ರಾಯ್‌ಪುರದಲ್ಲಿ ಭಾರತ-ಜಿಂಬಾಬ್ವೆ ನಡುವೆ 2ನೇ ಟಿ20 ಪಂದ್ಯ; ಉಚಿತವಾಗಿ ವೀಕ್ಷಿಸುವುದು ಹೇಗೆ?

ಭಾರತ-ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯವು ಅಕ್ಟೋಬರ್ 10 ರಂದು ರಾಯ್‌ಪುರದಲ್ಲಿ ನಡೆಯಲಿದೆ. ಮೊದಲ ಪಂದ್ಯ ಗೆದ್ದರೂ, ಭಾರತದ ಟಾಪ್ ಆರ್ಡರ್ ಬ್ಯಾಟಿಂಗ್ ಕಳಪೆಯಾಗಿತ್ತು. ಈ ಪಂದ್ಯದಲ್ಲಿ ತಂಡ ತಪ್ಪುಗಳನ್ನು ತಿದ್ದಿಕೊಂಡು ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದೆ. ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರ ಪ್ರಸಾರವಾಗಲಿದೆ. ಸಂಪೂರ್ಣ ಪಂದ್ಯದ ಮಾಹಿತಿ ಇಲ್ಲಿದೆ.

ರಾಯ್‌ಪುರದಲ್ಲಿ ಭಾರತ-ಜಿಂಬಾಬ್ವೆ ನಡುವೆ 2ನೇ ಟಿ20 ಪಂದ್ಯ; ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ Vs ಜಿಂಬಾಬ್ವೆ
Image Credit source: BCCI Women X

Updated on: Oct 18, 2026 | 3:46 PM

ಭಾರತ ಮತ್ತು ಜಿಂಬಾಬ್ವೆ ಮಹಿಳಾ ತಂಡಗಳ ನಡುವೆ ಮೂರು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಸ್ಮೃತಿ ಮಂಧಾನ ನೇತೃತ್ವದ ಭಾರತ ಮಹಿಳಾ ತಂಡ ಮೊದಲ ಟಿ20 ಪಂದ್ಯವನ್ನು ನಾಲ್ಕು ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ತಂಡದ ಬ್ಯಾಟಿಂಗ್‌ ವಿಭಾಗದ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಅಗ್ರ ಬ್ಯಾಟರ್​ಗಳು ಒಂದಂಕಿಗೆ ಔಟಾಗುವ ಮೂಲಕ ತಂಡವನ್ನು ಸೋಲಿನ ಸುಳಿಗೆ ಸಿಲುಕಿಸಿದ್ದರು. ನಾಯಕಿ ಮಂಧಾನ, ಶಫಾಲಿ ವರ್ಮಾ, ಅನುಷ್ಕಾ ಶರ್ಮಾ, ಹರ್ಮನ್ ಪ್ರೀತ್ ಕೌರ್ ಮತ್ತು ರಿಚಾ ಘೋಷ್ ಎರಡಂಕಿಯ ರನ್ ಗಳಿಸಲು ವಿಫಲರಾದರು. ಆದಾಗ್ಯೂ ಚೊಚ್ಚಲ ಪಂದ್ಯವನ್ನಾಡಿದ ಕನ್ನಡತಿ ನಿಕ್ಕಿ ಪ್ರಸಾದ್ ಮತ್ತು ದೀಪ್ತಿ ಶರ್ಮಾ ನಡುವಿನ ಜೊತೆಯಾಟ ತಂಡವನ್ನು ಗೆಲುವಿನ ದಡ ಮುಟ್ಟಿಸಿತ್ತು. ಹೀಗಾಗಿ ಎರಡನೇ ಪಂದ್ಯದಲ್ಲಿ ಆತಿಥೇಯ ತಂಡ ತನ್ನ ತಪ್ಪುಗಳನ್ನು ತಿದ್ದಿಕೊಂಡು ಕಣಕ್ಕಿಳಿಯಬೇಕಿದೆ. ಉಳಿದಂತೆ ಪಂದ್ಯದ ಬಗ್ಗೆಗಿನ ಪೂರ್ಣ ವಿವರ ಇಂತಿದೆ.

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ಅಕ್ಟೋಬರ್ 10 ರ ಭಾನುವಾರದಂದು ನಡೆಯಲಿದೆ.

Loading...

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ-ಜಿಂಬಾಬ್ವೆ ಮಹಿಳಾ ತಂಡಗಳ ನಡುವಿನ 2ನೇ ಟಿ20 ಪಂದ್ಯದ ನೇರ ಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ಶಫಾಲಿ ವರ್ಮಾ, ಅನುಷ್ಕಾ ಶರ್ಮಾ, ಹರ್ಮನ್‌ಪ್ರೀತ್ ಕೌರ್, ನಿಕ್ಕಿ ಪ್ರಸಾದ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ಶ್ರೀ ಚರಣಿ, ನಂದಿನಿ ಶರ್ಮಾ, ಕ್ರಾಂತಿ ಗೌಡ್, ಗುಣಲನ್ ಕಮಲಿನಿ, ಪ್ರೇಮಾ ರಾವತ್, ಜಿಂತಿಮಣಿ ಕಲಿತಾ, ಮಿನ್ನು ಮಣಿ.

ಜಿಂಬಾಬ್ವೆ ಮಹಿಳಾ ತಂಡ: ಶಾರ್ನೆ ಮೇಯರ್ಸ್, ಚಿಡ್ಜಾ ಧುರುರು (ವಿಕೆಟ್ ಕೀಪರ್), ಚಿಪೊ ಮುಗೇರಿ-ತಿರಿಪಾನೊ, ಮಾಡೆಸ್ಟರ್ ಮುಪಚಿಕ್ವಾ (ವಿಕೆಟ್ ಕೀಪರ್), ಜೋಸೆಫೀನ್ ನ್ಕೊಮೊ (ನಾಯಕಿ), ನೊಮ್ವೆಲೊ ಸಿಬಾಂಡಾ, ಲೊರಿನ್ ಫಿರಿ, ನ್ಯಾಶಾ ಗ್ವಾಂಝುರಾ, ಫ್ರಾನ್ಸಿಸ್ಕಾ ಚಿಪಾರೆ, ಕೆಲಿಸ್ ನ್ಧ್ಲೋವು, ಮಿಚೆಲ್ ಮಾವುಂಗೈ, ಒಲಿಂಡರ್ ಚಾರೆ, ಕುಡ್ಜೈ ಚಿಗೋರಾ, ಟೆಂಡೈ ಮಕುಶಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us