ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್! ಮತ್ತೆ ತಂಡಕ್ಕೆ ಎಂಟ್ರಿ ಯಾವಾಗ?

Rohit Sharma: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಟೀಂ ಇಂಡಿಯಾ ತನ್ನ ನಿಯಮಿತ ನಾಯಕ ಅಂದರೆ ರೋಹಿತ್ ಶರ್ಮಾ ಇಲ್ಲದೆ ಕಣಕ್ಕಿಳಿಯಲಿದೆ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಿಂದ ರೋಹಿತ್ ಶರ್ಮಾ ಔಟ್! ಮತ್ತೆ ತಂಡಕ್ಕೆ ಎಂಟ್ರಿ ಯಾವಾಗ?
ರೋಹಿತ್ ಶರ್ಮಾ
Follow us
TV9 Web
| Updated By: ಪೃಥ್ವಿಶಂಕರ

Updated on:Dec 19, 2022 | 12:57 PM

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಟೀಂ ಇಂಡಿಯಾ (India vs Bangladesh) ತನ್ನ ನಿಯಮಿತ ನಾಯಕ ಅಂದರೆ ರೋಹಿತ್ ಶರ್ಮಾ (Rohit Sharma) ಇಲ್ಲದೆ ಕಣಕ್ಕಿಳಿಯಲಿದೆ. ರೋಹಿತ್ ಗಾಯದಿಂದ ಇನ್ನೂ ಚೇತರಿಸಿಕೊಂಡಿಲ್ಲ, ಈ ಕಾರಣದಿಂದಾಗಿ ಅವರು ಬಾಂಗ್ಲಾದೇಶಕ್ಕೆ ತಲುಪಲು ಸಾಧ್ಯವಾಗಲಿಲ್ಲ. ಹೀಗಾಗಿ ಎರಡನೇ ಟೆಸ್ಟ್‌ನಲ್ಲೂ ರೋಹಿತ್ ಶರ್ಮಾ ಬದಲಿಗೆ ಕೆಎಲ್ ರಾಹುಲ್ (KL Rahul) ತಂಡವನ್ನು ಮುನ್ನಡೆಸಲಿದ್ದಾರೆ. ಇದಲ್ಲದೆ, ಎರಡನೇ ಟೆಸ್ಟ್‌ನಲ್ಲಿಯೂ ರೋಹಿತ್ ಸ್ಥಾನದಲ್ಲಿ ಶುಭಮನ್ ಗಿಲ್ (Shubman Gill) ಅವರೇ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.

ಏಕದಿನ ಸರಣಿಯಲ್ಲಿ ಗಾಯಗೊಂಡಿದ್ದ ರೋಹಿತ್ ಶರ್ಮಾ, ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡಿರಲಿಲ್ಲ. ಆದರೆ ಎರಡನೇ ಟೆಸ್ಟ್‌ ಪಂದ್ಯಕ್ಕಾಗಿ ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ ಎಂಬ ಸುದ್ದಿ ಈ ಹಿಂದೆ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮೊದಲ ಟೆಸ್ಟ್ ಪಂದ್ಯದ ನಂತರ ಮಾತನಾಡಿದ್ದ ಕೆಎಲ್ ರಾಹುಲ್, ರೋಹಿತ್ ಶರ್ಮಾ ಬಗ್ಗೆ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಆದರೀಗ ಬಾಂಗ್ಲಾದೇಶ ವಿರುದ್ಧದ ಅಂತಿಮ ಟೆಸ್ಟ್‌ನಲ್ಲಿ ರೋಹಿತ್ ಇಲ್ಲದೆ ಟೀಂ ಇಂಡಿಯಾ ಕಣಕ್ಕಿಳಿಯುವುದು ಖಚಿತವಾಗಿದೆ. ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತ ತಂಡ ಡಿಸೆಂಬರ್ 22 ರಿಂದ ಬಾಂಗ್ಲಾದೇಶ ವಿರುದ್ಧ ಎರಡನೇ ಮತ್ತು ಕೊನೆಯ ಟೆಸ್ಟ್ ಪಂದ್ಯವನ್ನು ಆಡಬೇಕಿದೆ. ಈ ಪಂದ್ಯ ಮೀರ್‌ಪುರದಲ್ಲಿ ನಡೆಯಲಿದೆ.

IND vs SL: ಹಾರ್ದಿಕ್ ನಾಯಕ; ಕೊಹ್ಲಿ, ರೋಹಿತ್ ಔಟ್: ಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ

2. ರೋಹಿತ್ ಇಂಜುರಿಯಿಂದ ಚೇತರಿಸಿಕೊಂಡಿಲ್ಲ

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಿಂದ ರೋಹಿತ್ ಹೊರಗುಳಿಯುವ ಸುದ್ದಿ ಈಗ ಹೊರಬಿದ್ದಿದ್ದು, ವೈದ್ಯಕೀಯ ಪರೀಕ್ಷೆಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ರೋಹಿತ್ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಈ ಗಾಯದಿಂದಾಗಿ ಅವರು ಮೂರನೇ ಏಕದಿನ ಮತ್ತು ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದರು. ಆದರೆ ಇದೀಗ ಅವರು ಬಾಂಗ್ಲಾದೇಶ ಪ್ರವಾಸದಲ್ಲಿ ಆಡಬೇಕಿದ್ದ ಕೊನೆಯ ಟೆಸ್ಟ್‌ನಿಂದಲೂ ಹೊರಗುಳಿದಿದ್ದಾರೆ.

3. ಶ್ರೀಲಂಕಾ ವಿರುದ್ಧದ ಸರಣಿಗೆ ಎಂಟ್ರಿ

ಸುದ್ದಿ ಪ್ರಕಾರ, ರೋಹಿತ್ ಶರ್ಮಾ ಪ್ರಸ್ತುತ ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ರೋಹಿತ್​ಗೆ ಸದ್ಯಕ್ಕೆ ಬ್ಯಾಟಿಂಗ್ ಮಾಡಲು ಯಾವುದೇ ಸಮಸ್ಯೆ ಇಲ್ಲ. ಆದರೆ ಫೀಲ್ಡಿಂಗ್ ಮಾಡುವಲ್ಲಿ ಸಮಸ್ಯೆ ಇದೆ ಹೀಗಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ವಿರುದ್ಧದ ಎರಡನೇ ಟೆಸ್ಟ್‌ನಿಂದ ಹೊರಗುಳಿದಿರುವ ರೋಹಿತ್, 2023ರ ಜನವರಿಯಲ್ಲಿ ಶ್ರೀಲಂಕಾ ವಿರುದ್ಧದ ವೈಟ್ ಬಾಲ್ ಸರಣಿಯಿಂದ ಮೈದಾನಕ್ಕೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಟೀಂ ಇಂಡಿಯಾ ತವರಿನಲ್ಲಿ ಶ್ರೀಲಂಕಾ ವಿರುದ್ಧ 3 ಟಿ20 ಮತ್ತು ಏಕದಿನ ಸರಣಿಗಳನ್ನು ಆಡಲಿದ್ದು, ಜನವರಿ 3 ರಿಂದ ಈ ಸರಣಿ ಆರಂಭವಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Mon, 19 December 22