KL Rahul: ಗಾಯಗೊಂಡಿರುವ ಕೆಎಲ್ ರಾಹುಲ್ಗೆ ಮತ್ತೊಂದು ಶಾಕ್..!
Team India: ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ.
ಟೀಮ್ ಇಂಡಿಯಾದ (Team India) ಉಪನಾಯಕ ಕೆಎಲ್ ರಾಹುಲ್ (KL Rahul) ಗಾಯದ ಕಾರಣ ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಯಿಂದ ಹೊರಗುಳಿದಿದ್ದರು. ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ರಾಹುಲ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅಷ್ಟೇ ಅಲ್ಲದೆ ಮುಂಬರುವ ಇಂಗ್ಲೆಂಡ್ (India vs England) ವಿರುದ್ದ ಸರಣಿಯನ್ನು ಗಮನದಲ್ಲಿರಿಸಿ ಬಿಸಿಸಿಐ ಕೂಡ ಕೆಎಲ್ ರಾಹುಲ್ಗೆ ವಿಶ್ರಾಂತಿ ನೀಡಿತ್ತು. ಆದರೀಗ ಇಂಗ್ಲೆಂಡ್ ವಿರುದ್ದದ ಸರಣಿ ಆರಂಭಕ್ಕೂ ಮುನ್ನ ರಾಹುಲ್ ಗುಣಮುಖರಾಗುವುದು ಅನುಮಾನ ಎಂದು ಹೇಳಲಾಗಿದೆ. ರಾಹುಲ್ ಪ್ರಸ್ತುತ NCA ಯಲ್ಲಿ ರಿಹ್ಯಾಬ್ ಮಾಡುತ್ತಿದ್ದು, ಅವರ ಗಾಯ ಇನ್ನೂ ಸಂಪೂರ್ಣವಾಗಿ ವಾಸಿಯಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಅವರು ಜುಲೈ 1 ರಿಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಿಂದ ಹೊರಗುಳಿಯಬಹುದು ಎಂದು ವರದಿಯಾಗಿದೆ.
ಭಾರತ-ಇಂಗ್ಲೆಂಡ್ ನಡುವಣ ಸರಣಿ ಜುಲೈ 1 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಮೊದಲು ಏಕೈಕ ಟೆಸ್ಟ್ ಪಂದ್ಯವಾಡಲಾಗುತ್ತದೆ. ಆದರೆ ಇದೀಗ ಗಾಯದ ಕಾರಣ ರಾಹುಲ್ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಇದರ ಬಳಿಕ ಟಿ20 ಹಾಗೂ ಏಕದಿನ ಸರಣಿ ನಡೆಯಲಿದ್ದು, ಆ ವೇಳೆಗೆ ಕೆಎಲ್ ರಾಹುಲ್ ಚೇತರಿಸಿಕೊಳ್ಳದಿದ್ದರೆ ಏಕದಿನ ಹಾಗೂ ಟಿ20 ಸರಣಿಗಳಲ್ಲೂ ಆಡುವುದು ಸಹ ಡೌಟ್ ಎಂದು ಹೇಳಲಾಗಿದೆ.
ಕೆಎಲ್ ರಾಹುಲ್ ಯಾವಾಗ ಮತ್ತೆ ಫೀಲ್ಡ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ಇನ್ನೂ ಕೂಡ ಸ್ಪಷ್ಟವಾಗಿಲ್ಲ. ಅವರು ಕೆಲವು ದಿನಗಳ ಹಿಂದೆ ಎನ್‌ಸಿಎ ತಲುಪಿದ್ದಾರೆ. ಅವರ ಗಾಯವು ಇನ್ನೂ ಸಂಪೂರ್ಣವಾಗಿ ವಾಸಿಯಾಗಿಲ್ಲ. ಹೀಗಾಗಿ ಇಂಗ್ಲೆಂಡ್ ಸರಣಿಯಲ್ಲಿ ಅವರು ಆಡುವುದು ಅನುಮಾನ ಎಂದು ಎನ್‌ಸಿಎ ಮೂಲಗಳು ತಿಳಿಸಿವೆ ಎಂದು ವರದಿಯಲ್ಲಿ ಹೇಳಲಾಗಿದೆ.
ಭಾರತ ತಂಡದ ಮೊದಲ ಗುಂಪು ಜೂನ್ 16 ರಂದು ಇಂಗ್ಲೆಂಡ್‌ಗೆ ತೆರಳಲಿದೆ. ಕೋಚ್‌ಗಳಾದ ರಾಹುಲ್ ದ್ರಾವಿಡ್, ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಸೇರಿದಂತೆ ಎರಡನೇ ಗುಂಪು ಜೂನ್ 20 ರಂದು ಹೊರಡಲಿದೆ. ಅಂದರೆ ತಂಡದಿಂದ ಹೊರಗಿರುವ ಆಟಗಾರರು ಮೊದಲೇ ತೆರಳಲಿದ್ದು, ಇದಾದ ಬಳಿಕ ಸೌತ್ ಆಫ್ರಿಕಾ ವಿರುದ್ದ ಸರಣಿ ಆಡುತ್ತಿರುವ ಕೆಲ ಆಟಗಾರರು ಕೋಚ್ ಜೊತೆ ಇಂಗ್ಲೆಂಡ್‌ಗೆ ಪ್ರಯಾಣಿಸಲಿದ್ದಾರೆ.
ಈ ಸರಣಿಗಾಗಿ ಈಗಾಗಲೇ 17 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ಒಂದು ವೇಳೆ ಕೆಎಲ್ ರಾಹುಲ್ ತಂಡದಲ್ಲಿ ಕಾಣಿಸಿಕೊಳ್ಳಲಿದಿದ್ದರೆ, ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಓಪನಿಂಗ್ ಮಾಡಲಿದ್ದಾರೆ. ಇನ್ನು ಬದಲಿ ಆಟಗಾರನನ್ನು ಆಯ್ಕೆ ಮಾಡಲು ಮುಂದಾದರೆ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬಹುದು. ಒಟ್ಟಿನಲ್ಲಿ ಟಿ20 ವಿಶ್ವಕಪ್ಗೂ ಮುನ್ನ ನಡೆಯುತ್ತಿರುವ ಪ್ರಮುಖ ಸರಣಿಯಿಂದ ಕೆಎಲ್ ರಾಹುಲ್ ಹೊರಗುಳಿದರೆ ಅದು ಟೀಮ್ ಇಂಡಿಯಾ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು. ಹೀಗಾಗಿ ಅವರು ಬೇಗನೆ ಚೇತರಿಸಿಕೊಂಡು ತಂಡವನ್ನು ಸೇರಿಕೊಳ್ಳುವಂತಾಗಲಿ ಎಂದು ಆಶಿಸೋಣ.
ಭಾರತೀಯ ಟೆಸ್ಟ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆಎಸ್ ಭರತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ , ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಪ್ರಸಿದ್ಧ ಕೃಷ್ಣ.
ಕ್ರಿಕೆಟ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.