Team India: ದಿಗ್ಗಜರ ಎಂಟ್ರಿ: ಹೇಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
IND vs AFG: ಸೀಮಿತ ಓವರ್ಗಳ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಾ ಬಂದಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲೂ ಅವರು ಮೂರನೇ ಕ್ರಮಾಂಕದಲ್ಲೇ ಕಣಕ್ಕಿಳಿಯಲಿದ್ದಾರೆ. ಕಳೆದ ಒಂದು ವರ್ಷದಿಂದ ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದ ಸೂರ್ಯಕುಮಾರ್ ಯಾದವ್ ಗಾಯದ ಕಾರಣ ಪ್ರಸ್ತುತ ತಂಡದಲ್ಲಿ ಸ್ಥಾನ ಪಡೆದಿಲ್ಲ.

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ 16 ಸದಸ್ಯರ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ಈ ಸರಣಿಯ ಮೂಲಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ಗೆ ಮರಳಲಿದ್ದಾರೆ. ಈ ಇಬ್ಬರ ಆಗಮನದೊಂದಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲೂ ಮಹತ್ವದ ಬದಲಾವಣೆ ಕಂಡು ಬರಲಿದೆ. ಏಕೆಂದರೆ ಕಳೆದ ಒಂದು ವರ್ಷದಿಂದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಹಿಟ್ಮ್ಯಾನ್ ಆಗಮನದೊಂದಿಗೆ ಆರಂಭಿಕನ ಸ್ಥಾನದಲ್ಲಿ ಬದಲಾವಣೆಯಾಗಲಿದೆ. ಹಾಗೆಯೇ ಕಿಂಗ್ ಕೊಹ್ಲಿ ಎಂದಿನಂತೆ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಇದರಿಂದ ಇಬ್ಬರು ಆಟಗಾರರು ಅವಕಾಶ ವಂಚಿತರಾಗುವುದು ಖಚಿತ ಎಂದೇ ಹೇಳಬಹುದು.
ಆರಂಭಿಕರು ಯಾರು?
ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸುವುದು ಯಾರು ಎಂಬುದೇ ಪ್ರಶ್ನೆ. ಪ್ರಸ್ತುತ ತಂಡದಲ್ಲಿ ಓಪನರ್ಗಳಾಗಿ ಯಶಸ್ವಿ ಜೈಸ್ವಾಲ್ ಹಾಗೂ ಶುಭ್ಮನ್ ಗಿಲ್ ಇದ್ದಾರೆ. ಇಲ್ಲಿ ಯಶಸ್ವಿ ಜೈಸ್ವಾಲ್ ಎಡಗೈ ದಾಂಡಿಗನಾಗಿರುವ ಕಾರಣ ಹಿಟ್ಮ್ಯಾನ್ ಜೊತೆ ಇನಿಂಗ್ಸ್ ಆರಂಭಿಸಬಹುದು. ಅಂದರೆ ಭಾರತ ತಂಡವು ಬಲಗೈ (ರೋಹಿತ್ ಶರ್ಮಾ)- ಎಡಗೈ (ಯಶಸ್ವಿ ಜೈಸ್ವಾಲ್) ಕಾಂಬಿನೇಷನ್ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಇದರಿಂದ ಶುಭ್ಮನ್ ಗಿಲ್ ಬೆಂಚ್ ಕಾಯಬೇಕಾಗಿ ಬರಬಹುದು.
ಕಿಂಗ್ ಕೊಹ್ಲಿಗೆ ಖಾಯಂ ಸ್ಥಾನ:
ಸೀಮಿತ ಓವರ್ಗಳ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಾ ಬಂದಿದ್ದಾರೆ. ಹೀಗಾಗಿ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲೂ ಅವರು ಮೂರನೇ ಕ್ರಮಾಂಕದಲ್ಲೇ ಕಣಕ್ಕಿಳಿಯಲಿದ್ದಾರೆ. ಕಳೆದ ಒಂದು ವರ್ಷದಿಂದ ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದ ಸೂರ್ಯಕುಮಾರ್ ಯಾದವ್ ಗಾಯದ ಕಾರಣ ಪ್ರಸ್ತುತ ತಂಡದಲ್ಲಿ ಸ್ಥಾನ ಪಡೆದಿಲ್ಲ.
ಹಾಗೆಯೇ ಮುಂಬಡ್ತಿಯೊಂದಿಗೆ ಮೂರನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳುತ್ತಿದ್ದ ಶ್ರೇಯಸ್ ಅಯ್ಯರ್ ಕೂಡ ತಂಡದಲ್ಲಿಲ್ಲ. ಹೀಗಾಗಿ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲೇ ಬ್ಯಾಟ್ ಬೀಸುವುದು ಖಚಿತ ಎನ್ನಬಹುದು. ಅದರಂತೆ ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ.
- ರೋಹಿತ್ ಶರ್ಮಾ
- ಯಶಸ್ವಿ ಜೈಸ್ವಾಲ್
- ವಿರಾಟ್ ಕೊಹ್ಲಿ
- ತಿಲಕ್ ವರ್ಮಾ
- ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
- ರಿಂಕು ಸಿಂಗ್
- ಅಕ್ಷರ್ ಪಟೇಲ್
- ಕುಲ್ದೀಪ್ ಯಾದವ್
- ಅವೇಶ್ ಖಾನ್
- ಅರ್ಷದೀಪ್ ಸಿಂಗ್
- ಮುಕೇಶ್ ಕುಮಾರ್.
ಇದನ್ನೂ ಓದಿ: 147 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ಬರೆದ ಟೀಮ್ ಇಂಡಿಯಾ
