ಟೀಮ್ ಇಂಡಿಯಾ ಟಿ20 ತಂಡಕ್ಕೆ ಕನ್ನಡಿಗ ಎಂಟ್ರಿ

|

Updated on: Oct 26, 2024 | 7:57 AM

India's squad for South Africa: ಟಿ20 ವಿಶ್ವಕಪ್​ನ ಫೈನಲಿಸ್ಟ್​ಗಳಾದ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ನವೆಂಬರ್​ನಲ್ಲಿ ಮುಖಾಮುಖಿಯಾಗಲಿದೆ. 4 ಟಿ20 ಪಂದ್ಯಗಳ ಈ ಸರಣಿಗೆ ಸೌತ್ ಆಫ್ರಿಕಾ ಆತಿಥ್ಯವಹಿಸಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ...

ಟೀಮ್ ಇಂಡಿಯಾ ಟಿ20 ತಂಡಕ್ಕೆ ಕನ್ನಡಿಗ ಎಂಟ್ರಿ
Team India
Follow us on

ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಇನ್ನು ಈ ತಂಡದಲ್ಲಿ ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಆಯ್ಕೆಯಾಗಿದ್ದಾರೆ. ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 11 ಪಂದ್ಯಗಳನ್ನಾಡಿರುವ ವೈಶಾಕ್ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

ಇನ್ನು 30 ಟಿ20 ಪಂದ್ಯಗಳಿಂದ 42 ವಿಕೆಟ್​ಗಳನ್ನು ಪಡೆಯುವಲ್ಲಿ ಕರ್ನಾಟಕದ ವೇಗಿ ಯಶಸ್ವಿಯಾಗಿದ್ದಾರೆ. ಈ ಪ್ರದರ್ಶನದ ಫಲವಾಗಿ ಇದೀಗ ವಿಜಯಕುಮಾರ್ ವೈಶಾಕ್ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ.

ಹಾಗೆಯೇ ಕೆಕೆಆರ್ ಪರ ಕಣಕ್ಕಿಳಿದಿದ್ದ ಸ್ಪೋಟಕ ದಾಂಡಿಗ ರಮಣ್​ದೀಪ್ ಸಿಂಗ್ ಕೂಡ ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ. ಬಿರುಸಿನ ಬ್ಯಾಟಿಂಗ್ ಹಾಗೂ ಅತ್ಯುತ್ತಮ ಫೀಲ್ಡಿಂಗ್​ ಹೆಸರುವಾಸಿಯಾಗಿರುವ ರಮಣ್​ ಇದೇ ಮೊದಲ ಭಾರತ ತಂಡದಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ ಈ ಕೆಳಗಿನಂತಿದೆ…

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ , ಅಕ್ಷರ್ ಪಟೇಲ್, ರಮಣ್​ದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್.

ಇದನ್ನೂ ಓದಿ: 4 ಓವರ್​ಗಳಲ್ಲಿ 93 ರನ್​ಗಳು… 7 ರನ್​ಗಳಿಂದ ಬೌಲರ್​ಗೆ ಶತಕ ಮಿಸ್..!

ಭಾರತ vs ಸೌತ್ ಆಫ್ರಿಕಾ ಸರಣಿ ಯಾವಾಗ?

ಟಿ20 ವಿಶ್ವಕಪ್​ನ ಫೈನಲಿಸ್ಟ್​ಗಳಾದ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ನವೆಂಬರ್​ನಲ್ಲಿ ಮುಖಾಮುಖಿಯಾಗಲಿದೆ. 4 ಟಿ20 ಪಂದ್ಯಗಳ ಈ ಸರಣಿಗೆ ಸೌತ್ ಆಫ್ರಿಕಾ ಆತಿಥ್ಯವಹಿಸಲಿದೆ. ಈ ಸರಣಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟಿ20, ಸೌತ್ ಆಫ್ರಿಕಾ vs ಭಾರತ ಶುಕ್ರವಾರ, 8 ನವೆಂಬರ್ 2024 8:30 PM ಡರ್ಬನ್
2ನೇ ಟಿ20, ಸೌತ್ ಆಫ್ರಿಕಾ vs ಭಾರತ ಭಾನುವಾರ, 10 ನವೆಂಬರ್ 2024 8:30 PM ಗ್ಕೆಬರ್ಹಾ
3ನೇ ಟಿ20, ಸೌತ್ ಆಫ್ರಿಕಾ vs ಭಾರತ ಬುಧವಾರ, 13 ನವೆಂಬರ್ 2024 8:30 PM ಸೆಂಚುರಿಯನ್
4ನೇ ಟಿ20, ಸೌತ್ ಆಫ್ರಿಕಾ vs ಭಾರತ ಶುಕ್ರವಾರ, 15 ನವೆಂಬರ್ 2024 8:30 PM ಜೋಹಾನ್ಸ್‌ಬರ್ಗ್