INDW vs ENGW: ಮಂದಾನ ಸ್ಪೋಟಕ ಬ್ಯಾಟಿಂಗ್ ವ್ಯರ್ಥ: 8 ವಿಕೆಟ್​ಗಳಿಂದ ಗೆದ್ದ ಇಂಗ್ಲೆಂಡ್​ಗೆ ಟಿ-20 ಸರಣಿ

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ 18.4 ಓವರ್​ನಲ್ಲೇ ಕೇವಲ 2 ವಿಕೆಟ್ ಕಳೆದುಕೊಂಡು 154 ರನ್ ಬಾರಿಸುವ ಮೂಲಕ ಭರ್ಜರಿ ಜಯ ಸಾಧಿಸಿತು. ಡೆನಿಯಲ್ ವ್ಯಾಟ್ ಬ್ಯಾಟಿಂಗ್ ಅಬ್ಬವನ್ನು ತಡೆಯಲು ಭಾರತೀಯ ಬೌಲರ್​​ಗಳು ವಿಫಲರಾದರು.

INDW vs ENGW: ಮಂದಾನ ಸ್ಪೋಟಕ ಬ್ಯಾಟಿಂಗ್ ವ್ಯರ್ಥ: 8 ವಿಕೆಟ್​ಗಳಿಂದ ಗೆದ್ದ ಇಂಗ್ಲೆಂಡ್​ಗೆ ಟಿ-20 ಸರಣಿ
ENGW vs INDW
Follow us
| Updated By: Vinay Bhat

Updated on: Jul 15, 2021 | 7:14 AM

ಭಾರೀ ಕುತೂಹಲ ಕೆರಳಿಸಿದ್ದ ಭಾರತ ಹಾಗೂ ಇಂಗ್ಲೆಂಡ್ (India vs England) ಮಹಿಳೆಯರ ನಡುವಣ ನಿರ್ಣಾಯಕ ಮೂರನೇ ಟಿ-20 ಪಂದ್ಯದದಲ್ಲಿ (3rd T20I) ಆಂಗ್ಲರು ಭರ್ಜರಿ ಜಯ ಸಾಧಿಸಿ ಸರಣಿ ವಶಪಡಿಸಿಕೊಂಡಿದ್ದಾರೆ. ಸೃತಿ ಮಂದಾನ (Smriti Mandhana) ಸ್ಫೋಟಕ ಆಟ ತಂಡಕ್ಕೆ ಯಾವುದೆ ಸಹಾಯ ಮಾಡಲಿಲ್ಲ. ಡೆನಿಯಲ್ ವ್ಯಾಟ್ (Danielle Wyatt) ಅವರ ಅಜೇಯ ಆಟದ ನೆರವಿನಿಂದ ಇಂಗ್ಲೆಂಡ್ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರು ಟಿ-20 ಪಂದ್ಯಗಳಲ್ಲಿ 2-1 ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಸರಣಿ ವಶಪಡಿಸಿಕೊಂಡಿತು.

ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತ ಅಂದುಕೊಂಡಂತೆ ಉತ್ತಮ ಆರಂಭ ಪಡೆದುಕೊಂಡಿಲ್ಲ. ಮೊದಲ ಓವರ್​ನಲ್ಲೇ ಶೆಫಾಲಿ ವರ್ಮಾ ಶೂನ್ಯಕ್ಕೆ ಔಟ್ ಆದರು. ಹರ್ಲೀನ್ ಡಿಯೋನಲ್ 6 ರನ್​ಗೆ ನಿರ್ಗಮಿಸಿ. ಈ ಸಂದರ್ಭ ತಂಡಕ್ಕೆ ಆಸರೆಯಾಗಿದ್ದು, ಸ್ಮೃತಿ ಮಂದಾನ ಮತ್ತು ನಾಯಕಿ ಹರ್ಮನ್​​ಪ್ರತ್ ಕೌರ್.

13 ರನ್​ಗೆ 2 ವಿಕೆಟ್​ ಕಳೆದುಕೊಂಡಿದ್ದ ವೇಳೆ ಜೊತೆಯಾದ ಈ ಜೋಡಿ ಅತ್ಯುತ್ತಮ ಆಟ ಪ್ರದರ್ಶಿಸಿತು. ಅದರಲ್ಲೂ ಮಂದಾನ ಬಿರುಸಿನ ಆಟಕ್ಕೆ ಮುಂದಾದರೆ ಕೌರ್ ಉತ್ತಮ ಸಾತ್ ನೀಡಿದರು. ಈ ಜೋಡಿ 68 ರನ್​ಗಳ ಕಾಣಿಕೆ ನೀಡಿತು. 26 ಎಸೆತಗಳಲ್ಲಿ 5 ಬೌಂಡರಿ 1 ಸಿಕ್ಸರ್ ಬಾರಿಸಿ ಕೌರ್ 36 ರನ್​ಗೆ ಔಟ್ ಆದರು. ಇತ್ತ ಸ್ನೇ ರಾಣ ಕೇವಲ 4 ರನ್​ಗೆ ಬ್ಯಾಟ್ ಕೆಳಗಿಟ್ಟರು.

ಇದರ ನಡುವೆ ಮಂದಾನ ತಂಡದ ಮೊತ್ತವನ್ನು ಹೆಚ್ಚಿಸುವಲ್ಲಿ ಪ್ರಯತ್ನ ಪಟ್ಟರು. 51 ಎಸೆತಗಳನ್ನು ಎದುರಿಸಿದ ಮಂದಾನ 8 ಬೌಂಡರಿ, 2 ಸಿಕ್ಸರ್​​ನೊಂದಿಗೆ 70 ರನ್ ಬಾರಿಸಿದರು, ರಿಚಾ ಘೋಶ್ 20 ರನ್ ಗಳಿಸಿದರು. ಅಂತಿಮವಾಗಿ ಭಾರತ ನಿಗದಿತ 20 ಓವರ್​ನಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಕಲೆಹಾಕಿತು.

ಸವಾಲಿನ ಟಾರ್ಗೆಟ್ ಬೆನ್ನಟ್ಟಿದ ಇಂಗ್ಲೆಂಡ್ 18.4 ಓವರ್​ನಲ್ಲೇ ಕೇವಲ 2 ವಿಕೆಟ್ ಕಳೆದುಕೊಂಡು 154 ರನ್ ಬಾರಿಸುವ ಮೂಲಕ ಭರ್ಜರಿ ಜಯ ಸಾಧಿಸಿತು. ಡೆನಿಯಲ್ ವ್ಯಾಟ್ ಬ್ಯಾಟಿಂಗ್ ಅಬ್ಬವನ್ನು ತಡೆಯಲು ಭಾರತೀಯ ಬೌಲರ್​​ಗಳು ವಿಫಲರಾದರು.

ವ್ಯಾಟ್ ಕೇವಲ 56 ಎಸೆತಗಳಲ್ಲಿ 12 ಬೌಂಡರಿ, 1 ಸಿಕ್ಸರ್ ಸಿಡಿಸಿ ಅಜೇಯ 89 ರನ್ ಚಚ್ಚಿದರು. ಇವರಿಗೆ ಕೈಜೋಡಿಸಿದ ನತಾಲಿ ಸ್ಕಿವರ್ 36 ಎಸೆತಗಳಲ್ಲಿ 42 ರನ್ ಬಾರಿಸಿದರು. 8 ವಿಕೆಟ್​ಗಳ ಅಮೋಘ ಗೆಲುವಿನೊಂದಿಗೆ ಇಂಗ್ಲೆಂಡ್ ಮಹಿಳಾ ತಂಡ 2-1 ಮುನ್ನಡೆ ಸಾಧಿಸಿ ಟಿ-20 ಸರಣಿ ವಶಪಡಿಸಿಕೊಂಡಿತು. ಡೆನಿಯಲ್ ವ್ಯಾಟ್ ಪಂದ್ಯಶ್ರೇಷ್ಠ ಪ್ರಶಸ್ತಿ ಬಾಜಿಕೊಂಡರೆ, ಟೂರ್ನಿಯದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ನತಾಲಿ ಸ್ಕಿವರ್ ಸರಣಿಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿದರು.

ಸಾಮರ್ಸೆಟ್ ಎರಡನೇ ಇನ್ನಿಂಗ್ಸ್​ನಲ್ಲಿ 6 ವಿಕೆಟ್​ ಪಡೆದ ಅಶ್ವಿನ್ ಇಂಗ್ಲಿಷ್ ಆಟಗಾರರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ !

Tokyo Olympics: ಟೋಕಿಯೋ ಒಲಂಪಿಕ್ಸ್​ಗೆ ಆಳ್ವಾಸ್​ನ ಇಬ್ಬರು ವಿದ್ಯಾರ್ಥಿನಿಯರು ಆಯ್ಕೆ; ಪ್ರೋತ್ಸಾಹಧನ ಘೋಷಿಸಿದ ಮೋಹನ್ ಆಳ್ವ

(ENG beats IND by eight wickets to win the match and series)

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ