AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕರುಣ್ ನಾಯರ್ ಅರ್ಧಶತಕ; 224 ರನ್​ಗಳಿಗೆ ಟೀಂ ಇಂಡಿಯಾ ಆಲೌಟ್

Team India Crumbles at The Oval: ಓವಲ್‌ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ, ಎರಡನೇ ದಿನದ ಆರಂಭದಲ್ಲಿಯೇ ತನ್ನೇಲ್ಲ ವಿಕೆಟ್ ಕಳೆದುಕೊಂಡು 224 ರನ್‌ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ. ಮೊದಲ ದಿನ 204/6 ರನ್‌ಗಳಲ್ಲಿದ್ದ ಭಾರತ, ಎರಡನೇ ದಿನ ಕೇವಲ 5.4 ಓವರ್‌ಗಳಲ್ಲಿ 20 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿತು. ಕರುಣ್ ನಾಯರ್ 57 ರನ್ ಗಳಿಸಿದರು. ಇಂಗ್ಲೆಂಡ್ ವೇಗಿ ಗಸ್ ಅಟ್ಕಿನ್ಸನ್ 5 ವಿಕೆಟ್ ಪಡೆದರು.

IND vs ENG: ಕರುಣ್ ನಾಯರ್ ಅರ್ಧಶತಕ; 224 ರನ್​ಗಳಿಗೆ ಟೀಂ ಇಂಡಿಯಾ ಆಲೌಟ್
Ind Vs Eng
ಪೃಥ್ವಿಶಂಕರ
|

Updated on:Aug 01, 2025 | 4:53 PM

Share

ಓವಲ್ ಟೆಸ್ಟ್ (Oval Test) ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ (Team India), ಎರಡನೇ ದಿನದಾಟದ ಮೊದಲ ಸೆಷನ್​ನಲ್ಲಿ ಕೇವಲ 20 ರನ್​ಗಳಿಗೆ 4 ವಿಕೆಟ್‌ಗಳನ್ನು ಕಳೆದುಕೊಳ್ಳುವ ಮೂಲಕ 224 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. 204 ರನ್​ಗಳಿಗೆ 6 ವಿಕೆಟ್ ಕಳೆದುಕೊಂಡು ಮೊದಲ ದಿನದಾಟವನ್ನು ಮುಗಿಸಿದ್ದ ಟೀಂ ಇಂಡಿಯಾ, ಎರಡನೇ ದಿನದಾಟದಲ್ಲಿ ಕೇವಲ 5.4 ಓವರ್​ ಬ್ಯಾಟ್ ಮಾಡಿ 20 ರನ್​ಗಳಿಗೆ ಎಲ್ಲಾ 4 ವಿಕೆಟ್‌ಗಳನ್ನು ಕಳೆದುಕೊಂಡಿತು. ಭಾರತದ ಪರ ಕರುಣ್ ನಾಯರ್ (Karun Nair) ಅತ್ಯಧಿಕ 57 ರನ್ ಬಾರಿಸಿದರೆ, ಇಂಗ್ಲೆಂಡ್ ಪರ ವೇಗಿ ಗಸ್ ಅಟ್ಕಿನ್ಸನ್ 5 ವಿಕೆಟ್​ಗಳ ಗೊಂಚಲು ಪಡೆದರು.

ಕರುಣ್ ನಾಯರ್ ಅರ್ಧಶತಕ

ಮೇಲೆ ಹೇಳಿದಂತೆ ಎರಡನೇ ದಿನದಾಟದಲ್ಲಿ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅರ್ಧ ಗಂಟೆಯೊಳಗೆ ಇಡೀ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 224 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ದಿನದಾಟದಂತ್ಯಕ್ಕೆ ಕರುಣ್ ನಾಯರ್ 98 ಎಸೆತಗಳಲ್ಲಿ 52 ರನ್‌ ಮತ್ತು ವಾಷಿಂಗ್ಟನ್ ಸುಂದರ್ 45 ಎಸೆತಗಳಲ್ಲಿ 19 ರನ್‌ ಬಾರಿಸಿ ಅಜೇಯರಾಗಿ ಉಳಿದಿದ್ದರು. ಆದರೆ ಎರಡನೇ ದಿನದಾಟದಲ್ಲಿ ಜೋಶ್ ಟಂಗ್ ಮೊದಲು ಕರುಣ್ ನಾಯರ್ ಅವರನ್ನು ಎಲ್ಬಿಡಬ್ಲ್ಯೂ ಬಲೆಗೆ ಕೆಡವಿದರು. ಅಂತಿಮವಾಗಿ ಕರುಣ್ 109 ಎಸೆತಗಳಲ್ಲಿ ಎಂಟು ಬೌಂಡರಿಗಳ ಸಹಾಯದಿಂದ 57 ರನ್ ಬಾರಿಸಿ ಪೆವಿಲಿಯನ್‌ಗೆ ಮರಳಿದರು.

7ನೇ ವಿಕೆಟ್​ಗೆ 65 ರನ್ ಜೊತೆಯಾಟ

ಇದರ ನಂತರ, ಗಸ್ ಅಟ್ಕಿನ್ಸನ್ ವಾಷಿಂಗ್ಟನ್ ಸುಂದರ್ ಅವರನ್ನು ಬಲಿಪಶುವನ್ನಾಗಿ ಮಾಡಿದರು. ಸುಂದರ್ 55 ಎಸೆತಗಳಲ್ಲಿ 26 ರನ್ ಗಳಿಸಿ ಔಟಾದರು. ಏಳನೇ ವಿಕೆಟ್‌ಗೆ ಇಬ್ಬರ ನಡುವೆ 65 ರನ್‌ಗಳ ಪಾಲುದಾರಿಕೆ ಇತ್ತು. ಇದರ ನಂತರ, ಬ್ಯಾಟಿಂಗ್‌ಗೆ ಬಂದ ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ಖಾತೆ ತೆರೆಯದೆಯೇ ಔಟಾದರು. ಆಕಾಶ್ ದೀಪ್ ಖಾತೆ ತೆರೆಯದೆ ಅಜೇಯರಾಗಿ ಉಳಿದರು. ಇಂಗ್ಲೆಂಡ್ ಪರ, ಗಸ್ ಅಟ್ಕಿನ್ಸನ್ ಐದು ವಿಕೆಟ್‌ಗಳನ್ನು ಪಡೆದರೆ, ಜೋಶ್ ಟಂಗ್ ಮೂರು ವಿಕೆಟ್‌ಗಳನ್ನು ಪಡೆದರು. ಉಳಿದಂತೆ ಕ್ರಿಸ್ ವೋಕ್ಸ್ ಒಂದು ವಿಕೆಟ್ ಪಡೆದರು.

ಇಂಗ್ಲೆಂಡ್​ಗೆ ಬಿಗ್ ಶಾಕ್; ಗಾಯದಿಂದ ಐದನೇ ಟೆಸ್ಟ್​ನಿಂದ ಹೊರ ಹೋದ ಖ್ಯಾತ ಬೌಲರ್

ಭಾರತದ ಕಳಪೆ ಬ್ಯಾಟಿಂಗ್

ಮೊದಲ ದಿನದಾಟದಲ್ಲಿ ಕೆಎಲ್ ರಾಹುಲ್ 40 ಎಸೆತಗಳನ್ನು ಆಡಿ 14 ರನ್ ಗಳಿಸಿ ಔಟಾದರೆ, ನಾಯಕ ಗಿಲ್ 34 ಎಸೆತಗಳಲ್ಲಿ 21 ರನ್ ಗಳಿಸಿ ರನೌಟ್ ಆದರು. ಸಾಯಿ ಸುದರ್ಶನ್ 108 ಎಸೆತಗಳನ್ನು ಆಡಿ 38 ರನ್ ಗಳಿಸಿ ಔಟಾದರೆ, ಜುರೆಲ್ ಮತ್ತು ಸುಂದರ್ ಕೂಡ ಸೆಟ್ ಆದ ನಂತರ ವಿಕೆಟ್ ಒಪ್ಪಿಸಿದರು. ಟೀಂ ಇಂಡಿಯಾದ ಕೊನೆಯ ಮೂವರು ಬ್ಯಾಟ್ಸ್‌ಮನ್‌ಗಳು ತಮ್ಮ ಖಾತೆಯನ್ನು ಸಹ ತೆರೆಯಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Fri, 1 August 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ