Rajat Patidar: ಗಾಯಗೊಂಡ ರಜತ್ ಪಾಟಿದಾರ್: RCB ಗೆ ಹೊಸ ಚಿಂತೆ ಶುರು

| Updated By: ಝಾಹಿರ್ ಯೂಸುಫ್

Updated on: Mar 07, 2024 | 10:16 AM

IPL 2024: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 25 ಸದಸ್ಯರ ಬಲಿಷ್ಠ ಪಡೆಯನ್ನು ರೂಪಿಸಿದೆ. ಈ ತಂಡದಲ್ಲಿ ಸ್ಥಾನ ಪಡೆದಿದ್ದ ಇಬ್ಬರು ಆಟಗಾರರು ಇದೀಗ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಮುಂಬರುವ ಐಪಿಎಲ್​ನಲ್ಲಿ ಈ ಆಟಗಾರರು ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ.

Rajat Patidar: ಗಾಯಗೊಂಡ ರಜತ್ ಪಾಟಿದಾರ್: RCB ಗೆ ಹೊಸ ಚಿಂತೆ ಶುರು
Rajat Patidar
Follow us on

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಬ್ಯಾಟರ್ ರಜತ್ ಪಾಟಿದಾರ್ (Rajat Patidar) ಗಾಯಗೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ನಡೆಸುತ್ತಿದ್ದಾಗ ಪಾಟಿದಾರ್ ಗಾಯಗೊಂಡಿದ್ದು, ಹೀಗಾಗಿ ಕೊನೆಯ ಪಂದ್ಯದಲ್ಲಿ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

ಮಾರ್ಚ್ 6, 2024 ರಂದು ಟೀಮ್ ಇಂಡಿಯಾದ ಅಭ್ಯಾಸದ ವೇಳೆ ರಜತ್ ಪಾಟಿದಾರ್ ಅವರ ಎಡ ಪಾದಕ್ಕೆ ಗಾಯವಾಗಿದೆ. ನೋವಿನಿಂದ ಬಳಲುತ್ತಿರುವ ಅವರು ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಉಳಿದಿರುವುದು ಕೇವಲ 2 ವಾರಗಳು ಮಾತ್ರ. ಅದರಲ್ಲೂ ಮೊದಲ ಪಂದ್ಯದಲ್ಲೇ ಆರ್​ಸಿಬಿ ಕಣಕ್ಕಿಳಿಯಲಿದೆ. ಇದೀಗ ವಾರಗಳು ಮಾತ್ರ ಉಳಿದಿರುವಾಗ ರಜತ್ ಪಾಟಿದಾರ್ ಗಾಯಗೊಂಡಿರುವುದು ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

RCB ತಂಡದ ಇಬ್ಬರು ಗಾಯಾಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಾಮ್ ಕರನ್ ಕೂಡ ಗಾಯಾಳುವಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಬಿಗ್ ಬ್ಯಾಷ್ ಲೀಗ್​ನಲ್ಲಿ ಕಣಕ್ಕಿಳಿದಿದ್ದ ಕರನ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಈ ಬಾರಿಯ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನಲಾಗುತ್ತಿದೆ. ಇದೀಗ ರಜತ್ ಪಾಟಿದಾರ್ ಕೂಡ ಗಾಯಗೊಂಡಿರುವುದು ಆರ್​ಸಿಬಿ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಬಹುದು.

IPL 2024 ಯಾವಾಗ ಶುರು?

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್​ನ 17ನೇ ಆವೃತ್ತಿಗೆ ಚಾಲನೆ ದೊರೆಯಲಿದೆ.

ಸದ್ಯ ಕೇವಲ 21 ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿದ್ದು, ಲೋಕಸಭಾ ಚುನಾವಣಾ ದಿನಾಂಕ ನಿಗದಿಯ ಬಳಿಕ ಉಳಿದ ಮ್ಯಾಚ್​ಗಳ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್ , ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೋನ್ ಗ್ರೀನ್, ಅಲ್ಝಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾಣ್.