128 ವರ್ಷಗಳ ನಂತರ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಪ್ರವೇಶ! IOC ಅನುಮೋದನೆ

|

Updated on: Oct 14, 2023 | 6:11 AM

2028 Olympics Cricket: ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಚ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಇದರ ಪ್ರಕಾರ ಲಾಸ್ ಏಂಜಲೀಸ್​ನಲ್ಲಿ ನಡೆಯಲ್ಲಿರುವ 2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯಾಗಲಿದೆ.

128 ವರ್ಷಗಳ ನಂತರ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಪ್ರವೇಶ! IOC ಅನುಮೋದನೆ
ಒಲಂಪಿಕ್ಸ್​ನಲ್ಲಿ ಕ್ರಿಕೆಟ್
Follow us on

ಬರೋಬ್ಬರಿ 12 ವರ್ಷಗಳ ನಂತರ ಭಾರತದ ನೆಲದಲ್ಲಿ ಏಕದಿನ ವಿಶ್ವಕಪ್ (ICC World Cup 2023) ಆಯೋಜಿಸಲಾಗಿದೆ. ಈ ಟೂರ್ನಿಯಲ್ಲಿ ದೇಶದ 10 ನಗರಗಳಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತಿವೆ. ಕ್ರಿಕೆಟ್ ಅಭಿಮಾನಿಗಳು ಅತ್ಯಂತ ಉತ್ಸಾಹದಿಂದ ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಂಗಣದಲ್ಲಿ ಜಮಾಯಿಸುತ್ತಿದ್ದಾರೆ. ಈ ನಡುವೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು, ವಿಶ್ವದ ಅತ್ಯಂತ ಜನಪ್ರಿಯ ಕ್ರೀಡಾಕೂಟವಾದ ಒಲಿಂಪಿಕ್ಸ್‌ಗೆ (Olympics) ಕ್ರಿಕೆಟ್ ಸೇರ್ಪಡೆಗೊಂಡಿದೆ. ಈ ಮೂಲಕ 128 ವರ್ಷಗಳ ನಂತರ ಒಲಿಂಪಿಕ್ಸ್‌ಗೆ ಕ್ರಿಕೆಟ್ (Cricket) ಪ್ರವೇಶಿಸಿದ್ದು, ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

128 ವರ್ಷಗಳ ನಂತರ ಕ್ರಿಕೆಟ್

ಶುಕ್ರವಾರ ಮುಂಬೈನಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಸಭೆ ನಡೆಯಿತು. ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಅಧ್ಯಕ್ಷ ಥಾಮಸ್ ಬಾಚ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಇದರ ಪ್ರಕಾರ ಲಾಸ್ ಏಂಜಲೀಸ್​ನಲ್ಲಿ ನಡೆಯಲ್ಲಿರುವ 2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್ ಸೇರ್ಪಡೆಯಾಗಲಿದೆ.

Neeraj Chopra: ಬಾಳ ಸಂಗಾತಿಯ ಬಗ್ಗೆಗಿರುವ ಕನಸುಗಳನ್ನು ರಿವೀಲ್ ಮಾಡಿದ ಒಲಂಪಿಕ್ಸ್ ಹೀರೋ ನೀರಜ್ ಚೋಪ್ರಾ!

5 ಆಟಗಳನ್ನು ಪ್ರಸ್ತಾಪಿಸಿದೆ

“ಲಾಸ್ ಏಂಜಲೀಸ್ ಸಮಿತಿಯು 5 ಆಟಗಳನ್ನು ಪ್ರಸ್ತಾಪಿಸಿದೆ. ಈ 5 ಕ್ರೀಡೆಗಳನ್ನು ಒಲಿಂಪಿಕ್ಸ್‌ನಲ್ಲಿ ಸಂಯೋಜಿಸಬಹುದು. ಇದರಲ್ಲಿ ಕ್ರಿಕೆಟ್ ಕೂಡ ಸೇರಿದೆ. ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗುವುದು,’’ ಎಂದು ಐಒಸಿ ಕ್ರೀಡಾ ನಿರ್ದೇಶಕ ಕಿಟ್ ಮೆಕ್‌ಕಾನ್ನೆಲ್ ತಿಳಿಸಿದ್ದಾರೆ. ಈ ಮೂಲಕ 1900 ರಲ್ಲಿ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ ನಂತರ ಇದೇ ಮೊದಲ ಬಾರಿಗೆ ಅಂದರೆ 128 ವರ್ಷಗಳ ನಂತರ ಒಲಂಪಿಕ್ಸ್​ನಲ್ಲಿ ಕ್ರಿಕೆಟ್ ಕಾಣಿಸಿಕೊಳ್ಳಲಿದೆ.

ಚಿನ್ನದ ಪದಕ ಗೆದ್ದಿದ್ದ ಬ್ರಿಟನ್

ಇನ್ನು 2028ರ ಒಲಿಂಪಿಕ್ಸ್‌ನಲ್ಲಿ ಟಿ20 ಮಾದರಿಯಲ್ಲಿ ಕ್ರಿಕೆಟ್‌ ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದು ವರದಿಯಾಗಿದೆ. ಕೊನೆಯ ಬಾರಿಗೆ 1900 ರಲ್ಲಿ ನಡೆದ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಇದುವರೆಗೆ ಒಮ್ಮೆ ಮಾತ್ರ ಕ್ರಿಕೆಟ್ ಆಡಲಾಗಿತ್ತು. 128 ವರ್ಷಗಳ ಹಿಂದೆ ನಡೆದ ಈ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ಮತ್ತು ಫ್ರಾನ್ಸ್ ನಡುವೆ ಏಕೈಕ ಪಂದ್ಯ ನಡೆದಿತ್ತು. ಚಿನ್ನದ ಪದಕಕ್ಕಾಗಿ ನಡೆದ ಈ ಪಂದ್ಯದಲ್ಲಿ ಒಂದು ತಂಡದಿಂದ 12 ಆಟಗಾರರನ್ನು ಕಣಕ್ಕಿಳಿಸಲಾಗಿತ್ತು. ಈ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 185 ರನ್‌ಗಳಿಂದ ಸೋಲಿಸಿದ ಗ್ರೇಟ್ ಬ್ರಿಟನ್ ಚಿನ್ನದ ಪದಕ ಗೆದ್ದುಕೊಂಡಿತ್ತು.

2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಜೊತೆಗೆ ಫ್ಲ್ಯಾಗ್ ಫುಟ್‌ಬಾಲ್, ಬೇಸ್‌ಬಾಲ್/ಸಾಫ್ಟ್‌ಬಾಲ್, ಲ್ಯಾಕ್ರೋಸ್ ಮತ್ತು ಸ್ಕ್ವಾಷ್‌ಗಳನ್ನು ಸಹ ಸೇರಿಸಲಾಗಿದೆ.

ಕಾಮನ್‌ವೆಲ್ತ್​ನಲ್ಲಿ ಕ್ರಿಕೆಟ್

ಏತನ್ಮಧ್ಯೆ, 24 ವರ್ಷಗಳ ನಂತರ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 22 ನೇ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್ ಅನ್ನು ಸೇರಿಸಲಾಗಿತ್ತು. 24 ವರ್ಷಗಳ ನಂತರ ಕಾಮನ್‌ವೆಲ್ತ್‌ನಲ್ಲಿ ಕ್ರಿಕೆಟ್‌ಗೆ ಸ್ಥಾನ ನೀಡಲಾಗಿದ್ದು, ಇದಕ್ಕೂ ಮುನ್ನ 1998ರಲ್ಲಿ ಪುರುಷರ ಕ್ರಿಕೆಟ್‌ಗೆ ಅವಕಾಶ ನೀಡಲಾಗಿತ್ತು. ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ 22ನೇ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಸ್ಟ್ರೇಲಿಯಾ ತಂಡ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದರೆ, ಭಾರತ ತಂಡ ಬೆಳ್ಳಿ ಪದಕ ಗೆದ್ದುಕೊಂಡಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:09 am, Sat, 14 October 23