IND vs NZ: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆ

|

Updated on: Oct 15, 2024 | 3:26 PM

India vs New Zealand: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹೀಗಾಗಿ ನಾಳೆ ನಿಗದಿತ ಸಮಯದಲ್ಲಿ ಪಂದ್ಯ ಶುರುವಾಗುವುದು ಅನುಮಾನ. ಒಂದು ವೇಳೆ ಪಂದ್ಯ ಆರಂಭವಾದರೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

IND vs NZ: ಮೊದಲ ಟೆಸ್ಟ್​ಗೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆ
ಟೀಮ್ ಇಂಡಿಯಾ
Follow us on

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯ ನಾಳೆಯಿಂದ (ಅ.16) ಶುರುವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಬಳಗವನ್ನೇ ಕಣಕ್ಕಿಳಿಸಲಿದೆ. ಅಂದರೆ ಬಾಂಗ್ಲಾದೇಶ್ ವಿರುದ್ಧ ಕೊನೆಯ ಪಂದ್ಯವಾಡಿದ್ದ ಆಡುವ ಬಳಗವೇ ಇಲ್ಲೂ ಕೂಡ ಮುಂದುವರೆಯುವ ಸಾಧ್ಯತೆಯಿದೆ.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಕಣಕ್ಕಿಳಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಶುಭ್​ಮನ್ ಗಿಲ್ ಆಡಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸುವುದು ಖಚಿತ.

ಇನ್ನು ಐದನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಳ್ಳಲಿದ್ದಾರೆ.

ಏಳನೇ ಕ್ರಮಾಂಕದಲ್ಲಿ ರವೀಂದ್ರ ಜಡೇಜಾ ಆಡಿದರೆ, ಎಂಟನೇ ಕ್ರಮಾಂಕದಲ್ಲಿ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯಲಿದ್ದಾರೆ. ಇನ್ನು ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ಆಡುವ ಬಳಗದಲ್ಲಿರಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…

  1. ರೋಹಿತ್ ಶರ್ಮಾ
  2. ಯಶಸ್ವಿ ಜೈಸ್ವಾಲ್
  3. ಶುಭ್​ಮನ್ ಗಿಲ್
  4. ವಿರಾಟ್ ಕೊಹ್ಲಿ
  5. ಕೆಎಲ್ ರಾಹುಲ್
  6. ರಿಷಭ್ ಪಂತ್
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಜಸ್​ಪ್ರೀತ್ ಬುಮ್ರಾ
  10. ಮೊಹಮ್ಮದ್ ಸಿರಾಜ್
  11. ಆಕಾಶ್ ದೀಪ್

ಇದನ್ನೂ ಓದಿ: ಬೌಂಡರಿಗಳೊಂದಿಗೆ ಹೊಸ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ಭಾರತ

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಭಾರತ vs ನ್ಯೂಝಿಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಮೊದಲ ಟೆಸ್ಟ್ – ಅಕ್ಟೋಬರ್ 16 ರಿಂದ 20 (ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು)
  • ಎರಡನೇ ಟೆಸ್ಟ್ – 24 ರಿಂದ 28 ಅಕ್ಟೋಬರ್ (ಎಂಸಿಎ ಸ್ಟೇಡಿಯಂ, ಪುಣೆ)
  • ಮೂರನೇ ಟೆಸ್ಟ್ – ನವೆಂಬರ್ 1 ರಿಂದ 5 (ವಾಂಖೆಡೆ ಸ್ಟೇಡಿಯಂ, ಮುಂಬೈ)