AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್​ಗೆ ತಕ್ಕ ಪ್ರತ್ಯುತ್ತರ; ಮೊದಲ ಟೆಸ್ಟ್​ನಲ್ಲಿ ಭಾರತಕ್ಕೆ ಮೇಲುಗೈ

INDW vs AUSW: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿದ್ದು, ಮೊದಲ ಇನ್ನಿಂಗ್ಸ್​ನಲ್ಲಿ ಇಡೀ ಆಸ್ಟ್ರೇಲಿಯಾ ತಂಡ 219 ರನ್​ಗಳಿಗೆ ಆಲೌಟ್ ಆಗಿದೆ.

IND vs AUS: ಆಸೀಸ್​ಗೆ ತಕ್ಕ ಪ್ರತ್ಯುತ್ತರ; ಮೊದಲ ಟೆಸ್ಟ್​ನಲ್ಲಿ ಭಾರತಕ್ಕೆ ಮೇಲುಗೈ
ಭಾರತ ಮಹಿಳಾ ತಂಡ
ಪೃಥ್ವಿಶಂಕರ
|

Updated on:Dec 21, 2023 | 9:43 PM

Share

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ನಡೆಯುತ್ತಿರುವ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ (India Women vs Australia Women) ತಂಡದ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ಮೇಲುಗೈ ಸಾಧಿಸಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲು ಬ್ಯಾಟ್ ಮಾಡಿದ್ದು, ಮೊದಲ ಇನ್ನಿಂಗ್ಸ್​ನಲ್ಲಿ ಇಡೀ ಆಸ್ಟ್ರೇಲಿಯಾ ತಂಡ 219 ರನ್​ಗಳಿಗೆ ಆಲೌಟ್ ಆಗಿದೆ. ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಪೂಜಾ ವಸ್ತ್ರಕರ್ ಗರಿಷ್ಠ 4 ವಿಕೆಟ್ ಪಡೆದರೆ, ಸ್ನೇಹ್ ರಾಣಾ 3 ವಿಕೆಟ್ ಹಾಗೂ ದೀಪ್ತಿ ಶರ್ಮಾ 2 ವಿಕೆಟ್ ಪಡೆದು ಆಸೀಸ್ ಇನ್ನಿಂಗ್ಸ್​ಗೆ ಕೊನೆ ಹಾಡಿದರು.

219ರನ್​ಗಳಿಗೆ ಆಲೌಟ್

ಮೊದಲ ಇನ್ನಿಂಗ್ಸ್‌ನಲ್ಲಿ ಇಡೀ ಆಸ್ಟ್ರೇಲಿಯಾ ತಂಡ 219 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ತಹ್ಲಿಯಾ ಮೆಕ್‌ಗ್ರಾತ್ 50 ರನ್‌ಗಳ ಅತ್ಯಧಿಕ ಇನ್ನಿಂಗ್ಸ್‌ಗಳನ್ನು ಆಡಿದರೆ, ಬೆತ್ ಮೂನಿ 40 ರನ್ ಗಳ ಇನಿಂಗ್ಸ್ ಆಡಿದರು. ನಾಯಕಿ ಅಲಿಸ್ಸಾ ಹೀಲಿ 38 ಮತ್ತು ಕಿಮ್ ಗಾರ್ತ್ 28 ರನ್​ಗಳ ಕೊಡುಗೆ ನೀಡಿದರು. 219 ರನ್‌ಗಳಿಗೆ ಆಲೌಟ್ ಆದ ಆಸ್ಟ್ರೇಲಿಯಾ ಇದೀಗ ಪಂದ್ಯದಲ್ಲಿ ಸೋಲಿನ ಭೀತಿ ಎದುರಿಸುತ್ತಿದೆ.

AUS vs PAK: ಪರ್ತ್​ ಟೆಸ್ಟ್ ಸೋತ ಪಾಕ್ ತಂಡಕ್ಕೆ ಡಬಲ್ ಶಾಕ್ ನೀಡಿದ ಐಸಿಸಿ..!

98 ರನ್ ಬಾರಿಸಿದ ಭಾರತ

ಮೊದಲ ಇನಿಂಗ್ಸ್‌ನಲ್ಲಿ ಮೊದಲ ದಿನದಾಟದ ಅಂತ್ಯಕ್ಕೆ ಭಾರತ ತಂಡ ಒಂದು ವಿಕೆಟ್ ಕಳೆದುಕೊಂಡು 98 ರನ್ ಗಳಿಸಿದೆ. ಭಾರತದ ಏಕೈಕ ವಿಕೆಟ್ ಶಫಾಲಿ ವರ್ಮಾ ರೂಪದಲ್ಲಿ ಪತನಗೊಂಡಿದೆ. ಶಫಾಲಿ 59 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಶಫಾಲಿ ತಮ್ಮ ಇನ್ನಿಂಗ್ಸ್‌ನಲ್ಲಿ 8 ಬೌಂಡರಿಗಳನ್ನು ಬಾರಿಸಿದರು. ಇವರಲ್ಲದೇ ಸ್ಮೃತಿ ಮಂಧಾನ ಅಜೇಯ 43 ರನ್ ಹಾಗೂ ಸ್ನೇಹ್ ರಾಣಾ 3 ರನ್ ಗಳಿಸಿ ಅಜೇಯರಾಗಿದ್ದಾರೆ.

ಭಾರತಕ್ಕೆ ಮೇಲುಗೈ

ಆಸ್ಟ್ರೇಲಿಯಾ ಪರ ಜೆಸ್ ಜೊನಾಸೆನ್ ಏಕೈಕ ವಿಕೆಟ್ ಪಡೆದರು. ಸದ್ಯ ಭಾರತ ತಂಡ 121 ರನ್‌ಗಳ ಹಿನ್ನಡೆಯಲ್ಲಿದೆ. ಭಾರತ ಮಹಿಳಾ ಕ್ರಿಕೆಟ್ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ನಿರಂತರವಾಗಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಆಸ್ಟ್ರೇಲಿಯಕ್ಕೂ ಮುನ್ನ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಆಡಿತ್ತು. ಇದರಲ್ಲಿ ಭಾರತ ಮಹಿಳಾ ತಂಡ ಗೆಲುವು ಸಾಧಿಸಿತ್ತು. ಇನ್ನು ಈ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವಿನತ್ತ ಮುನ್ನುಗ್ಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Thu, 21 December 23

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು