ಟಿ20 ವಿಶ್ವಕಪ್ ಜೊತೆಗೆ ಆಸೀಸ್- ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಟೀಂ ಇಂಡಿಯಾ ಪ್ರಕಟ
ಭಾರತದಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಲಾ 3 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಟೀಂ ಇಂಡಿಯಾದ ಎಲ್ಲ ಹಿರಿಯ ಆಟಗಾರರು ಕೂಡ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಟಿ20 ವಿಶ್ವಕಪ್ (T20 World Cup) ಜೊತೆಗೆ ಬಿಸಿಸಿಐ ಮುಂಬರುವ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ತವರಿನ ಸರಣಿಗೂ ಟೀಂ ಇಂಡಿಯಾವನ್ನು (Team India) ಪ್ರಕಟಿಸಿದೆ. ಭಾರತದಲ್ಲಿ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ತಲಾ 3 ಪಂದ್ಯಗಳ ಟಿ20 ಸರಣಿ ನಡೆಯಲಿದ್ದು, ಟೀಂ ಇಂಡಿಯಾದ ಎಲ್ಲ ಹಿರಿಯ ಆಟಗಾರರು ಕೂಡ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಸೋಮವಾರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಇದರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದಲ್ಲಿ 16 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಇದಲ್ಲದೇ ಟಿ20 ವಿಶ್ವಕಪ್ ತಂಡವನ್ನೂ ಪ್ರಕಟಿಸಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆದಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅರ್ಷದೀಪ್ ಸಿಂಗ್ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಆದರೆ, ಅವರು ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ತಂಡದಲ್ಲಿ ಭುವನೇಶ್ವರ್ ಕುಮಾರ್ ಆಯ್ಕೆಯಾಗಿದ್ದರೂ ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ರಾಂತಿ ಪಡೆಯಲಿದ್ದಾರೆ.
ಪ್ರಮುಖ ಆಟಗಾರರಿಗೆ ವಿಶ್ರಾಂತಿ ಸಿಗಲಿಲ್ಲ
ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಹಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಬಹುದು ಎಂದು ಈ ಹಿಂದೆ ವರದಿಗಳು ಕೇಳಿಬಂದಿದ್ದವು. ಆದರೆ ಏಷ್ಯಾಕಪ್ಗೂ ಮುನ್ನ ಮಾಡಿ ತಪ್ಪನ್ನು ಬಿಸಿಸಿಐ ಇಲ್ಲಿ ಮಾಡಿಲ್ಲ. ಎಲ್ಲಾ ಪ್ರಮುಖ ಆಟಗಾರರು ಈ ಎರಡೂ ಸರಣಿಗಳಲ್ಲಿ ಆಡುವುದನ್ನು ನಾವು ಕಾಣಬಹುದಾಗಿದೆ. ಆಟಗಾರರು ಈ ಮಾದರಿಯಲ್ಲಿ ತಮ್ಮ ಲಯವನ್ನು ಕಂಡುಕೊಳ್ಳಲು ಮತ್ತು ಫಾರ್ಮ್‌ಗೆ ಮರಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
? NEWS ?: India’s squads for ICC Men’s T20 World Cup 2022, Australia & South Africa T20Is announced. #TeamIndia | #T20WorldCup | #INDvAUS | #iNDvSA
More Details ?https://t.co/ZFaOXlmduN
— BCCI (@BCCI) September 12, 2022
ವೇಳಾಪಟ್ಟಿ ಹೀಗಿದೆ
ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲಿದ್ದು, ಈ ಸರಣಿ ಸೆಪ್ಟೆಂಬರ್ 20 ರಿಂದ ಪ್ರಾರಂಭವಾಗಲಿದೆ. ಮೊದಲ ಪಂದ್ಯ ಮೊಹಾಲಿಯಲ್ಲಿ ಮತ್ತು ಎರಡನೇ ಪಂದ್ಯ ಸೆಪ್ಟೆಂಬರ್ 23 ರಂದು ನಾಗ್ಪುರದಲ್ಲಿ ನಡೆಯಲಿದೆ. ಮೂರನೇ ಪಂದ್ಯ ಹೈದರಾಬಾದ್‌ನಲ್ಲಿ ಸೆಪ್ಟೆಂಬರ್ 25 ರಂದು ನಡೆಯಲಿದೆ. ಸೆಪ್ಟೆಂಬರ್ 28 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಸಹ ಆಡಲಿದೆ. ಮೊದಲ ಪಂದ್ಯ ತಿರುವನಂತಪುರಂನಲ್ಲಿ ಮತ್ತು ಎರಡನೇ ಪಂದ್ಯ ಗುವಾಹಟಿಯಲ್ಲಿ ಅಕ್ಟೋಬರ್ 2 ರಂದು ನಡೆಯಲಿದೆ. ಮೂರನೇ ಪಂದ್ಯ ಅಕ್ಟೋಬರ್ 4 ರಂದು ಇಂದೋರ್‌ನ ಹೋಲ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾ ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್ ಮತ್ತು ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹಾರ್ ಮತ್ತು ಜಸ್ಪ್ರೀತ್ ಬುಮ್ರಾ.
Published On - 6:14 pm, Mon, 12 September 22