
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯವು ಭಾನುವಾರ (ಜ.18) ನಡೆಯಲಿದೆ. ಇಂದೋರ್ನ ಹೋ್ಲ್ಕರ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ. ಅದರಲ್ಲೂ ಬಲಗೈ ವೇಗಿಯನ್ನು ಹೊರಗಿಟ್ಟು ಎಡಗೈ ವೇಗದ ಬೌಲರ್ಗೆ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ.
ಏಕೆಂದರೆ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಬಲಗೈ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ವಿಕೆಟ್ ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಮೂರನೇ ಪಂದ್ಯದಿಂದ ಇವರಿಬ್ಬರಲ್ಲಿ ಒಬ್ಬರನ್ನು ಕೈ ಬಿಡುವುದು ಖಚಿತ.
ಇಲ್ಲಿ ಪ್ರಸಿದ್ಧ್ ಕೃಷ್ಣ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ. ಅವರ ಬದಲಿಗೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರನ್ನು ಆಡುವ ಬಳಗಕ್ಕೆ ಸೇರಿಕೊಳ್ಳಬಹುದು. ಈ ಮೂಲಕ ಟೀಮ್ ಇಂಡಿಯಾ ಮೂವರು ವೇಗಿಗಳೊಂದಿಗೆ ಕಣಕ್ಕಿಳಿಯಬಹುದು.
ಅಂದರೆ ಮೂರನೇ ಪಂದ್ಯದಲ್ಲಿ ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಅವರೊಂದಿಗೆ ನಿತೀಶ್ ಕುಮಾರ್ ರೆಡ್ಡಿ ಕೂಡ ಹೆಚ್ಚುವರಿ ವೇಗಿಯಾಗಿ ತಂಡದಲ್ಲಿ ಇರಲಿದ್ದಾರೆ. ಹಾಗೆಯೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಈ ಪಂದ್ಯದಲ್ಲೂ ಮುಂದುವರೆಯುವುದನ್ನು ನಿರೀಕ್ಷಿಸಬಹುದು.
ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಶುಭ್ಮನ್ ಗಿಲ್ ಹಾಗೂ ರೋಹಿತ್ ಶರ್ಮಾ ಕಣಕ್ಕಿಳಿದರೆ, ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕಾಣಿಸಿಕೊಂಡರೆ, ವಿಕೆಟ್ ಕೀಪರ್ ಬ್ಯಾಟರ್ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
ಇನ್ನು ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆಯಲಿದ್ದಾರೆ. ಇನ್ನುಳಿದಂತೆ ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಹಾಗೂ ಕುಲ್ದೀಪ್ ಯಾದವ್ ಬೌಲರ್ಗಳಾಗಿ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಇದನ್ನೂ ಓದಿ: ಹೊಸ ಇತಿಹಾಸ… ಯಾರಿಗೂ ಸಾಧ್ಯವಾಗದ ದಾಖಲೆ ಬರೆದ ಶ್ರೇಯಾಂಕಾ ಪಾಟೀಲ್
ನ್ಯೂಝಿಲೆಂಡ್ ಸಂಭಾವ್ಯ ಇಲೆವೆನ್: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹೇ(ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ನಾಯಕ), ಝಕಾರಿ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜೇಮಿಸನ್, ಜೇಡನ್ ಲೆನ್ನೆಕ್ಸ್.