AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ನಾಲ್ವರು ಆರಂಭಿಕರು: ಹೀಗಿರಲಿದೆ ಭಾರತ ಟೆಸ್ಟ್ ತಂಡ

India Squad For England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಆಂಗ್ಲರ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಲಿದೆ. ವಿಶೇಷ ಎಂದರೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಲ್ಲದೆ, ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ವಿದೇಶಿ ಸರಣಿ ಆಡಲು ಮುಂದಾಗುತ್ತಿದೆ.

IND vs ENG: ನಾಲ್ವರು ಆರಂಭಿಕರು: ಹೀಗಿರಲಿದೆ ಭಾರತ ಟೆಸ್ಟ್ ತಂಡ
India Test Team
ಝಾಹಿರ್ ಯೂಸುಫ್
|

Updated on: May 15, 2025 | 10:31 AM

Share

ಭಾರತ ಮತ್ತು ಇಂಗ್ಲೆಂಡ್  (Inida  vs England) ನಡುವಣ ಟೆಸ್ಟ್ ಸರಣಿಗಾಗಿ ದಿನಗಣನೆ ಶುರುವಾಗಿದೆ. ಜೂನ್ 20 ರಿಂದ ಆರಂಭವಾಗಲಿರುವ ಈ ಸರಣಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಘೋಷಿಸಲಾಗುತ್ತದೆ. ಇತ್ತ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿರುವ ಕಾರಣ ಇಬ್ಬರಿಗೆ ಅವಕಾಶ ಸಿಗುವುದು ಖಚಿತವಾಗಿದೆ. ಅದರಂತೆ ಈ ಬಾರಿ ಯುವ ಪಡೆಗಳನ್ನು ಒಳಗೊಂಡ ಟೀಮ್ ಇಂಡಿಯಾ ಇಂಗ್ಲೆಂಡ್​ನತ್ತ ಪ್ರಯಾಣ ಬೆಳೆಸಲಿದ್ದಾರೆ. ಈ ಯುವ ಪಡೆಯ ನಾಯಕಾರಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಉಪನಾಯಕತ್ವದ ರೇಸ್​ನಲ್ಲಿ ರಿಷಭ್ ಪಂತ್ ಇದ್ದು, ಹೀಗಾಗಿ ಪಂತ್​ಗೆ ವೈಸ್ ಕ್ಯಾಪ್ಟನ್ ಪಟ್ಟ ಲಭಿಸಿದರೂ ಅಚ್ಚರಿಪಡಬೇಕಿಲ್ಲ.

ಪ್ರಸ್ತುತ ಮಾಹಿತಿ ಪ್ರಕಾರ, ಇಂಗ್ಲೆಂಡ್ ಪ್ರವಾಸದಲ್ಲಿ ನಾಲ್ವರು ಆರಂಭಿಕರು ಕಾಣಿಸಿಕೊಳ್ಳಲಿದ್ದಾರೆ. ಇಲ್ಲಿ ಆರಂಭಿಕರಾಗಿ ಕಾಣಿಸಿಕೊಳ್ಳಲಿರುವುದು ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್ ಹಾಗೂ ಸಾಯಿ ಸುದರ್ಶನ್. ಇವರಲ್ಲಿ ಇಬ್ಬರು ಇನಿಂಗ್ಸ್ ಆರಂಭಿಸಿದರೆ ಮತ್ತೊಬ್ಬರು ಮೂರನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ.

ಇನ್ನು ಮಧ್ಯಮ ಕ್ರಮಾಂಕದಲ್ಲಿ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಆಯ್ಕೆಯಾಗಲಿದ್ದಾರೆ. ಇವರೊಂದಿಗೆ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

ಆಲ್​ರೌಂಡರ್​ಗಳಾಗಿ ಐವರಿಗೆ ಮಣೆಹಾಕಲು ನಿರ್ಧರಿಸಲಾಗಿದೆ. ಅದರಂತೆ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್​ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.

ಹಾಗೆಯೇ ವೇಗದ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣಗೆ ತಂಡದಲ್ಲಿ ಸ್ಥಾನ ಲಭಿಸಲಿದೆ ಎಂದು ವರದಿಯಾಗಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಟೆಸ್ಟ್ ತಂಡ ಈ ಕೆಳಗಿನಂತಿರಲಿದೆ…

ಇದನ್ನೂ ಓದಿ: IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

ಭಾರತ ಸಂಭಾವ್ಯ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ). ಅಭಿಮನ್ಯು ಈಶ್ವರನ್, ಸಾಯಿ ಸುದರ್ಶನ್, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.