AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ

India vs New Zealand: ನ್ಯೂಝಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯ ಮೊದಲೆರಡು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ 48 ರನ್​ಗಳ ಗೆಲುವು ದಾಖಲಿಸಿದ್ದ ಭಾರತ ತಂಡವು ದ್ವಿತೀಯ ಟಿ20 ಪಂದ್ಯದಲ್ಲಿ 7 ವಿಕೆಟ್​ ಗಳಿಂದ ಜಯಭೇರಿ ಬಾರಿಸಿದೆ.

ಗರಿಷ್ಠ ಸ್ಕೋರ್​ ಗಳಿಸಿದರೂ ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ
Suryakumar Yadav
ಝಾಹಿರ್ ಯೂಸುಫ್
|

Updated on:Jan 24, 2026 | 8:14 AM

Share

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಅಮೋಘ ಜಯ ಸಾಧಿಸಿದೆ. ಅದು ಕೂಡ 208 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತುವ ಮೂಲಕ. ರಾಯ್​ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 6 ರನ್​ಗಳಿಸುವಷ್ಟರಲ್ಲಿ ಸಂಜು ಸ್ಯಾಮ್ಸನ್ (6) ಹಾಗೂ ಅಭಿಷೇಕ್ ಶರ್ಮಾ (0) ಅವರ ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಸಿಡಿಲಬ್ಬರ ಶುರು ಮಾಡಿದ ಇಶಾನ್ ಕಿಶನ್ ನ್ಯೂಝಿಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಪಾಕೆಟ್ ಡೈನಾಮೊ ಬ್ಯಾಟ್​ನಿಂದ ಕೇವಲ 32 ಎಸೆತಗಳಲ್ಲಿ 11 ಫೋರ್ ಹಾಗೂ 4 ಭರ್ಜರಿ ಸಿಕ್ಸರ್​ಗಳು ಮೂಡಿಬಂತು. ಅಷ್ಟೇ ಅಲ್ಲದೆ 3ನೇ ವಿಕೆಟ್​ಗೆ 116 ರನ್​ಗಳ ಜೊತೆಯಾಟವಾಡಿದ ಇಶಾನ್ ಕಿಶನ್ (76) ಔಟಾದರು.

ಇದಾದ ಬಳಿಕ ಸಂಪೂರ್ಣ ಜವಾಬ್ದಾರಿ ಹೆಗಲೇರಿಸಿಕೊಂಡ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಮೈದಾನದ ಮೂಲೆ ಮೂಲೆಗೂ ಫೋರ್​ಗಳನ್ನು ಬಾರಿಸಿದ ಸೂರ್ಯ 37 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಅಜೇಯ 82 ರನ್​ ಬಾರಿಸಿದರು. ಈ ಮೂಲಕ 15.2 ಓವರ್​ಗಳಲ್ಲಿ ಟೀಮ್ ಇಂಡಿಯಾ ಗುರಿ ಮುಟ್ಟಿಸಿದರು.

ಸೂರ್ಯನಿಗೆ ಸಿಗದ ಪಂದ್ಯ ಶ್ರೇಷ್ಠ ಪ್ರಶಸ್ತಿ:

ಈ ಪಂದ್ಯದಲ್ಲಿ ಗರಿಷ್ಠ ಸ್ಕೋರ್​ಗಳಿಸಿದ್ದ ಸೂರ್ಯಕುಮಾರ್ ಯಾದವ್. ಕೇವಲ 37 ಎಸೆತಗಳನ್ನು ಎದುರಿಸಿದ ಸೂರ್ಯ ಅಜೇಯ 82 ರನ್​ ಚಚ್ಚಿದ್ದರು. ಇದಾಗ್ಯೂ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದು ಇಶಾನ್ ಕಿಶನ್​ಗೆ ಎಂಬುದು ವಿಶೇಷ.

ಇದಕ್ಕೆ ಮುಖ್ಯ ಕಾರಣ ಇಶಾನ್ ಕಿಶನ್ ಆಡಿದ ಇನಿಂಗ್ಸ್. ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡಿದ್ದಾಗ ಬ್ಯಾಟಿಂಗ್ ಆರಂಭಿಸಿದ ಇಶಾನ್ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ್ದರು. ಈ ಸಿಡಿಲಬ್ಬರದೊಂದಿಗೆ ಇಡೀ ಪಂದ್ಯದ ಚಿತ್ರಣವನ್ನು ಸಹ ಬದಲಿಸಿದ್ದರು.

ಅಂದರೆ ಆರಂಭಿಕ ಆಘಾತಕ್ಕೊಳಗಾಗಿದ್ದ ಭಾರತ ತಂಡವನ್ನು ಪಾರು ಮಾಡಿದ್ದು ಇಶಾನ್ ಕಿಶನ್. ಯುವ ಎಡಗೈ ದಾಂಡಿಗನ ಸಿಡಿಲಬ್ಬರದಿಂದಾಗಿ ಉಳಿದ ಬ್ಯಾಟರ್​ಗಳ ಒತ್ತಡ ಕೂಡ ಇಳಿಯಿತು. ಇದಾದ ಬಳಿಕವಷ್ಟೇ ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಹೀಗಾಗಿಯೇ ಅಜೇಯ 82 ರನ್​ ಬಾರಿಸಿದ ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್​ಗಿಂತ 76 ರನ್​ಗಳಿಸಿದ ಇಶಾನ್ ಕಿಶನ್ ಅವರ ಇನಿಂಗ್ಸ್​ ಅನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದೆ. ಈ ಇನಿಂಗ್ಸ್ ಇಡೀ ಪಂದ್ಯ ಚಿತ್ರಣ ಬದಲಿಸಿದ್ದರಿಂದ ಇಶಾನ್ ಕಿಶನ್​ಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಲಾಗಿದೆ.

ಇದನ್ನೂ ಓದಿ: ಭಾರತೀಯ ಬ್ಯಾಟರ್​ಗಳ ಸಿಡಿಲಬ್ಬರಕ್ಕೆ ಪಾಕಿಸ್ತಾನ್ ವಿಶ್ವ ದಾಖಲೆ ಧೂಳೀಪಟ

ವಿಶೇಷ ಎಂದರೆ ಇಶಾನ್ ಕಿಶನ್ ಟೀಮ್ ಇಂಡಿಯಾ ಪರ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆಯುತ್ತಿರುವುದು ಬರೋಬ್ಬರಿ 4 ವರ್ಷಗಳ ಬಳಿಕ. ಅಂದರೆ ಇದಕ್ಕೂ ಮುನ್ನ 2022 ರಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಇದೀಗ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಪಾಕೆಟ್ ಡೈನಾಮೊ ಮತ್ತೆ ಸದ್ದು ಮಾಡಿರುವುದು ವಿಶೇಷ.

Published On - 8:05 am, Sat, 24 January 26

Follow Us
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್