ಟೀಮ್ ಇಂಡಿಯಾ ಟೆಸ್ಟ್ ತಂಡದ ಆಟಗಾರರು ದೇಶೀಯ ಟೂರ್ನಿ ಆಡಲೇಬೇಕು..!

Team India: ಭಾರತ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ದೇಶೀಯ ಟೂರ್ನಿಯಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಡಬೇಕು ಎಂದು ಈ ಹಿಂದೆ ಗೌತಮ್ ಗಂಭೀರ್ ಹೇಳಿದ್ದರು. ಇದೀಗ ಭಾರತ ಟೆಸ್ಟ್ ತಂಡದ ಆಟಗಾರರಿಗೆ ದುಲೀಪ್ ಟ್ರೋಫಿ ಆಡುವಂತೆ ಬಿಸಿಸಿಐ ಸೂಚಿಸಿದ್ದಾರೆ. ಅಂದರೆ ಮುಂಬರುವ ದಿನಗಳಲ್ಲಿ ದುಲೀಪ್ ಟ್ರೋಫಿಯಲ್ಲಿ ಕಾಣಿಸಿಕೊಂಡ ಆಟಗಾರರನ್ನು ಮಾತ್ರ ಟೆಸ್ಟ್ ತಂಡದ ಆಯ್ಕೆಗೆ ಪರಿಗಣಿಸಲಾಗುತ್ತದೆ.

ಟೀಮ್ ಇಂಡಿಯಾ ಟೆಸ್ಟ್ ತಂಡದ ಆಟಗಾರರು ದೇಶೀಯ ಟೂರ್ನಿ ಆಡಲೇಬೇಕು..!
Team India
Follow us
ಝಾಹಿರ್ ಯೂಸುಫ್
|

Updated on: Jul 17, 2024 | 9:30 AM

ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್‌ಗಳು ದೇಶೀಯ ಟೂರ್ನಿಯಲ್ಲಿ ಭಾಗವಹಿಸಬೇಕೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಟ್ಟಪಣೆ ಹೊರಡಿಸುವ ಸಾಧ್ಯತೆಯಿದೆ. ಏಕೆಂದರೆ ಟೆಸ್ಟ್ ತಂಡದಲ್ಲಿರುವ ಆಟಗಾರರು ರಾಷ್ಟ್ರೀಯ ತಂಡದಿಂದ ಹೊರಗುಳಿದಾಗ ಯಾವುದೇ ಟೂರ್ನಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇನ್ಮುಂದೆ ದೇಶೀಯ ಟೆಸ್ಟ್ ಪಂದ್ಯಾವಳಿಗಳಲ್ಲಿ ಭಾಗವಹಿಸುವುದು ಕಡ್ಡಾಯ ಮಾಡಲು ಬಿಸಿಸಿಐ ಮುಂದಾಗಿದೆ.

ಇದಾಗ್ಯೂ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾಗೆ ಈ ನಿಯಮದಿಂದ ವಿನಾಯಿತಿ ನೀಡಲಾಗುತ್ತದೆ. ಅಂದರೆ ಈ ಮೂವರು ಆಟಗಾರರು ರಾಷ್ಟ್ರೀಯ ತಂಡದಿಂದ ಹೊರಗುಳಿದರೂ, ದೇಶೀಯ ಟೂರ್ನಿಗಳಲ್ಲಿ ಕಾಣಿಸಿಕೊಳ್ಳುವುದು ಮತ್ತು ಬಿಡುವುಡು ಅವರ ಆಯ್ಕೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಇನ್ನುಳಿದ ಟೆಸ್ಟ್​ ಆಟಗಾರರು ಫಸ್ಟ್ ಕ್ಲಾಸ್ ಟೂರ್ನಿಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯ ಮಾಡಲಾಗುತ್ತಿದೆ. ಇದರಿಂದ ಫಾರ್ಮ್​ನಲ್ಲಿರುವ ಆಟಗಾರರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲು ಸಹಕಾರಿಯಾಗಲಿದೆ ಎಂಬುದು ಬಿಸಿಸಿಐ ಆಯ್ಕೆ ಸಮಿತಿಯ ಅಭಿಪ್ರಾಯ.

ಅದರಂತೆ ಬಾಂಗ್ಲಾದೇಶ್ ಮತ್ತು ಮತ್ತು ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಳಿಗೂ ಮುನ್ನ ಭಾರತೀಯ ಟೆಸ್ಟ್ ತಂಡದ ಆಟಗಾರರು ಕನಿಷ್ಠ ಒಂದು ದುಲೀಪ್ ಟ್ರೋಫಿ ಪಂದ್ಯದಲ್ಲಿ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ಮುಂಬರುವ ದುಲೀಪ್ ಟ್ರೋಫಿಯ ತಂಡಗಳಲ್ಲಿ ಟೀಮ್ ಇಂಡಿಯಾದ ಟೆಸ್ಟ್ ಆಟಗಾರರನ್ನು ಸೇರಿಸಿಕೊಳ್ಳಲಾಗುತ್ತದೆ. ಅಲ್ಲಿ ನೀಡಿದ ಪ್ರದರ್ಶನದ ಆಧಾರದ ಮೇಲೆ ಮತ್ತೆ ಆಯ್ಕೆಗೆ ಪರಿಗಣಿಸಲಾಗುತ್ತದೆ ಎಂದು ತಿಳಿದು ಬಂದಿದೆ.

ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಸಂದರ್ಭದಲ್ಲಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಕೇಂದ್ರೀಯ ಒಪ್ಪಂದ ಹೊಂದಿರುವ ಆಟಗಾರರು ದೇಶೀಯ ಸರ್ಕ್ಯೂಟ್‌ನಲ್ಲಿ ಭಾಗವಹಿಸಬೇಕು ಎಂದು ಕಠಿಣ ಸಂದೇಶ ರವಾನಿಸಿದ್ದರು. ಇದರ ಮೊದಲ ಹೆಜ್ಜೆಯಾಗಿ ಇದೀಗ ಭಾರತ ಟೆಸ್ಟ್ ತಂಡದ ಆಟಗಾರರು ದುಲೀಪ್ ಟ್ರೋಫಿಯಲ್ಲಿ ಭಾಗವಹಿಸಬೇಕೆಂದು ಸೂಚಿಸಲಾಗಿದೆ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ. ಹಾಗೆಯೇ ಈ ಟೂರ್ನಿಯಲ್ಲಿ ದೇಶದ ಆರು ವಲಯಗಳ ತಂಡಗಳು ಕಣಕ್ಕಿಳಿಯುತ್ತವೆ. ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳು ಈ ಕೆಳಗಿನಂತಿವೆ…

  • ಕೇಂದ್ರ ವಲಯ
  • ದಕ್ಷಿಣ ವಲಯ
  • ಪೂರ್ವ ವಲಯ
  • ಪಶ್ಚಿಮ ವಲಯ
  • ಉತ್ತರ ವಲಯ
  • ಈಶಾನ್ಯ ವಲಯ

ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ. ದಕ್ಷಿಣ ವಲಯವನ್ನು ದಕ್ಷಿಣ ವಲಯ ಕರ್ನಾಟಕ, ಆಂಧ್ರಪ್ರದೇಶ, ಗೋವಾ, ಹೈದರಾಬಾದ್, ಕೇರಳ, ಪಾಂಡಿಚೇರಿ, ತಮಿಳುನಾಡು ರಾಜ್ಯಗಳ ಆಟಗಾರರು ಕಾಣಿಸಿಕೊಳ್ಳುತ್ತಾರೆ.

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!