IND vs BAN Test: 18 ಸದಸ್ಯರ ತಂಡ: ಮೊದಲ ಟೆಸ್ಟ್ಗೆ ಭಾರತದ ಪ್ಲೇಯಿಂಗ್ XI ನಲ್ಲಿ ಯಾರಿಗೆ ಅವಕಾಶ?: ಇಲ್ಲಿದೆ ನೋಡಿ
India Playing XI vs BAN 1st Test: ಒಟ್ಟು 18 ಆಟಗಾರರಿಂದ ಕೂಡಿರುವ ಭಾರತ ತಂಡದಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ಗೆ ಕಣಕ್ಕಿಳಿಯುವವರು ಯಾರು ಎಂಬುದು ಕುತೂಹಲ ಕೆರಳಿಸಿದೆ. ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಬಗ್ಗೆ ನೋಡುವುದಾದರೆ...
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡ ಬಳಿಕ ಭಾರತ ತಂಡ ಇದೀಗ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವೆ ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಬುಧವಾರ ಡಿಸೆಂಬರ್ 14 ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಟೀಮ್ ಇಂಡಿಯಾ ಖಾಯಂ ನಾಯಕ ರೋಹಿತ್ ಶರ್ಮಾ ಇಂಜುರಿಗೆ ತುತ್ತಾದ ಪರಿಣಾಮ ಮೊದಲ ಟೆಸ್ಟ್ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಉಪ ನಾಯಕನಾಗಿದ್ದ ಕೆಎಲ್ ರಾಹುಲ್ (KL Rahul) ಕ್ಯಾಪ್ಟನ್ ಜವಾಬ್ದಾರಿ ನಿರ್ವಹಿಸಲಿದ್ದಾರೆ. ರೋಹಿತ್ ಜಾಗಕ್ಕೆ ಬದಲಿ ಆಟಗಾರನಾಗಿ ಅಭಿಮನ್ಯು ಈಶ್ವರನ್ ಆಯ್ಕೆ ಆಗಿದ್ದಾರೆ. ಏಕದಿನ ಸರಣಿಗೆ ಅಲಭ್ಯರಾಗಿದ್ದ ರಿಷಭ್ ಪಂತ್ ಕೂಡ ತಂಡ ಸೇರಿಕೊಂಡಿದ್ದಾರೆ. ಒಟ್ಟು 18 ಆಟಗಾರರಿಂದ ಕೂಡಿರುವ ಭಾರತ ತಂಡದಲ್ಲಿ ಮೊದಲ ಟೆಸ್ಟ್ಗೆ ಕಣಕ್ಕಿಳಿಯುವವರು ಯಾರು ಎಂಬುದು ಕುತೂಹಲ ಕೆರಳಿಸಿದೆ. ಸಂಭಾವ್ಯ ಪ್ಲೇಯಿಂಗ್ XI (India Playing XI) ಬಗ್ಗೆ ನೋಡುವುದಾದರೆ…
ರೋಹಿತ್ ಅಲಭ್ಯತೆಯಲ್ಲಿ ಶುಭ್ಮನ್ ಗಿಲ್ ಅವರು ನಾಯಕ ಕೆಎಲ್ ರಾಹುಲ್ ಜೊತೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಒತ್ತಡದಲ್ಲಿರುವ ಗಿಲ್ ಕಳೆದ 11 ಪಂದ್ಯಗಳಲ್ಲಿ 4 ಅರ್ಧಶತಕ ಸಿಡಿಸಿದ್ದಾರಷ್ಟೆ. ಆಸ್ಟ್ರೇಲಿಯಾ ವಿರುದ್ಧ ಗಳಿಸಿದ 91 ರನ್ ಗರಿಷ್ಠ ಸ್ಕೋರ್ ಆಗಿದೆ. ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಗಿಲ್ಗೆ ಇದೊಂದು ಉತ್ತಮ ಅವಕಾಶ. ಮೂರನೇ ಕ್ರಮಾಂಕದಲ್ಲಿ ಉಪ ನಾಯಕ ಚೇತೇಶ್ವರ್ ಪೂಜಾರ ಆಡಿದರೆ, ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಅಂತೆಯೆ ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಡುವುದು ಖಚಿತ.
ರವಿಚಂದ್ರನ್ ಅಶ್ವಿನ್ ಕೂಡ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಬಹುದು. ಟೀಮ್ ಇಂಡಿಯಾಕ್ಕೆ ಮತ್ತೊಬ್ಬ ಆಲ್ರೌಂಡರ್ನ ಅಗತ್ಯವಿರುವ ಕಾರಣ ರವೀಂದ್ರ ಜಡೇಜಾ ಸ್ಥಾನಕ್ಕೆ ಆಯ್ಕೆ ಆಗಿರುವ ಸೌರಭ್ ಕುಮಾರ್ ಈ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ನಿರೀಕ್ಷೆಯಿದೆ. ಇವರು ಇತ್ತೀಚೆಗಷ್ಟೆ ಮುಕ್ತಾಯಗೊಂಡ ಬಾಂಗ್ಲಾದೇಶ ಎ ವಿರುದ್ಧದ ಟೆಸ್ಟ್ನಲ್ಲಿ ಭಾರತ ಎ ಪರ ಬ್ಯಾಟಿಂಗ್ – ಬೌಲಿಂಗ್ನಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಇವರ ಜೊತೆಗೆ 12 ವರ್ಷಗಳ ನಂತರ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗಿರುವ ಜಯದೇವ್ ಉನಾದ್ಕಟ್ ಕೂಡ ಇದ್ದಾರೆ.
IND vs BAN: ಭಾರತ- ಬಾಂಗ್ಲಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ; ಬದಲಾದ ಸಮಯದಲ್ಲಿ ಪಂದ್ಯ ಆರಂಭ
ವೇಗಿಗಳಾಗಿ ಮೊಹಮ್ಮದ್ ಸಿರಾಜ್ಗೆ ಸ್ಥಾನ ಸಿಗುವುದು ಬಹುತೇಕ ಖಚಿತ. ಇವರು ಬಾಂಗ್ಲಾ ವಿರುದ್ಧದ ಏಕದಿನ ಸರಣಿಯಲ್ಲಿ ಕೂಡ ವಿಕೆಟ್ ಟೇಕಿಂಗ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ಉಮೇಶ್ ಯಾದವ್ ಮತ್ತೊಬ್ಬ ವೇಗದ ಬೌಲರ್ ಸ್ಥಾನ ಪಡೆಯಬಹುದು. ಕುಲ್ದೀಪ್ ಯಾದವ್ ಕೂಡ ಸ್ಪಿನ್ ಕೋಟಾದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. ವಿದೇಶದಲ್ಲಿ ಅಕ್ಷರ್ ಪಟೇಲ್ ಸಾಧನೆ ದೊಡ್ಡ ಮಟ್ಟದಲ್ಲಿ ಇಲ್ಲದ ಕಾರಣ ಅವರಿಗೆ ಸ್ಥಾನ ಅನುಮಾನ. ನವ್ದೀಪ್ ಸೈನಿ, ಶಾರ್ದೂಲ್ ಥಾಕೂರ್, ಕೆಎಸ್ ಭರತ್, ಶ್ರೇಯಸ್ ಅಯ್ಯರ್ ಬೆಂಚ್ ಕಾಯಬೇಕಾಗಿ ಬರಬಹುದು.
ಭಾರತ ಸಂಭಾವ್ಯ ಪ್ಲೇಯಿಂಗ್ XI: ಕೆಎಲ್ ರಾಹುಲ್ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಸೌರಭ್ ಕುಮಾರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:29 am, Tue, 13 December 22