Team India: ಶ್ರೀಲಂಕಾ ವಿರುದ್ದ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ
ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ.

ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂ ನಡೆಯುತ್ತಿರುವ ಅಂತಿಮ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ದ ಭಾರತ ಕೇವಲ 81 ರನ್ಗಳಿಸಿ ಹೀನಾಯ ದಾಖಲೆ ನಿರ್ಮಿಸಿದೆ. ಶ್ರೀಲಂಕಾ ವಿರುದ್ಧದ ಟಿ 20 ಪಂದ್ಯಗಳಲ್ಲಿ ಇದು ಭಾರತದ ಅತ್ಯಂತ ಕಡಿಮೆ ಸ್ಕೋರ್. ಹಾಗೆಯೇ ಟಿ 20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಮೂರನೇ ಅತಿ ಕಡಿಮೆ ಸ್ಕೋರ್ ಆಗಿದೆ. 2008 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 74 ರನ್ಗಳಿಸಿದ್ದು ಅತ್ಯಂತ ಹೀನಾಯ ದಾಖಲೆಯಾಗಿದೆ. ಇದಾಗ್ಯೂ ಭಾರತ ಶ್ರೀಲಂಕಾ ವಿರುದ್ದ ಟಿ20 ಕ್ರಿಕೆಟ್ನಲ್ಲಿ 100 ಕ್ಕಿಂತ ಕಡಿಮೆ ಮೊತ್ತ ದಾಖಲಿಸಿರಲಿಲ್ಲ. ಇದೀಗ 81 ರನ್ಗಳಿಸುವ ಮೂಲಕ ಟೀಮ್ ಇಂಡಿಯಾ ಕಳಪೆ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಶಿಖರ್ ಧವನ್ ಶೂನ್ಯಕ್ಕೆ ಔಟಾಗುವ ಮೂಲಕ ಮೊದಲಿಗರಾಗಿ ಹೊರ ನಡೆದರು. ಇನ್ನು 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 9 ರನ್ ಬಾರಿಸಿ ರಮೇಶ್ ಮೆಂಡಿಸ್ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ (0) ಹಾಗೂ ರುತುರಾಜ್ ಗಾಯಕ್ವಾಡ್ (14) ಅವರನ್ನು ಎಲ್ಬಿ ಬಲೆಗೆ ಬೀಳಿಸಿ ಹಸರಂಗ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು.
ಇನ್ನು ಶನಕಾ ಎಸೆದ ಓವರ್ನಲ್ಲಿ ನಿತೀಶ್ ರಾಣಾ (6) ಕ್ಯಾಚ್ ನೀಡಿ ಹೊರನಡೆದರು. ನಾಟಕೀಯ ಕುಸಿತಕ್ಕೊಳಗಾದ ಟೀಮ್ ಇಂಡಿಯಾ 36 ರನ್ಗಳಿಸುವಷ್ಟರಲ್ಲಿ ಪ್ರ,ಮುಖ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಜೊತೆಗೂಡಿದ ಭುವನೇಶ್ವರ್ ಕುಮಾರ್ ಹಾಗೂ ಕುಲ್ದೀಪ್ ಯಾದವ್ ಒಂದಷ್ಟು ಪ್ರತಿರೋಧ ತೋರಿದರು. ಅದರಂತೆ ತಂಡದ ಮೊತ್ತ 50 ರ ಗಡಿದಾಟಿತು.
ಈ ವೇಳೆ 16 ರನ್ಗಳಿಸಿದ್ದ ಭುವಿ ಕೂಡ ಹಸರಂಗ ಎಸೆತದಲ್ಲಿ ಔಟ್ ಆದರು. ಇದಾಗ್ಯೂ ಮತ್ತೊಂದೆಡೆ ಗಟ್ಟಿಯಾಗಿ ನೆಲೆಯೂರಿದ ಕುಲ್ದೀಪ್ ಯಾದವ್ 23 ರನ್ ಕಲೆಹಾಕುವ ಮೂಲಕ 20 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ ತಂಡದ ಮೊತ್ತವನ್ನು 81 ಕ್ಕೆ ತಂದು ನಿಲ್ಲಿಸಿದರು. ಲಂಕಾ ಪರ ಹಸರಂಗ 4 ವಿಕೆಟ್ ಉರುಳಿಸಿ ಮಿಂಚಿದರೆ, ದುಸನ್ ಶನಕಾ 2 ವಿಕೆಟ್ ಕಬಳಿಸಿದರು.
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ (Team India Playing 11) ಹೀಗಿದೆ: ಶಿಖರ್ ಧವನ್ (ನಾಯಕ), ದೇವದತ್ ಪಡಿಕ್ಕಲ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಭುವನೇಶ್ವರ್ ಕುಮಾರ್, ಸಂದೀಪ್ ವಾರಿಯರ್, ಚೇತನ್ ಸಕರಿಯಾ, ರಾಹುಲ್ ಚಹರ್
ಇದನ್ನೂ ಓದಿ: ಮದ್ಯಪಾನ ಮಾಡಿ ಶತಕ ಸಿಡಿಸಿದ್ದ ಗ್ಯಾರಿ ಸೋಬರ್ಸ್..!
ಇದನ್ನೂ ಓದಿ: ಸೂರ್ಯಕುಮಾರ್ ಯಾದವ್ಗೆ ಅವಕಾಶ ಕೈತಪ್ಪುವ ಆತಂಕ
(india’s lowest t20 score against sri lanka)
