U19 T20 World Cup final: ಭಾರತದ ವಿರುದ್ಧ ಟಾಸ್ ಗೆದ್ದ ಸೌತ್ ಆಫ್ರಿಕಾ
INDW vs SAW, U19 T20 World Cup final: ಅಂಡರ್-19 ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ಈ ಮ್ಯಾಚ್ನಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ಬ್ಯಾಟಿಂಗ್ ಆಯ್ದುಕೊಂಡಿದೆ. ಇನ್ನು ಈ ಮ್ಯಾಚ್ ಅನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಲೈವ್ ವೀಕ್ಷಿಸಬಹುದು.

ಕೌಲಾಲಂಪುರದ ಬೇಯುಮಾಸ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಅಂಡರ್-19 ಮಹಿಳಾ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸೌತ್ ಆಫ್ರಿಕಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.
ಇದಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು 5 ವಿಕೆಟ್ಗಳಿಂದ ಮಣಿಸಿ ಸೌತ್ ಆಫ್ರಿಕಾ ತಂಡ ಫೈನಲ್ಗೆ ಪ್ರವೇಶಿಸಿತ್ತು.
ಇನ್ನು ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಭಾರತ ತಂಡವು ಫೈನಲ್ಗೆ ಎಂಟ್ರಿ ಕೊಟ್ಟಿತು. ಅದರಂತೆ ಇದೀಗ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಫೈನಲ್ನಲ್ಲಿ ಮುಖಾಮುಖಿಯಾಗಿವೆ.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್:
ಸೌತ್ ಆಫ್ರಿಕಾ ಮಹಿಳಾ U19 (ಪ್ಲೇಯಿಂಗ್ XI): ಜೆಮ್ಮಾ ಬೋಥಾ, ಸಿಮೋನ್ ಲೌರೆನ್ಸ್, ಡಿಯಾರಾ ರಾಮ್ಲಕನ್, ಫೇ ಕೌಲಿಂಗ್, ಕೈಲಾ ರೆನೆಕೆ (ನಾಯಕಿ), ಕರಾಬೊ ಮೆಸೊ (ವಿಕೆಟ್ ಕೀಪರ್), ಮೈಕೆ ವ್ಯಾನ್ ವೂರ್ಸ್ಟ್, ಸೆಶ್ನಿ ನಾಯ್ಡು, ಆಶ್ಲೀಗ್ ವ್ಯಾನ್ ವೈಕ್, ಮೊನಾಲಿಸಾ ಲೆಗೋಡಿ, ನ್ತಾಬಿಸೆಂಗ್ ನಿನಿ.
ಇದನ್ನೂ ಓದಿ: ಹಾರ್ದಿಕ್ ಪಾಂಡ್ಯ ಪವರ್ಗೆ ವಿರಾಟ್ ಕೊಹ್ಲಿಯ ದಾಖಲೆ ಉಡೀಸ್
ಭಾರತ ಮಹಿಳಾ U19 (ಪ್ಲೇಯಿಂಗ್ XI): ಜಿ ಕಮಲಿನಿ (ವಿಕೆಟ್ ಕೀಪರ್), ಗೊಂಗಡಿ ತ್ರಿಶಾ, ಸನಿಕಾ ಚಲ್ಕೆ, ನಿಕಿ ಪ್ರಸಾದ್ (ನಾಯಕಿ), ಈಶ್ವರಿ ಅವ್ಸಾರೆ, ಮಿಥಿಲಾ ವಿನೋದ್, ಆಯುಷಿ ಶುಕ್ಲಾ, ಜೋಶಿತಾ ವಿಜೆ, ಶಬ್ನಮ್ ಎಂಡಿ ಶಕಿಲ್, ಪರುಣಿಕಾ ಸಿಸೋಡಿಯಾ, ವೈಷ್ಣವಿ ಶರ್ಮಾ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
IND-W vs SA-W U19 ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯವನ್ನು ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ 2 ಮತ್ತು ಸ್ಟಾರ್ ಸ್ಪೋರ್ಟ್ಸ್ 2 HD ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಈ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ 1 ಹಿಂದಿ (HD ಮತ್ತು SD) ನಲ್ಲಿ ಪ್ರಸಾರವಾಗಲಿದೆ. ಇನ್ನು ಈ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.