IND vs SA: 3ನೇ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ
India vs South africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟೆಸ್ಟ್ ಹಾಗೂ ಏಕದಿನ ಸರಣಿಗಳು ಮುಗಿದಿವೆ. ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ ತಂಡ 2-0 ಅಂತರದಿಂದ ಗೆದ್ದುಕೊಂಡರೆ, ಏಕದಿನ ಸರಣಿಯನ್ನು ಟೀಮ್ ಇಂಡಿಯಾ 2-1 ಅಂತರದಿಂದ ವಶಪಡಿಸಿಕೊಂಡಿದೆ. ಇದೀಗ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯುತ್ತಿದೆ.

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯವು ನಾಳೆ (ಡಿ.14) ನಡೆಯಲಿದೆ. ಧರ್ಮಶಾಲಾದ ಹೆಚ್ಪಿಸಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯದಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಏಕೆಂದರೆ ಮುಲ್ಲನ್ಪುರ್ನಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯವಾಗಿ ಸೋಲನುಭವಿಸಿದೆ. ಹೀಗಾಗಿ ಈ ಬಾರಿ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಅದರಂತೆ ಕಳೆದ ಎರಡು ಮ್ಯಾಚ್ಗಳಲ್ಲೂ ವಿಫಲರಾಗಿರುವ ಶುಭ್ಮನ್ ಗಿಲ್ ಬದಲಿಗೆ ಸಂಜು ಸ್ಯಾಮ್ಸನ್ ಅವಕಾಶ ನೀಡಬಹುದು.
ಇಲ್ಲಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಾಣಿಸಿಕೊಂಡರೆ, ಮೂರನೇ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಣಕ್ಕಿಳಿದರೆ, ಆಲ್ರೌಂಡರ್ಗಳಾಗಿ ಅಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆಯಲಿದ್ದಾರೆ. ಇನ್ನು ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಅವರನ್ನು ಮುಂದುವರೆಸಲಿದ್ದಾರೆ.
ಆದರೆ ಈ ಬಾರಿ ಅಕ್ಷರ್ ಪಟೇಲ್ ಅವರನ್ನು ಕೈ ಬಿಟ್ಟು ಕುಲ್ದೀಪ್ ಯಾದವ್ ಅಥವಾ ಹರ್ಷಿತ್ ರಾಣಾಗೆ ಚಾನ್ಸ್ ನೀಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಅಕ್ಷರ್ ಪಟೇಲ್ ಕಡೆಯಿಂದ ಕಳೆರಡು ಪಂದ್ಯಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಕುಲ್ದೀಪ್ ಅಥವಾ ಹರ್ಷಿತ್ಗೆ ಚಾನ್ಸ್ ನೀಡಬಹುದು.
ಇಲ್ಲಿ ಕುಲ್ದೀಪ್ ಯಾದವ್ ಅನುಭವಿ ಆಟಗಾರನಾಗಿರುವ ಕಾರಣ ಅವರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ. ಇನ್ನುಳಿದಂತೆ ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್ ಬೌಲರ್ಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎರಡನೇ ಟಿ20 ಪಂದ್ಯಕ್ಕಾಗಿ ಟೀಮ್ ಇಂಡಿಯಾದ ಸಂಭವನೀಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ಅಭಿಷೇಕ್ ಶರ್ಮಾ
- ಸಂಜು ಸ್ಯಾಮ್ಸನ್
- ತಿಲಕ್ ವರ್ಮಾ
- ಸೂರ್ಯಕುಮಾರ್ ಯಾದವ್ (ನಾಯಕ)
- ಜಿತೇಶ್ ಶರ್ಮಾ (ವಿಕೆಟ್ ಕೀಪರ್)
- ಹಾರ್ದಿಕ್ ಪಾಂಡ್ಯ
- ಶಿವಂ ದುಬೆ
- ವರುಣ್ ಚಕ್ರವರ್ತಿ
- ಅರ್ಷ್‌ದೀಪ್ ಸಿಂಗ್
- ಜಸ್ಪ್ರೀತ್ ಬುಮ್ರಾ
- ಕುಲ್ದೀಪ್ ಯಾದವ್.
ಇದನ್ನೂ ಓದಿ: IPL 2026: ಮೊದಲ ಸುತ್ತಿನಲ್ಲಿ ಹರಾಜಾಗಲಿರುವ 7 ಆಲ್ರೌಂಡರ್ಗಳು ಇವರೇ
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.
