AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

94 ವರ್ಷಗಳ ಇತಿಹಾಸವನ್ನೇ ಬದಲಿಸಿದ ಟೀಮ್ ಇಂಡಿಯಾ ಬ್ಯಾಟರ್​ಗಳು!

ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳ ಅಕ್ಷರಶಃ ರನ್ ಸುನಾಮಿ ಎಬ್ಬಿಸಿದ್ದಾರೆ. 1932ರಲ್ಲಿ ಭಾರತ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದ ಇಲ್ಲಿಯವರೆಗೆ, SENA ದೇಶಗಳಲ್ಲಿ (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ಯಾವ ಭಾರತೀಯ ತಂಡಕ್ಕೂ ಸಾಧ್ಯವಾಗದ ಅಪರೂಪದ ಮೈಲಿಗಲ್ಲನ್ನು ಶುಭ್​ ಮನ್ಗಿಲ್ ಪಡೆ ಸಾಧಿಸಿದೆ. 

94 ವರ್ಷಗಳ ಇತಿಹಾಸವನ್ನೇ ಬದಲಿಸಿದ ಟೀಮ್ ಇಂಡಿಯಾ ಬ್ಯಾಟರ್​ಗಳು!
Team India Image Credit source: GettyImages
ಝಾಹಿರ್ ಯೂಸುಫ್
|

Updated on: Nov 21, 2026 | 11:41 AM

Share

94 ವರ್ಷಗಳ ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, SENA ರಾಷ್ಟ್ರವೊಂದರಲ್ಲಿ ನಡೆದ ಟೆಸ್ಟ್ ಪಂದ್ಯದ ಒಂದೇ ಇನ್ನಿಂಗ್ಸ್‌ನಲ್ಲಿ ಭಾರತದ ಅಗ್ರ ಐವರು ಬ್ಯಾಟರ್‌ಗಳು 50ಕ್ಕೂ ಹೆಚ್ಚು ರನ್ ಗಳಿಸಿ ಐತಿಹಾಸಿಕ ದಾಖಲೆ ಬರೆದಿದ್ದಾರೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಈ ಅಪರೂಪದ ಮೈಲಿಗಲ್ಲನ್ನು ತಲುಪಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್‌ನ ಮೊದಲ ಇನ್ನಿಂಗ್ಸ್ ಮೊತ್ತವಾದ 368 ರನ್‌ಗಳಿಗೆ ಉತ್ತರವಾಗಿ ಭರ್ಜರಿ ಬ್ಯಾಟಿಂಗ್ ನಡೆಸಿದ ಭಾರತ, 3ನೇ ದಿನದಾಟದ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 486 ರನ್ ಕಲೆಹಾಕಿದ್ದು, ಒಟ್ಟಾರೆ 118 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಅಗ್ರ 5 ಬ್ಯಾಟರ್‌ಗಳ ಐತಿಹಾಸಿಕ ಪ್ರದರ್ಶನ:

ದಿನದಾಟದ ಆರಂಭಿಕ ಅವಧಿಯಲ್ಲಿ ಅಗ್ರ ನಾಲ್ವರು ಅರ್ಧಶತಕ ಪೂರೈಸಿದ್ದಾಗಲೇ ಈ ದಾಖಲೆ ಸುದ್ದಿಯಾಗಿತ್ತು. ಆದರೆ, ದಿನದ ಅಂತ್ಯದ ವೇಳೆಗೆ 5ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್ ಪಂತ್ ಕೂಡ ಅರ್ಧಶತಕ ಬಾರಿಸುವ ಮೂಲಕ ಅಗ್ರ ಐವರು 50+ ರನ್ ಗಳಿಸಿದ ಸಾರ್ವಕಾಲಿಕ ದಾಖಲೆಯನ್ನು ಪೂರ್ಣಗೊಳಿಸಿದರು.

  1. ಯಶಸ್ವಿ ಜೈಸ್ವಾಲ್ (85 ರನ್): ಆರಂಭಿಕರಾಗಿ ಕಣಕ್ಕಿಳಿದ ಯುವ ಎಡಗೈ ಬ್ಯಾಟರ್ ಜೈಸ್ವಾಲ್, ಕೇವಲ 89 ಎಸೆತಗಳಲ್ಲಿ 16 ಬೌಂಡರಿಗಳ ನೆರವಿನಿಂದ ಆಕ್ರಮಣಕಾರಿ 85 ರನ್ ಸಿಡಿಸಿದರು. ಮೊದಲ ವಿಕೆಟ್‌ಗೆ ಶತಕದ ಜೊತೆಯಾಟವಾಡುವ ಮೂಲಕ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು.
  2. ಕೆ.ಎಲ್. ರಾಹುಲ್ (136 ರನ್): ಕನ್ನಡಿಗ ಕೆ.ಎಲ್. ರಾಹುಲ್ ತಮ್ಮ ಅಮೋಘ ಫಾರ್ಮ್ ಮುಂದುವರಿಸಿ 290 ಎಸೆತಗಳಲ್ಲಿ 136 ರನ್ ಬಾರಿಸಿದರು. ಈ ಶತಕದೊಂದಿಗೆ ರಾಹುಲ್, ಎಲ್ಲಾ ನಾಲ್ಕು SENA ರಾಷ್ಟ್ರಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಭಾರತದ ಮೊದಲ ಆರಂಭಿಕ ಬ್ಯಾಟರ್ ಎಂಬ ಐತಿಹಾಸಿಕ ಹಿರಿಮೆಗೂ ಪಾತ್ರರಾದರು.
  3. ದೇವದತ್ ಪಡಿಕ್ಕಲ್ (80 ರನ್): ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದ ಮತ್ತೊಬ್ಬ ಕನ್ನಡಿಗ ದೇವದತ್ ಪಡಿಕ್ಕಲ್, ರಾಹುಲ್ ಜೊತೆಗೂಡಿ ಎರಡನೇ ವಿಕೆಟ್‌ಗೆ 162 ರನ್‌ಗಳ ಭರ್ಜರಿ ಜೊತೆಯಾಟವಾಡಿದರು. ತಾಳ್ಮೆ ಮತ್ತು ಕ್ಲಾಸ್ ಆಟವಾಡಿದ ಪಡಿಕ್ಕಲ್ 80 ರನ್ ಗಳಿಸಿ ಮಿಂಚಿದರು.
  4.  ಶುಭ್​ಮನ್ ಗಿಲ್ (98 ರನ್): ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಶುಭ್​​ಮನ್ ಗಿಲ್ 98 ರನ್ ಬಾರಿಸಿ ಶತಕದಂಚಿನಲ್ಲಿ ವಿಕೆಟ್ ಒಪ್ಪಿಸಿ ಹೊರ ನಡೆದರು.
  5. ರಿಷಭ್ ಪಂತ್ (55* ರನ್​): ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ ಕೂಡ ಆಕರ್ಷಕ ಬ್ಯಾಟಿಂಗ್​ನೊಂದಿಗೆ ಅರ್ಧಶತಕ ಪೂರೈಸಿದರು.

94 ವರ್ಷಗಳ ಕಾಯುವಿಕೆ ಅಂತ್ಯ:

1932ರಲ್ಲಿ ಭಾರತ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದಾಗಿನಿಂದ ಇಲ್ಲಿಯವರೆಗೆ, ತಂಡದ ಅಗ್ರ ನಾಲ್ವರು ಬ್ಯಾಟರ್‌ಗಳು ಒಂದೇ ಇನ್ನಿಂಗ್ಸ್‌ನಲ್ಲಿ 50+ ರನ್ ಗಳಿಸಿದ್ದು 11 ಬಾರಿ ಮಾತ್ರ. ಆದರೆ, ಕಠಿಣ ಪಿಚ್‌ಗಳಿಗೆ ಹೆಸರಾದ SENA (ಸೌತ್ ಆಫ್ರಿಕಾ, ಇಂಗ್ಲೆಂಡ್, ನ್ಯೂಝಿಲೆಂಡ್, ಆಸ್ಟ್ರೇಲಿಯಾ) ರಾಷ್ಟ್ರಗಳಲ್ಲಿ ಈ ಸಾಧನೆ ಒಮ್ಮೆಯೂ ಮೂಡಿಬಂದಿರಲಿಲ್ಲ. ಈಗ ಅಗ್ರ ಐವರೂ 50+ ರನ್ ಗಳಿಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಏಷ್ಯಾದ ಹೊರಗೆ ಎರಡನೇ ಬಾರಿ:

ಏಷ್ಯಾದ ಹೊರಗೆ ಭಾರತದ ಅಗ್ರ ನಾಲ್ವರು 50+ ರನ್ ಗಳಿಸಿದ್ದು ಇದಕ್ಕೂ ಮುನ್ನ 2006ರಲ್ಲಿ ವೆಸ್ಟ್ ಇಂಡೀಸ್‌ನ ಬಾಸ್ಸೆಟೆರೆಯಲ್ಲಿ ವಾಸಿಂ ಜಾಫರ್, ವೀರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ಮತ್ತು ರಾಹುಲ್ ದ್ರಾವಿಡ್ ಜೊತೆಗೂಡಿ ಈ ಸಾಧನೆ ಮಾಡಿದ್ದರು.

ನ್ಯೂಝಿಲೆಂಡ್​ನಲ್ಲಿ ಹೊಸ ಇತಿಹಾಸ:

ನ್ಯೂಝಿಲೆಂಡ್‌ನಲ್ಲಿ ನಡೆದ ಟೆಸ್ಟ್ ಇತಿಹಾಸದಲ್ಲೇ ಯಾವುದೇ ತಂಡದ ಅಗ್ರ ನಾಲ್ವರು ಬ್ಯಾಟರ್‌ಗಳು ಒಂದೇ ಇನ್ನಿಂಗ್ಸ್‌ನಲ್ಲಿ 80 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿರುವುದು ಇದೇ ಮೊದಲು. ಈ ಮೂಲಕ ಯಶಸ್ವಿ ಜೈಸ್ವಾಲ್ (85), ಕೆಎಲ್ ರಾಹುಲ್ (136), ದೇವದತ್ ಪಡಿಕ್ಕಲ್ (80) ಹಾಗೂ ಶುಭ್​ಮನ್ ಗಿಲ್ (98) ಜೊತೆಗೂಡಿ ಕಿವೀಸ್ ನಾಡಿನಲ್ಲಿ ಹೊಸ ಇತಿಹಾಸ ರಚಿಸಿದ್ದಾರೆ.

118 ರನ್​ಗಳ ಮುನ್ನಡೆ:

ಮೂರನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 486 ರನ್ ಕಲೆಹಾಕಿದೆ. ಈ ಮೂಲಕ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 118 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ಸದ್ಯ ಕ್ರೀಸ್​ನಲ್ಲಿ ರಿಷಭ್ ಪಂತ್ (55) ಹಾಗೂ ಅನ್ಶುಲ್ ಕಂಬೋಜ್ (0) ಬ್ಯಾಟಿಂಗ್ ಕಾಯ್ದುಕೊಂಡಿದ್ದು, ನಾಲ್ಕನೇ ದಿನದಾಟದಲ್ಲಿ ಬ್ಯಾಟಿಂಗ್ ಮುಂದುವರೆಸಲಿದ್ದಾರೆ.

ನ್ಯೂಝಿಲೆಂಡ್ ಪ್ಲೇಯಿಂಗ್ 11: ಟಾಮ್ ಲ್ಯಾಥಮ್ (ನಾಯಕ) , ಡೆವೊನ್ ಕಾನ್ವೇ , ಹೆನ್ರಿ ನಿಕೋಲ್ಸ್ , ರಚಿನ್ ರವೀಂದ್ರ , ಡ್ಯಾರಿಲ್ ಮಿಚೆಲ್ , ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್) , ಗ್ಲೆನ್ ಫಿಲಿಪ್ಸ್ , ನಾಥನ್ ಸ್ಮಿತ್ , ಕೈಲ್ ಜೇಮಿಸನ್ , ಮ್ಯಾಟ್ ಹೆನ್ರಿ.

ಇದನ್ನೂ ಓದಿ: ಬಾಟಲಿ ಮುಚ್ಚಳದ ಕಳ್ಳಾಟ! ಅಖ್ತರ್ ಬಾಯ್ಬಿಟ್ಟ ಸ್ಫೋಟಕ ಸತ್ಯ!

ಭಾರತ ಪ್ಲೇಯಿಂಗ್ 11: ಕೆಎಲ್ ರಾಹುಲ್ , ಯಶಸ್ವಿ ಜೈಸ್ವಾಲ್ , ದೇವದತ್ ಪಡಿಕ್ಕಲ್ , ಶುಭ್​ಮನ್ ಗಿಲ್ (ನಾಯಕ) , ರಿಷಭ್ ಪಂತ್ (ವಿಕೆಟ್ ಕೀಪರ್) , ವಾಷಿಂಗ್ಟನ್ ಸುಂದರ್ , ಧ್ರುವ್ ಜುರೆಲ್ , ಆಕಾಶ್ ದೀಪ್ , ಅನ್ಶುಲ್ ಕಂಬೋಜ್ , ಜಸ್​ಪ್ರೀತ್ ಬುಮ್ರಾ , ಪ್ರಸಿದ್ಧ್ ಕೃಷ್ಣ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಬಿಗ್ ಬಾಸ್ ನಾಮಿನೇಷನ್ ಪಟ್ಟಿಯಲ್ಲಿ 6 ಜನ; ವಾರ ಹೊರಹೋಗುವ ಸ್ಪರ್ಧಿ ಯಾರು?
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಪುಟ್ಟೇನಹಳ್ಳಿ ವಿನಾಯಕ ನಗರದಲ್ಲಿ ಮದುವೆ ವಿಚಾರಕ್ಕೆ ಗನ್ ತೋರಿಸಿ ಬೆದರಿಕೆ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ಸಾರ್ವಜನಿಕರ ದೂರುಗಳು ‘ಸಕಾಲ’ ವ್ಯಾಪ್ತಿಗೆ: ವಿಳಂಬಕ್ಕೆ ₹1,500 ದಂಡ
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ತುಳಸಿ ವಿವಾಹದ ಶುಭ ದಿನದಂದು ಯಾವ ರಾಶಿಯವರಿಗೆ ಒಲಿಯಲಿದೆ ಅದೃಷ್ಟ?
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು; ಮನೆಯ ಮಹರಾಣಿ ಸೇರಿ ಮೂವರು ಕಳಪೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಚಿಕ್ಕಣ್ಣನ ಡ್ಯಾನ್ಸ್ ನೋಡಿ ಪ್ರಭುದೇವಗೆ ಹೋಲಿಸಿದ ಶಿವಣ್ಣ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್