India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ

India vs England 2nd Test Predicted Playing XI: ಶಾರ್ದುಲ್ ಠಾಕೂರ್ ಗೆ ಮಂಡಿರಜ್ಜು ಗಾಯವಾಗಿದ್ದು, ಈ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ನಾಳೆ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಸ್ಷಪ್ಟತೆಯಿಲ್ಲ.

India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ
India vs England
Follow us
| Updated By: ಝಾಹಿರ್ ಯೂಸುಫ್

Updated on: Aug 11, 2021 | 3:06 PM

ನಾಟಿಂಗ್‌ಹ್ಯಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತದ (Team India) ಗೆಲುವು ನಿಶ್ಚಿತವಾಗಿತ್ತು. ಆದರೆ ಅದೃಷ್ಟ ವರುಣನ ರೂಪದಲ್ಲಿ ಬಂದಿದ್ದರಿಂದ ಆತಿಥೇಯ ಇಂಗ್ಲೆಂಡ್ ತಂಡ ಸೋಲಿನಿಂದ ಪಾರಾಯಿತು. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ (England) 183 ರನ್​ಗಳಿಸಿದರೆ, 2ನೇ ಇನಿಂಗ್ಸ್​ನಲ್ಲಿ 303 ರನ್​ಗಳಿಗೆ ಆಲೌಟ್​ ಆಗಿತ್ತು. ಇದಕ್ಕೆ ಉತ್ತರವಾಗಿ ಭಾರತ ಮೊದಲ ಇನಿಂಗ್ಸ್​ನ್ನು 278 ರನ್​ಗಳೊಂದಿಗೆ ಅಂತ್ಯಗೊಳಿಸಿತ್ತು. ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿದ್ದ ಟೀಮ್ ಇಂಡಿಯಾ (Team India) 2ನೇ ಇನಿಂಗ್ಸ್​ನಲ್ಲಿ 209 ರನ್​ಗಳಿಸಬೇಕಿತ್ತು. ಇದಾಗಿ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತ ಒಂದು ವಿಕೆಟ್ ನಷ್ಟದೊಂದಿಗೆ 52 ರನ್​ಗಳಿಸಿತ್ತು. ಅದರಂತೆ ಗೆಲ್ಲಲು ಅಂತಿಮ ದಿನದಾಟದಲ್ಲಿ 157 ರನ್​ಗಳನ್ನು ಕಲೆಹಾಕಬೇಕಿತ್ತು. ಆದರೆ 5ನೇ ದಿನದಾಟ ಮಳೆಗೆ ಅಹುತಿಯಾದ ಕಾರಣ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಇದಾಗ್ಯೂ ಮೊದಲ ಟೆಸ್ಟ್​ನಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡಿ ಗಮನ ಸೆಳೆದಿರುವುದು ವಿಶೇಷ. ಹೀಗಾಗಿಯೇ 2ನೇ ಟೆಸ್ಟ್​ನಲ್ಲಿ ತಂಡದಲ್ಲಿ ಬದಲಾವಣೆ ಕಾಣಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಮೂಡಿದೆ.

ಏಕೆಂದರೆ ಮೊದಲ ಟೆಸ್ಟ್​ನಲ್ಲಿ ಭಾರತ ನಾಲ್ವರು ವೇಗದ ಬೌಲರುಗಳೊಂದಿಗೆ ಕಣಕ್ಕಿಳಿದಿತ್ತು. ಅದರಲ್ಲೂ ಅನುಭವಿ ರವಿಚಂದ್ರನ್ ಅಶ್ವಿನ್ ಅವರನ್ನು ಹೊರಗಿಡಲಾಗಿತ್ತು. ಇದೀಗ ಲಾರ್ಡ್ಸ್​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್​ನಲ್ಲಿ ಅನುಭವಕ್ಕೆ ಮಣೆಹಾಕುವ ಸಾಧ್ಯತೆಯಿದೆ. ಇದರಿಂದ ತಂಡದಿಂದ ಯಾರು ಹೊರಬೀಳಲಿದ್ದಾರೆ ಎಂಬುದೇ ಪ್ರಶ್ನೆಯಾಗಿದೆ. ಏಕೆಂದರೆ ಮೊದಲ ಪಂದ್ಯದಲ್ಲಿ ಶಾರ್ದುಲ್ ಠಾಕೂರ್ ಹಾಗೂ ಮೊಹಮ್ಮದ್ ಸಿರಾಜ್ ಕಣಕ್ಕಿಳಿದಿದ್ದರು. ಈ ಇಬ್ಬರು ಉತ್ತಮ ಬೌಲಿಂಗ್ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಗಿದ್ದರು. ಇನ್ನೊಂದೆಡೆ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ 2ನೇ ಪಂದ್ಯದಲ್ಲೂ ಸ್ಥಾನ ಪಡೆಯುವುದು ಖಚಿತ.

ಶಾರ್ದುಲ್ ಮತ್ತು ಸಿರಾಜ್ ಬದಲಿಗೆ ಅಶ್ವಿನ್ ಮತ್ತು ಇಶಾಂತ್! ಶಾರ್ದುಲ್ ಠಾಕೂರ್ ಗೆ ಮಂಡಿರಜ್ಜು ಗಾಯವಾಗಿದ್ದು, ಈ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ನಾಳೆ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಸ್ಷಪ್ಟತೆಯಿಲ್ಲ. ಶಾರ್ದುಲ್ ತಂಡದಿಂದ ಹೊರಗುಳಿದರೆ, ಅವರ ಸ್ಥಾನದಲ್ಲಿ ಅಶ್ವಿನ್ ಕಣಕ್ಕಿಳಿಯಬಹುದು. ಇದಲ್ಲದೇ, ಅನುಭವಿ ವೇಗದ ಬೌಲರ್ ಇಶಾಂತ್ ಶರ್ಮಾ ಅವರು ಆಯ್ಕೆಗಾಗಿ ಲಭ್ಯರಿದ್ದು, ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕರೆ, ಮೊಹಮ್ಮದ್ ಸಿರಾಜ್ ಸ್ಥಾನ ಕಳೆದುಕೊಳ್ಳಬಹುದು. ಏಕೆಂದರೆ ಇಶಾಂತ್ ಶರ್ಮಾ 2014 ರಲ್ಲಿ ಲಾರ್ಡ್ಸ್‌ನಲ್ಲಿ ಮೈದಾನದಲ್ಲಿ ಭರ್ಜರಿ ಬೌಲಿಂಗ್ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಹೀಗಾಗಿ ಈ ಮೈದಾನದಲ್ಲಿ ಮತ್ತೊಮ್ಮೆ ಅನುಭವಿ ವೇಗಿ ಇಶಾಂತ್​ರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ? ಈ ಇಬ್ಬರು ಬೌಲರುಗಳ ಬದಲಾವಣೆ ಹೊರತಾಗಿ, ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಕ್ರಮಾಂಕದದಲ್ಲಿ ಬದಲಾವಣೆ ಮಾಡಬಹುದು. 2ನೇ ಪಂದ್ಯಕ್ಕೆ ಮಯಾಂಕ್ ಅಗರ್ವಾಲ್ ಲಭ್ಯರಿದ್ದು, ಹೀಗಾಗಿ ಮಯಾಂಕ್‌ಗೆ ಅವಕಾಶ ನೀಡಿದರೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಬೇಕಾಗುತ್ತದೆ. ಇದರ ಹೊರತಾಗಿ ಬ್ಯಾಟಿಂಗ್​​ ವಿಭಾಗದಲ್ಲಿ ಟೀಮ್ ಇಂಡಿಯಾ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಎನ್ನಬಹುದು.

ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಅಶ್ವಿನ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ

ಇದನ್ನೂ ಓದಿ: Jasprit Bumrah: ಜಹೀರ್ ಖಾನ್ ದಾಖಲೆ ಸರಿಗಟ್ಟಿದ ಜಸ್​ಪ್ರೀತ್ ಬುಮ್ರಾ

ಇದನ್ನೂ ಓದಿ: IPL 2021: ಐಪಿಎಲ್​ನ ಪ್ರಮುಖ ನಿಯಮ ಬದಲಿಸಿದ ಬಿಸಿಸಿಐ

ಇದನ್ನೂ ಓದಿ: IPL 2021: ಐಪಿಎಲ್ ಹೊಸ ಅಪ್ಡೇಡ್: ಆಟಗಾರರಿಗೆ ಬಿಗ್ ರಿಲೀಫ್

(India’s Predicted Playing XI For 2nd Test vs England)

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ