T20 World Cup: ಬೆಳ್ಳಿ ಪರದೆಯ ಮೇಲೆ ಟಿ20 ವಿಶ್ವಕಪ್‌ ನೇರ ಪ್ರಸಾರ! ಟಿಕೆಟ್ ದರ ಎಷ್ಟು ಗೊತ್ತಾ?

T20 World Cup: ಪಂದ್ಯವನ್ನು ವೀಕ್ಷಿಸಲು ಟಿಕೆಟ್ ದರವನ್ನು 200 ರಿಂದ 500 ರೂ.ಗೆ ನಿಗದಿ ಪಡಿಸಲಾಗಿದೆ. ಐನಾಕ್ಸ್ ದೇಶದ 70 ನಗರಗಳಲ್ಲಿ 56 ಮಲ್ಟಿಪ್ಲೆಕ್ಸ್‌ಗಳಲ್ಲಿ 658 ಸ್ಕ್ರೀನ್‌ಗಳನ್ನು ಹೊಂದಿದೆ.

T20 World Cup: ಬೆಳ್ಳಿ ಪರದೆಯ ಮೇಲೆ ಟಿ20 ವಿಶ್ವಕಪ್‌ ನೇರ ಪ್ರಸಾರ! ಟಿಕೆಟ್ ದರ ಎಷ್ಟು ಗೊತ್ತಾ?
ಐನಾಕ್ಸ್ ಥಿಯೇಟರ್
Follow us
TV9 Web
| Updated By: ಪೃಥ್ವಿಶಂಕರ

Updated on: Oct 15, 2021 | 9:05 PM

ಐಪಿಎಸ್ ಮುಗಿದ ತಕ್ಷಣ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ರಸದೌತಣ ಸಿಗಲಿದೆ. ಕೆಲವೇ ದಿನಗಳಲ್ಲಿ ಟಿ20 ಕ್ರಿಕೆಟ್ ವಿಶ್ವಕಪ್ ಆರಂಭವಾಗಲಿದೆ. ಈ ವರ್ಷದ ಟಿ 20 ವಿಶ್ವಕಪ್‌ ಭಾರತದಲ್ಲಿ ನಡೆಯಬೇಕಿತ್ತು. ಆದಾಗ್ಯೂ, ಕೊರೊನಾ ಹಿನ್ನೆಲೆಯಲ್ಲಿ ಯುಎಇ ಮತ್ತು ಒಮಾನ್‌ನಲ್ಲಿ ಕಿರು ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಐಸಿಸಿ ಸಿದ್ಧತೆ ನಡೆಸಿದೆ. ಈ ಮೆಗಾ ಟೂರ್ನಮೆಂಟ್ ಕ್ರಿಕೆಟ್​ನಲ್ಲಿ ಭಾರತ ಆಡುವ ಪಂದ್ಯಗಳನ್ನು ಐನಾಕ್ಸ್ ಥಿಯೇಟರ್ ಗಳಲ್ಲಿ ಪ್ರದರ್ಶಿಸಲು ಮ್ಯಾನೇಜ್ಮೆಂಟ್ ಸಿದ್ಧತೆ ನಡೆಸಿಕೊಂಡಿದೆ. ಇದನ್ನು ಮಲ್ಟಿಪ್ಲೆಕ್ಸ್ ಮ್ಯಾನೇಜ್‌ಮೆಂಟ್ ಕಂಪನಿ ಐನಾಕ್ಸ್ ಲೇಸರ್ ಘೋಷಿಸಿದೆ. ಟಿ 20 ವಿಶ್ವಕಪ್ ಪಂದ್ಯಗಳು ಅಕ್ಟೋಬರ್ 17 ರಿಂದ ಆರಂಭವಾಗುತ್ತವೆ. ಅಂತಿಮ ಪಂದ್ಯ ನವೆಂಬರ್ 14 ರಂದು ನಡೆಯಲಿದೆ.

ಟಿಕೆಟ್ ದರ 200 ರಿಂದ 500 ರೂ. ಆದಾಗ್ಯೂ, ಐನಾಕ್ಸ್ ಮ್ಯಾನೇಜ್‌ಮೆಂಟ್ ಭಾರತ ಆಡುವ ಪಂದ್ಯಗಳನ್ನು ತಮ್ಮ ಐನಾಕ್ಸ್ ಮಲ್ಟಿಪ್ಲೆಕ್ಸ್ ಥಿಯೇಟರ್‌ಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಘೋಷಿಸಿದೆ. ಥಿಯೇಟರ್‌ನಲ್ಲಿ ಈ ರೀತಿಯ ಪಂದ್ಯಗಳನ್ನು ದೊಡ್ಡ ಪರದೆಯಲ್ಲಿ ನೋಡುವುದು ಕ್ರಿಕೆಟ್ ಮೈದಾನದಲ್ಲಿ ಪಂದ್ಯಗಳನ್ನು ನೋಡುವ ಭಾವನೆಯನ್ನು ನೀಡುತ್ತದೆ ಎಂದು ಐನಾಕ್ಸ್ ಹೇಳಿದೆ. ಪಂದ್ಯವನ್ನು ವೀಕ್ಷಿಸಲು ಟಿಕೆಟ್ ದರವನ್ನು 200 ರಿಂದ 500 ರೂ.ಗೆ ನಿಗದಿ ಪಡಿಸಲಾಗಿದೆ. ಐನಾಕ್ಸ್ ದೇಶದ 70 ನಗರಗಳಲ್ಲಿ 56 ಮಲ್ಟಿಪ್ಲೆಕ್ಸ್‌ಗಳಲ್ಲಿ 658 ಸ್ಕ್ರೀನ್‌ಗಳನ್ನು ಹೊಂದಿದೆ. ಹೀಗಾಗಿ ಈ ಎಲ್ಲಾ ಪರದೆಗಳಲ್ಲೂ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ವೀಕ್ಷಿಸಬಹುದು.

ಟೀಮ್ ಇಂಡಿಯಾದ ವೇಳಾಪಟ್ಟಿ ಹೀಗಿದೆ ಈ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಗ್ರೂಪ್-ಬಿ ಯಲ್ಲಿ ಸ್ಥಾನ ಪಡೆದಿದೆ. ತಂಡವು ತನ್ನ ಮೊದಲ ಪಂದ್ಯವನ್ನು ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಅಕ್ಟೋಬರ್ 24 ರಂದು ಆಡಲಿದೆ. ಇದರ ನಂತರ ತಂಡವು ಅಕ್ಟೋಬರ್ 31 ರಂದು ನ್ಯೂಜಿಲೆಂಡ್ ವಿರುದ್ಧ ಆಡಬೇಕಿದೆ. ಈ ಎರಡೂ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. ಇದರ ನಂತರ, ನವೆಂಬರ್ 3 ರಂದು, ಅಬುಧಾಬಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಡಲಿದೆ. ನವೆಂಬರ್ 5 ರಂದು, ತಂಡವು ತನ್ನ ಮುಂದಿನ ಪಂದ್ಯವನ್ನು ಆಡಬೇಕು. ನಂತರ ನವೆಂಬರ್ 8 ರಂದು ತಂಡವು ತನ್ನ ಕೊನೆಯ ಪಂದ್ಯವನ್ನು ಗುಂಪು ಪಂದ್ಯದಲ್ಲಿ ಆಡುತ್ತದೆ. ಈ ಎರಡೂ ತಂಡಗಳು ಅರ್ಹತಾ ಸುತ್ತಿನಿಂದ ಬರುತ್ತವೆ. ಈ ಎರಡೂ ಪಂದ್ಯಗಳು ಕೂಡ ದುಬೈನಲ್ಲಿ ನಡೆಯಲಿದೆ.

ಟಿ 20 ವಿಶ್ವಕಪ್‌ಗಾಗಿ ಭಾರತೀಯ ತಂಡ– ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ