IND vs PAK: ಭಾರತ- ಪಾಕಿಸ್ತಾನ ರೋಚಕ ಕದನಕ್ಕೆ ಅಚ್ಚರಿಯ ಪ್ಲೇಯಿಂಗ್ XI ಪ್ರಕಟಿಸಿದ ಹರ್ಭಜನ್ ಸಿಂಗ್

| Updated By: Vinay Bhat

Updated on: Oct 20, 2022 | 8:49 AM

India Playing XI vs Pakistan: ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ ತಿಳಿಸಿದ್ದಾರೆ. ಇದರಲ್ಲಿ ಕೆಲವು ಅಚ್ಚರಿಯ ಆಯ್ಕೆಗಳು ಕೂಡ ಇದೆ.

IND vs PAK: ಭಾರತ- ಪಾಕಿಸ್ತಾನ ರೋಚಕ ಕದನಕ್ಕೆ ಅಚ್ಚರಿಯ ಪ್ಲೇಯಿಂಗ್ XI ಪ್ರಕಟಿಸಿದ ಹರ್ಭಜನ್ ಸಿಂಗ್
Harbhajan Singh and IND vs PAK
Follow us on

ಐಸಿಸಿ ಟಿ20 ವಿಶ್ವಕಪ್ 2022ರ (T20 World Cup) ಸೂಪರ್ 12 ಹಂತದ ಪಂದ್ಯಕ್ಕೆ ಅಕ್ಟೋಬರ್ 22 ರಂದು ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ನ್ಯೂಜಿಲೆಂಡ್ ವಿರುದ್ಧ ಸೆಣೆಸಾಟ ನಡೆಸಲಿದೆ. ಮುಂದಿನ ದಿನ ಅ. 23 ರಂದು ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (India vs Pakistan) ವಿರುದ್ಧ ಮೆಲ್ಬೋರ್ನ್‌ ಸ್ಟೇಡಿಯಂನಲ್ಲಿ ಆಡುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಇದಕ್ಕಾಗಿ ರೋಹಿತ್ ಪಡೆ ಈಗಾಗಲೇ ಮೆಲ್ಬೋರ್ನ್​ಗೆ ಪ್ರಯಾಣ ಬೆಳೆಸಿದೆ. ಇಂಡೋ- ಪಾಕ್ ಕದನದ ಮೇಲೆ ಇಡೀ ವಿಶ್ವದ ಕಣ್ಣಿದ್ದು ಕ್ರಿಕೆಟ್ ಪಂಡಿತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ (India Playing XI) ತಿಳಿಸಿದ್ದಾರೆ. ಇದರಲ್ಲಿ ಕೆಲವು ಅಚ್ಚರಿಯ ಆಯ್ಕೆಗಳು ಕೂಡ ಇದೆ.

ಹರ್ಭಜನ್ ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡುತ್ತಾ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಆಡುವ ಬಳಗ ಹೀಗಿದ್ದರೆ ಬಲಿಷ್ಠವಾಗಿರುತ್ತದೆ ಎಂದು ಹೇಳಿದ್ದಾರೆ. ಅಚ್ಚರಿ ಎಂದರೆ ಭಜ್ಜಿ ಪ್ರಕಟಿಸಿರುವ ತಂಡದಲ್ಲಿ ಹರ್ಷಲ್ ಪಟೇಲ್ ಹಾಗೂ ಆರ್. ಅಶ್ವಿನ್​ಗೆ ಸ್ಥಾನವಿಲ್ಲ. ”ನನಗನಿಸುವ ಪ್ರಕಾರ ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿ ಇರಲಿದ್ದಾರೆ. ಜೊತೆಗೆ ಯುಜ್ವೇಂದ್ರ ಚಹಲ್, ಅರ್ಶ್​ದೀಪ್ ಸಿಂಗ್, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ,” ಎಂದು ಹೇಳಿದ್ದಾರೆ.

”ಇವಿಷ್ಟು ನನ್ನ ಆಯ್ಕೆ. ಹರ್ಷಲ್ ಪಟೇಲ್​ಗೆ ಸ್ಥಾನ ಸಿಗುವುದು ಅನುಮಾನ. ದೀಪಕ್ ಹೂಡ ಹಾಗೂ ಆರ್. ಅಶ್ವಿನ್ ಅವರನ್ನು ಟೂರ್ನಿಯ ಮಧ್ಯದಲ್ಲಿ ಆಡಿಸಬಹುದು. ಆರಂಭದ ಕೆಲ ಪಂದ್ಯಗಳಿಗೆ ಭಾರತದ ಪ್ಲೇಯಿಂಗ್ ಇಲೆವೆನ್ ಈರೀತಿ ಇರಬಹುದು ಎಂಬುದು ನನ್ನ ಕಲ್ಪನೆ. ರಿಷಭ್ ಪಂತ್ ಬದಲು ದಿನೇಶ್ ಕಾರ್ತಿಕ್ ಹಾಗೂ ಆರ್. ಅಶ್ವಿನ್ ಬದಲು ಅಕ್ಷರ್ ಪಟೇಲ್ ಅವರನ್ನು ಮೊದಲ ಕೆಲವು ಪಂದ್ಯಗಳಲ್ಲಿ ಆಡಿಸಬಹುದು,” ಎಂದು ಹರ್ಭಜನ್ ಹೇಳಿದ್ದಾರೆ.

ಇದನ್ನೂ ಓದಿ
Shaheen Afridi: ಶಾಹಿನ್ ಅಫ್ರಿದಿ ಡೆಡ್ಲಿ ಯಾರ್ಕರ್​​​ಗೆ ಆಸ್ಪತ್ರೆ ಸೇರಿಕೊಂಡ ಅಫ್ಘಾನಿಸ್ತಾನ ಬ್ಯಾಟರ್: ವಿಡಿಯೋ ನೋಡಿ
T20 World Cup: ಟಿ20 ವಿಶ್ವಕಪ್​ ಇತಿಹಾಸದಲ್ಲಿ ಭಾರತ- ಪಾಕ್ ಮುಖಾಮುಖಿಯ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ
T20 World Cup 2022: ಟಿ20 ವಿಶ್ವಕಪ್​ನಲ್ಲಿನ ಈ 5 ದಾಖಲೆಗಳನ್ನು ಮುರಿಯುವುದು ಕಷ್ಟಸಾಧ್ಯ..!
Team India: ತಲೆಕೆಳಗಾದ ರೋಹಿತ್ ಶರ್ಮಾ ಲೆಕ್ಕಚಾರ: ಮೂವರಲ್ಲಿ ಯಾರಿಗೆ ಅವಕಾಶ..?

ಭಾರತ-ಪಾಕ್ ಪಂದ್ಯಕ್ಕೆ ಮಳೆ ಕಾಟ?:

ಭಾರತ- ಪಾಕ್ ಪಂದ್ಯ ನಡೆಯಲಿರುವ ಅಕ್ಟೋಬರ್ 23 ರಂದು ಮೆಲ್ಬೋರ್ನ್​ ಸುತ್ತ ಮುತ್ತ ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿ ತಿಳಿಸಿದೆ. ಹೀಗಾಗಿ ಈ ಪಂದ್ಯ ನಡೆಯುತ್ತಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಪ್ರಸ್ತುತ ಹವಾಮಾನ ವರದಿಯಂತೆ, ಒಂದು ವೇಳೆ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಫಲಿತಾಂಶ ಹೇಗೆ ನಿರ್ಧಾರವಾಗಲಿದೆ ಎಂಬ ಸಂಶಯ ಹಲವರಲ್ಲಿದೆ.

ಒಂದು ವೇಳೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ವೇಳೆ ಮಳೆ ಬಂದರೆ, ಓವರ್​ಗಳ ಕಡಿತದೊಂದಿಗೆ ಪಂದ್ಯವನ್ನು ಮುಂದುವರೆಸಲಾಗುತ್ತದೆ. ಇದಾಗ್ಯೂ ನಿರಂತರ ಮಳೆಯಿಂದ ಅಡಚಣೆ ಉಂಟಾದರೆ ಪಂದ್ಯದ ನಿಗದಿತ ಸಮಯದವರೆಗೂ ಕಾಯಲಾಗುತ್ತದೆ. ಇದರ ನಡುವೆ ಮಳೆ ನಿಂತರೆ 5 ಓವರ್​ಗಳ ಪಂದ್ಯವನ್ನು ಆಯೋಜಿಸಲಾಗುತ್ತದೆ. ಇಲ್ಲಿ ರದ್ದು ಮಾಡಿದರೆ ಮೀಸಲು ದಿನ ಇರುವುದಿಲ್ಲ. ಬದಲಾಗಿ ಉಭಯ ತಂಡಗಳಿಗೂ ತಲಾ 1 ಪಾಯಿಂಟ್ ನೀಡಲಾಗುತ್ತದೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳು ಐಸಿಸಿ ಟಿ20 ವಿಶ್ವಕಪ್​ ಮಹಾ ಟೂರ್ನಿಯಲ್ಲಿ ಇದುವರೆಗೆ ಒಟ್ಟು ಆರು ಬಾರಿ ಮುಖಾಮುಖಿಯಾಗಿವೆ. ಈ ಆರು ಪಂದ್ಯಗಳಲ್ಲಿ ಪೈಕಿ ಟೀಮ್ ಇಂಡಿಯಾ ಐದು ಪಂದ್ಯಗಳನ್ನು ಗೆಲ್ಲುವ ಮೂಲಕ ಪಾಕ್ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿದೆ. ಇನ್ನುಳಿದಂತೆ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಪಾಕ್ ಪಡೆ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಇಲ್ಲಿ ಭಾರತವೇ ಗೆಲ್ಲುವ ಫೆವರಿಟ್ ತಂಡವಾಗಿದೆ.

Published On - 8:49 am, Thu, 20 October 22