
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಏಕದಿನ ಪಂದ್ಯ ನಾಳೆ (ಅ.19) ನಡೆಯಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಸರಣಿ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಮ್ಯಾಚ್ನಲ್ಲಿ ಆಸ್ಟ್ರೇಲಿಯಾ ತಂಡ 7 ವಿಕೆಟ್ಗಳ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ಟೀಮ್ ಇಂಡಿಯಾ ದ್ವಿತೀಯ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ ಅಸ್ತ್ರವನ್ನು ಪ್ರಯೋಗಿಸುವ ಸಾಧ್ಯತೆಯಿದೆ.
ಅದರಂತೆ ದ್ವಿತೀಯ ಏಕದಿನ ಪಂದ್ಯದಲ್ಲಿ ಹರ್ಷಿತ್ ರಾಣಾ ಬದಲಿಗೆ ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸಬಹುದು. ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕುಲ್ದೀಪ್ ಯಾದವ್ ಉತ್ತಮ ಸ್ಪಿನ್ ಮೋಡಿ ಮಾಡಿದ್ದರು. ಅಲ್ಲದೆ ಕಳೆದ ವೆಸ್ಟ್ ಇಂಡೀಸ್ ಸರಣಿಯಲ್ಲೂ ಉತ್ತಮ ಬೌಲಿಂಗ್ ಸಂಘಟಿಸಿದ್ದರು. ಇದಾಗ್ಯೂ ಅವರನ್ನು ಮೊದಲ ಪಂದ್ಯದಲ್ಲಿ ಕಣಕ್ಕಿಳಿಸಿರಲಿಲ್ಲ.
ಬದಲಾಗಿ ಹರ್ಷಿತ್ ರಾಣಾ ಅವರನ್ನು ಮೂರನೇ ವೇಗಿಯಾಗಿ ಆಡಿಸಲಾಗಿತ್ತು. ಆದರೆ ಹರ್ಷಿತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಅಡಿಲೇಡ್ ಪಂದ್ಯದಲ್ಲಿ ಹರ್ಷಿತ್ ಬದಲಿಗೆ ಕುಲ್ದೀಪ್ ಯಾದವ್ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.
ಇನ್ನುಳಿದಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಇನಿಂಗ್ಸ್ ಆರಂಭಿಸುವುದು ಖಚಿತ. ಹಾಗೆಯೇ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟರ್ ಬೀಸಲಿದ್ದಾರೆ.
ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇನ್ನು ಆಲ್ರೌಂಡರ್ಗಳಾಗಿ ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಕಣಕ್ಕಿಳಿಯಬಹುದು. ಹಾಗೆಯೇ ಬೌಲರ್ಗಳಾಗಿ ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಹಾಗೂ ಕುಲ್ದೀಪ್ ಯಾದವ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಇದನ್ನೂ ಓದಿ: ಈ ಒಂದು ದಾಖಲೆ ಮುರಿಯಲು ವಿರಾಟ್ ಕೊಹ್ಲಿಗೆ ಇದುವೇ ಕೊನೆಯ ಅವಕಾಶ
ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.