AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ನಾವು ಗೆದ್ದೇ ಗೆಲ್ಲುತ್ತೇವೆ ಎಂದಿದ್ದ ಸುಂದರ್ ಶೂನ್ಯಕ್ಕೆ ಔಟ್

India's Lords Test Collapse: ಲಾರ್ಡ್ಸ್‌ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ಸುಲಭ ಗುರಿಯನ್ನು ಬೆನ್ನಟ್ಟಲು ವಿಫಲವಾಗಿದೆ. 193 ರನ್‌ಗಳ ಗುರಿಯನ್ನು ಬೆನ್ನಟ್ಟುವಾಗ ಭಾರತ ತಂಡ 100 ರನ್‌ಗಳನ್ನು ಗಳಿಸುವ ಮುನ್ನವೇ 7 ವಿಕೆಟ್‌ಗಳನ್ನು ಕಳೆದುಕೊಂಡಿದೆ. ವಾಷಿಂಗ್ಟನ್ ಸುಂದರ್ ಖಾತೆ ತೆರೆಯದೆ ಔಟಾಗಿದ್ದಾರೆ. ಆದರೂ, ಅವರು ಬೌಲಿಂಗ್‌ನಲ್ಲಿ 4 ವಿಕೆಟ್‌ಗಳನ್ನು ಪಡೆದು ಉತ್ತಮ ಪ್ರದರ್ಶನ ನೀಡಿದರು.

IND vs ENG: ನಾವು ಗೆದ್ದೇ ಗೆಲ್ಲುತ್ತೇವೆ ಎಂದಿದ್ದ ಸುಂದರ್ ಶೂನ್ಯಕ್ಕೆ ಔಟ್
Washington Sundar
ಪೃಥ್ವಿಶಂಕರ
|

Updated on: Jul 14, 2025 | 5:32 PM

Share

ಲಾರ್ಡ್ಸ್‌ನಲ್ಲಿ (Lords Test) ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯವನ್ನು ಭಾರತ ಸುಲಭವಾಗಿ ಗೆಲ್ಲುತ್ತದೆ ಎಂದು ತೋರುತ್ತಿತ್ತು. ಏಕೆಂದರೆ ಭಾರತದ ಗೆಲುವಿಗೆ ಬೇಕಾಗಿದಿದ್ದು ಕೇವಲ 193 ರನ್‌ ಮಾತ್ರ. ಆದರೆ ಈ ಸುಲಭ ಗುರಿಯನ್ನು ಭಾರತಕ್ಕೆ ಬೆನ್ನಟ್ಟಲು ಸಾಧ್ಯವಿಲ್ಲ ಎಂದು ತೋರುತ್ತಿದೆ. ಏಕೆಂದರೆ ತಂಡ 100 ರನ್​ಗಳ ಗಡಿ ದಾಟುವುದಕ್ಕೂ ಮುನ್ನವೇ ಪ್ರಮುಖ 7 ವಿಕೆಟ್‌ಗಳನ್ನು ಕಳೆದುಕೊಂಡಿದೆ. ಇದರಿಂದಾಗಿ, ಇಂಗ್ಲೆಂಡ್ ಈ ಪಂದ್ಯವನ್ನು ಸಂಪೂರ್ಣವಾಗಿ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ನಾಲ್ಕನೇ ದಿನದ ಆಟ ಮುಗಿದಾಗ, ಭಾರತ 4 ವಿಕೆಟ್‌ಗಳ ನಷ್ಟಕ್ಕೆ 58 ರನ್‌ಗಳನ್ನು ಗಳಿಸಿತ್ತು. ಆದರೆ ಐದನೇ ದಿನದಾಟ ಆರಂಭವಾಗಿ ಕೆಲವೇ ನಿಮಿಷಗಳಲ್ಲಿ ತಂಡದ ಮೊತ್ತ 86 ರನ್ ಆಗುವಷ್ಟರಲ್ಲಿ ಮತ್ತೆ 3 ಪ್ರಮುಖ ವಿಕೆಟ್​ಗಳು ಪತನವಾದವು. ಅದರಲ್ಲೂ ಲಾರ್ಡ್ಸ್‌ ಟೆಸ್ಟ್ ಪಂದ್ಯವನ್ನು ಭಾರತ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದ ವಾಷಿಂಗ್ಟನ್ ಸುಂದರ್ (Washington Sundar), ಖಾತೆ ತೆರೆಯದೆ ಔಟಾಗಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದ ಸುಂದರ್

ವಾಸ್ತವವಾಗಿ ನಾಲ್ಕನೇ ದಿನದ ಆಟ ಮುಗಿದ ನಂತರ ವಾಷಿಂಗ್ಟನ್ ಸುಂದರ್ ಸ್ಕೈ ಸ್ಪೋರ್ಟ್ಸ್‌ ಜೊತೆ ಮಾತನಾಡುತ್ತ, ‘ನಾಳೆ ಭಾರತ ಖಂಡಿತವಾಗಿಯೂ ಗೆಲ್ಲುತ್ತದೆ ಎಂದು ಹೇಳಿದ್ದರು. ಆದರೆ ಅಂತಹ ದಿಟ್ಟ ಹೇಳಿಕೆ ನೀಡಿದ್ದ ವಾಷಿಂಗ್ಟನ್ ಸುಂದರ್, ಖಾತೆ ತೆರೆಯವುದಕ್ಕೂ ಮುನ್ನವೇ ಟೆಂಟ್‌ಗೆ ಮರಳಿದರು. ರಿಷಭ್ ಪಂತ್ ಮತ್ತು ಕೆಎಲ್ ರಾಹುಲ್ ಅವರ ವಿಕೆಟ್‌ಗಳ ಪತನದ ನಂತರ ಬ್ಯಾಟಿಂಗ್​ಗೆ ಬಂದಿದ್ದ ಸುಂದರ್ ಅವರ ಮೇಲೆ ನಿರೀಕ್ಷೆಗಳಿದ್ದವು. ಆದರೆ ಅವರು ನಿರೀಕ್ಷೆಗಳನ್ನು ನಿರಾಸೆಗೊಳಿಸಿದರು. ಇದರಿಂದಾಗಿ, ಭಾರತ ಸೋಲುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ವಾಷಿಂಗ್ಟನ್ ಸುಂದರ್ 4 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ಔಟಾದರು.

4 ವಿಕೆಟ್ ಉರುಳಿಸಿದ ಸುಂದರ್

ವಾಷಿಂಗ್ಟನ್ ಸುಂದರ್ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್​ನಲ್ಲಿ ಖಾತೆ ತೆರೆಯದೆ ಔಟಾಗಿರಬಹುದು. ಆದರೆ ಬೌಲಿಂಗ್‌ನಲ್ಲಿ ನಿಜಕ್ಕೂ ಒಳ್ಳೆಯ ಪ್ರದರ್ಶನ ನೀಡಿದರು. ಇಂಗ್ಲೆಂಡ್‌ ತಂಡದ ಪ್ರಮುಖ 4 ವಿಕೆಟ್ ಉರುಳಿಸುವ ಮೂಲಕ ಆಂಗ್ಲರನ್ನು 200 ರನ್​ಗಳ ಗಡಿ ದಾಟದಂತೆ ನೋಡಿಕೊಂಡರು. ಮೊದಲ ಇನ್ನಿಂಗ್ಸ್​ನಲ್ಲಿ ಯಾವುದೇ ವಿಕೆಟ್ ಪಡೆಯದ ಸುಂದರ್, ಬ್ಯಾಟಿಂಗ್​ನಲ್ಲಿ 23 ರನ್​ಗಳ ಕಾಣಿಕೆ ನೀಡಿದ್ದರು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಬೌಲಿಂಗ್‌ನಲ್ಲಿ ಮಿಂಚಿದ್ದ ಅವರಿಗೆ ಬ್ಯಾಟಿಂಗ್​ನಲ್ಲಿ ಯಾವುದೇ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ