Viral Video: ತಮಾಷೆಗೆ ಮೈದಾನದಲ್ಲೇ ದಿನೇಶ್ ಕಾರ್ತಿಕ್​ರ ಕುತ್ತಿಗೆ ಹಿಡಿದ ರೋಹಿತ್ ಶರ್ಮಾ..!

Rohit Sharma - Dinesh Karthik Video: ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಪೋಟಕ ಆರಂಭ ಒದಗಿಸಿದ್ದರು.

Viral Video: ತಮಾಷೆಗೆ ಮೈದಾನದಲ್ಲೇ ದಿನೇಶ್ ಕಾರ್ತಿಕ್​ರ ಕುತ್ತಿಗೆ ಹಿಡಿದ ರೋಹಿತ್ ಶರ್ಮಾ..!
Rohit Sharma - Dinesh Karthik
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 21, 2022 | 10:44 AM

India vs Australia 1st T20: ಮಂಗಳವಾರ ಮೊಹಾಲಿಯಲ್ಲಿ ನಡೆದ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್​ಗಳಿಂದ ಸೋಲನುಭವಿಸಿತು. ಈ ಪಂದ್ಯದಲ್ಲಿ ಉಭಯ ತಂಡಗಳ ಭರ್ಜರಿ ಬ್ಯಾಟಿಂಗ್​ನಿಂದ ಹೈರಾಣರಾಗಿದ್ದು ಬೌಲರ್​ಗಳು. ಅದರಲ್ಲೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 208 ರನ್​ಗಳ ಬೃಹತ್ ಮೊತ್ತ ಪೇರಿಸಿದಾಗ ಸುಲಭ ಗೆಲುವು ದಾಖಲಿಸಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಆಸೀಸ್​ ಪರ ಬಡ್ತಿ ಪಡೆದು ಆರಂಭಿಕರಾಗಿ ಕಣಕ್ಕಿಳಿದ ಕ್ಯಾಮರೋನ್ ಗ್ರೀನ್ (61) ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ತಂಡಕ್ಕೆ ಸ್ಪೋಟಕ ಆರಂಭ ಒದಗಿಸಿದ್ದರು. ಆರಂಭಿಕ ಆಟಗಾರ ಆರೋನ್ ಫಿಂಚ್ ವಿಕೆಟ್ ಕಳೆದುಕೊಂಡ ಬಳಿಕ ಸ್ಟೀವ್ ಸ್ಮಿತ್ ಜೊತೆಗೂಡಿದ ಗ್ರೀನ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇದಾಗ್ಯೂ ಸ್ಮಿತ್ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಏಕೆಂದರೆ 24 ಎಸೆತಗಳಲ್ಲಿ 35 ರನ್​ ಬಾರಿಸಿದ್ದ ಸ್ಮಿತ್ 12ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದ್ದರು.

ಆದರೆ ಸ್ಟೀವ್ ಸ್ಮಿತ್  ಅವರ ವಿಕೆಟ್ ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಏಕೆಂದರೆ ಉಮೇಶ್ ಯಾದವ್ ಎಸೆದ 12ನೇ ಓವರ್​ನಲ್ಲಿ ಚೆಂಡು ಸ್ಮಿತ್ ಬ್ಯಾಟ್ ಸವರಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಕೈ ಸೇರಿತು. ಈ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ಡಿಆರ್​ಎಸ್​ನಲ್ಲಿ ಸ್ಮಿತ್ ಔಟ್ ಎಂದು ಮೂರನೇ ಅಂಪೈರ್ ತೀರ್ಪು ನೀಡಿದರು. ಇದರ ಬೆನ್ನಲ್ಲೇ ಉಮೇಶ್ ಯಾದವ್ ಎಸೆದ ಮತ್ತೊಂದು ಎಸೆತವು ಗ್ಲೆನ್ ಮ್ಯಾಕ್ಸ್​ವೆಲ್​ ಅವರನ್ನು ವಂಚಿಸಿ ಕೀಪರ್​ ಕೈ ಸೇರಿತು. ಇತ್ತ ಉಮೇಶ್ ಯಾದವ್ ಮನವಿ ಮಾಡಿದರೂ, ಔಟ್ ನೀಡಲು ಅಂಪೈರ್ ನಿರಾಕರಿಸಿದರು. ಹೀಗಾಗಿ ನಾಯಕ ರೋಹಿತ್ ಶರ್ಮಾ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರಲ್ಲಿ ಚೆಂಡು ಬ್ಯಾಟ್​ಗೆ ಬಡಿದಿದೆಯೇ ಎಂದು ಕೇಳಿದ್ದರು. ಆ ಬಳಿಕ ರಿವ್ಯೂ ಮೊರೆ ಹೋದರು.

ನಿರೀಕ್ಷೆಯಂತೆ ರಿಪ್ಲೇನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಅವರ ಬ್ಯಾಟ್​ಗೆ ಚೆಂಡು ಬಡಿದಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಹೀಗಾಗಿ ಅವರು ಕೂಡ ಹೊರನಡೆಯಬೇಕಾಯಿತು. ಆದರೆ ಅತ್ತ ಮ್ಯಾಕ್ಸ್​ವೆಲ್ ಔಟ್​ ಎಂದು ತೀರ್ಪು ಬರುತ್ತಿದ್ದಂತೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್ ಅವರ ಕುತ್ತಿಗೆಯನ್ನು ಹಿಡಿದು ತಮಾಷೆಗೆ ಆಕ್ರೋಶ ವ್ಯಕ್ತಪಡಿಸುವಂತೆ ನಟಿಸಿದರು. ಇದೀಗ ರೋಹಿತ್ ಶರ್ಮಾ ದಿನೇಶ್ ಕಾರ್ತಿಕ್ ಅವರ ಕುತ್ತಿಗೆ ಹಿಡಿಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೇಲ್ನೋಟಕ್ಕೆ ರೋಹಿತ್ ಶರ್ಮಾ ತಮಾಷೆಗೆ ಮಾಡಿದರೂ, ಅದಕ್ಕೂ ಮುನ್ನ ಅವರು ಆಕ್ರೋಶಭರಿತರಾಗಿರುವುದು ಕಾಣಬಹುದು. ಹೀಗಾಗಿ ಸಹ ಆಟಗಾರನ ಜೊತೆ ಮೈದಾನದಲ್ಲಿ ಇಂತಹ ವರ್ತನೆಗಳು ತಪ್ಪು ಸಂದೇಶ ನೀಡುತ್ತದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಪೋಟಕ ಆರಂಭ ಒದಗಿಸಿದ್ದರು. ಆದರೆ 11 ರನ್​ಗಳಿಸಿದ್ದ ವೇಳೆ ಹಿಟ್​ಮ್ಯಾನ್ ಕ್ಯಾಚ್ ನೀಡಿ ಹೊರನಡೆಯಬೇಕಾಯಿತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (2) ಕೂಡ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಪ್ರದರ್ಶಿಸಿದ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೆಎಲ್ ರಾಹುಲ್​ಗೆ ಉತ್ತಮ ಸಾಥ್ ನೀಡಿದ ಸೂರ್ಯ ಕುಮಾರ್ ಯಾದವ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

ಆದರೆ ಅರ್ಧಶತಕದ ಬೆನ್ನಲ್ಲೇ ಕೆಎಲ್ ರಾಹುಲ್ (55) ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. 35 ಎಸೆತಗಳನ್ನು ಎದುರಿಸಿದ್ದ ರಾಹುಲ್ 3 ಸಿಕ್ಸ್ ಹಾಗೂ 4 ಫೋರ್​ ಬಾರಿಸಿ ಗಮನ ಸೆಳೆದರು. ಇದಾಗ್ಯೂ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೂರ್ಯಕುಮಾರ್ ಯಾದವ್ 4 ಸಿಕ್ಸ್​ನೊಂದಿಗೆ 25 ಎಸೆತಗಳಲ್ಲಿ 45 ರನ್​ ಬಾರಿಸಿದರು. ಆದರೆ ಹಾಫ್ ಸೆಂಚುರಿ ಹೊಸ್ತಿಲ್ಲಲಿ ಕೀಪರ್​ಗೆ ಕ್ಯಾಚ್ ನೀಡಿದರು.

5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ ಅಕ್ಷರಶಃ ಅಬ್ಬರಿಸಿದರು. ಆಸೀಸ್ ಬೌಲರ್​ಗಳ ಬೆಂಡೆತ್ತಿದ ಪಾಂಡ್ಯ ಕೇವಲ 25 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಅಷ್ಟೇ ಅಲ್ಲದೆ 5 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 30 ಎಸೆತಗಳಲ್ಲಿ ಅಜೇಯ 71 ರನ್ ಬಾರಿಸುವ ಮೂಲಕ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತವನ್ನು 208 ಕ್ಕೆ ತಂದು ನಿಲ್ಲಿಸಿದರು.

209 ರನ್​ಗಳ ಕಠಿಣ ಗುರಿ ಪಡೆದ ಆಸ್ಟ್ರೇಲಿಯಾಗೆ ಆರೋನ್ ಫಿಂಚ್ ಹಾಗೂ ಕ್ಯಾಮರೋನ್ ಗ್ರೀನ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 39 ರನ್​ಗಳ ಜೊತೆಯಾಟವಾಡಿದ ಈ ಜೋಡಿ ಉತ್ತಮ ಅಡಿಪಾಯ ಹಾಕಿಕೊಟ್ಟರು. ಫಿಂಚ್ (22) ಔಟಾದ ಬೆನ್ನಲ್ಲೇ ಅಬ್ಬರಿಸಲಾರಂಭಿಸಿದ ಕ್ಯಾಮರೋನ್ ಗ್ರೀನ್ ಟೀಮ್ ಇಂಡಿಯಾ ಬೌಲರ್​ಗಳನ್ನು ದಂಡಿಸಿದರು. ಈ ನಡುವೆ ಅಕ್ಷರ್ ಪಟೇಲ್ ಕೈಬಿಟ್ಟ ಕ್ಯಾಚ್​ನ ಸಂಪೂರ್ಣ ಲಾಭ ಪಡೆದ ಗ್ರೀನ್ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 8 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾದರು. ಅಷ್ಟರಲ್ಲಾಗಲೇ ಆಸ್ಟ್ರೇಲಿಯಾ ಮೊತ್ತವು 10 ಓವರ್​ಗಳಲ್ಲಿ 100 ರ ಗಡಿದಾಟಿತ್ತು.

ಇದಾಗ್ಯೂ ಕೊನೆಯ 6 ಓವರ್​ಗಳಲ್ಲಿ ಆಸ್ಟ್ರೇಲಿಯಾಗೆ 64 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಕಣಕ್ಕಿಳಿದಿದ್ದ ಎಡಗೈ ದಾಂಡಿಗ ಮ್ಯಾಥ್ಯೂವೇಡ್ 21 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ನೊಂದಿಗೆ ಅಜೇಯ 45 ರನ್​ ಚಚ್ಚಿದರು. ವೇಡ್​ಗೆ ಉತ್ತಮ ಸಾಥ್ ನೀಡಿದ ಟಿಮ್ ಡೇವಿಡ್ 14 ಎಸೆತಗಳಲ್ಲಿ 18 ರನ್​ ಬಾರಿಸಿದರು. ಅದರಂತೆ ಅಂತಿಮವಾಗಿ ಆಸ್ಟ್ರೇಲಿಯಾ ತಂಡವು 19.2 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 211 ರನ್​ ಬಾರಿಸಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್