ಗಳಿಸುತ್ತಿದ್ದೇನೆ, ತೂಕ ಕಡಿಮೆ ಮಾಡಿಕೊಂಡಿದ್ದೇನೆ.. ಆದರೆ ಅವಕಾಶ ಸಿಗುತ್ತಿಲ್ಲ’; ಪೃಥ್ವಿ ಶಾ ಅಸಮಾದಾನ

ಇಶಾನ್ ಕಿಶನ್​ಗೆ ಮತ್ತೊಂದು ಅವಕಾಶ ನೀಡಬಹುದು. ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಮಾತ್ರ ಕಳೆದ ಪಂದ್ಯದಲ್ಲಿ ತಂಡಕ್ಕೆ ನೆರವಾಗಿದ್ದರು. ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಲಯ ಕಂಡುಕೊಳ್ಳಬೇಕಿದೆ.

ಅಂತೆಯೆ ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಸ್ಪಿನ್ ಅಷ್ಟೊಂದು ಕೆಲಸ ಮಾಡಿಲ್ಲ. ಬಿಷ್ಟೋಯಿ ಕೊಂಚ ದುಬಾರಿ ಕೂಡ ಆಗಿದ್ದರು. ಹೀಗಾಗಿ ಇವರ ಬದಲು ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಸುಂದರ್​ ಆಡಿದರೆ ಟೀಮ್ ಇಂಡಿಯಾದ ಬ್ಯಾಟಿಂಗ್​ ವಿಭಾಗ ಕೂಡ ಬಲಿಷ್ಠವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1:30ಕ್ಕೆ ಆರಂಭವಾಗಲಿದ್ದು, ಪಂದ್ಯದ ಟಾಸ್ 1 ಗಂಟೆಗೆ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು. ಚಂದಾದಾರಿಕೆಯೊಂದಿಗೆ Hotstar ನಲ್ಲಿ ಪಂದ್ಯದ ಆನ್‌ಲೈನ್ ಲೈವ್ ಸ್ಟ್ರೀಮಿಂಗ್ ಅನ್ನು ನೋಡಬಹುದು. ಇದಲ್ಲದೆ, ಪಂದ್ಯದ ಲೈವ್ ನವೀಕರಣಗಳನ್ನು tv9kannada.com ನಲ್ಲಿಯೂ ಓದಬಹುದು.

ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI:

ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ತೆಂಬಾ ಬವುಮಾ (ನಾಯಕ), ಆ್ಯಡೆನ್ ಮರ್ಕ್ರಮ್, ರೀಜಾ ಹೆಂಡ್ರಿಕ್ಸ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ.

Published On - 9:11 am, Sun, 9 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ