AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

INDW vs SAW: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಮೊದಲ ಟಿ20ಗೆ ಉಭಯ ತಂಡಗಳು ಹೀಗಿವೆ

INDW vs SAW: ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ಕ್ರಿಕೆಟ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.

INDW vs SAW: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಭಾರತ; ಮೊದಲ ಟಿ20ಗೆ ಉಭಯ ತಂಡಗಳು ಹೀಗಿವೆ
ಭಾರತ- ದಕ್ಷಿಣ ಆಫ್ರಕಾ
ಪೃಥ್ವಿಶಂಕರ
|

Updated on:Jul 05, 2024 | 6:57 PM

Share

ಭಾರತೀಯ ಮಹಿಳಾ ಕ್ರಿಕೆಟ್ ತಂಡ ಇಂದು ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಹಿಳಾ ಕ್ರಿಕೆಟ್ ತಂಡವನ್ನು ಎದುರಿಸುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕಿ ಹರ್ಮನ್​ಪ್ರೀತ್ ಕೌರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3-0 ಅಂತರದಲ್ಲಿ ಮತ್ತು ಏಕೈಕ ಟೆಸ್ಟ್ ಪಂದ್ಯವನ್ನು 10 ವಿಕೆಟ್‌ಗಳಿಂದ ಗೆದ್ದಿರುವ ಭಾರತ ಮಹಿಳಾ ತಂಡ ಈ ಟಿ20 ಸರಣಿಯನ್ನೂ ತನ್ನ ತೆಕ್ಕೆಗೆ ಹಾಕಿಕೊಳ್ಳುವ ಇರಾದೆಯಲ್ಲಿದೆ. ಇನ್ನು ಟಾಸ್ ಜೊತೆಗೆ ಉಭಯ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.

ಉಭಯ ತಂಡಗಳು ಹೀಗಿವೆ

ದಕ್ಷಿಣ ಆಫ್ರಿಕಾ ತಂಡ: ಲಾರಾ ವೊಲ್ವಾರ್ಡ್ಟ್ (ನಾಯಕಿ), ತಜ್ಮಿನ್ ಬ್ರಿಟ್ಸ್, ಮಾರಿಜಾನ್ನೆ ಕಪ್, ಅನ್ನೆಕೆ ಬಾಷ್, ಕ್ಲೋಯ್ ಟ್ರಯಾನ್, ನಾಡಿನ್ ಡಿ ಕ್ಲರ್ಕ್, ಆನ್ನೆರಿ ಡೆರ್ಕ್ಸೆನ್, ಎಲಿಜ್-ಮಾರಿ ಮಾರ್ಕ್ಸ್, ಸಿನಾಲೊ ಜಾಫ್ತಾ (ವಿಕೆಟ್ ಕೀಪರ್), ನಾನ್ಕುಲುಲೆಕೊ ಮ್ಲಾಬಾ, ಅಯಾಬೊಂಗಾ ಖಾಕಾ.

ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ರಾಧಾ ಯಾದವ್, ಆಶಾ ಸೋಭಾನಾ, ರೇಣುಕಾ ಸಿಂಗ್ .

ಟಿ20 ಪ್ರದರ್ಶನ

ಆತಿಥೇಯ ಭಾರತ ತಂಡ ಟಿ20 ಮಾದರಿಯಲ್ಲಿ ಅಮೋಘ ಫಾರ್ಮ್‌ನಲ್ಲಿದ್ದು, ಆಡಿರುವ ಕಳೆದ 5 ಟಿ20 ಪಂದ್ಯಗಳನ್ನು ಗೆದ್ದಿದೆ. ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಆಫ್ರಿಕಾದ ಮಹಿಳಾ ತಂಡವು ತನ್ನ ಕೊನೆಯ 5 ಟಿ20 ಪಂದ್ಯಗಳಲ್ಲಿ 3 ರಲ್ಲಿ ಸೋತಿದೆ. ಹೀಗಾಗಿ ಈ ಸರಣಿಯಲ್ಲಿ ಪುಟಿದೇಳುವ ನಿರೀಕ್ಷೆಯಲ್ಲಿದೆ.

ಸ್ಪಿನ್ನರ್‌ಗಳು ಸಹಾಯ

ಚೆಪಾಕ್‌ನ ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ, ಈ ಮೈದಾನದಲ್ಲಿ 62% ವಿಕೆಟ್‌ಗಳನ್ನು ಸ್ಪಿನ್ ಬೌಲರ್‌ಗಳು ತೆಗೆದುಕೊಂಡಿದ್ದಾರೆ. ದೀಪ್ತಿ ಶರ್ಮಾ, ರಾಧಾ ಯಾದವ್ ಮತ್ತು ಆಶಾ ಶೋಭನಾ ನೇತೃತ್ವದ ಪ್ರಬಲ ಸ್ಪಿನ್ ಬೌಲಿಂಗ್ ದಾಳಿಯನ್ನು ಹೊಂದಿರುವ ಭಾರತ ತಂಡಕ್ಕೆ ಇದು ಲಾಭದಾಯಕವಾಗಲಿದೆ.

ಬಲಾಬಲ

ಭಾರತ ತಂಡದ ಬ್ಯಾಟಿಂಗ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದು, ಇದರಲ್ಲಿ ಸ್ಮೃತಿ ಮಂಧಾನ, ಶೆಫಾಲಿ ವರ್ಮಾ ಮತ್ತು ಹರ್ಮನ್‌ಪ್ರೀತ್ ಕೌರ್ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ. ಮಂಧಾನ 129 ಟಿ20 ಅಂತರಾಷ್ಟ್ರೀಯ ಇನ್ನಿಂಗ್ಸ್‌ಗಳಲ್ಲಿ 27.52 ಸರಾಸರಿ ಮತ್ತು 121.35 ಸ್ಟ್ರೈಕ್ ರೇಟ್‌ನಲ್ಲಿ 3,220 ರನ್ ಬಾರಿಸಿದ್ದರೆ, ಶಫಾಲಿ ವರ್ಮಾ 73 ಇನ್ನಿಂಗ್ಸ್‌ಗಳಲ್ಲಿ 129.9 ಸ್ಟ್ರೈಕ್ ರೇಟ್‌ನಲ್ಲಿ 1,703 ರನ್ ಬಾರಿಸಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದ ನೇತೃತ್ವವನ್ನು ಎಂದಿನಂತೆ ಲಾರಾ ವೊಲ್ವಾರ್ಡ್ ವಹಿಸಲಿದ್ದು, ಭಾರತ ತಂಡಕ್ಕೆ ಸವಾಲೊಡ್ಡಲು ಮರಿಜನ್ ಕಪ್, ಸುನೆ ಲೂಸ್ ಮತ್ತು ನಡಿನ್ ಡಿ ಕ್ಲರ್ಕ್ ಅವರ ಆಲ್‌ರೌಂಡ್ ಸಾಮರ್ಥ್ಯಗಳ ಮೇಲೆ ಅವಲಂಬಿತವಾಗಿದೆ. ಕ್ಲೋಯ್ ಟ್ರಯಾನ್ ಕೂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಮರಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 pm, Fri, 5 July 24