IPL 2021: ಐಪಿಎಲ್ ಅಭಿಮಾನಿಗಳಿಗೆ ಗುಡ್​ ನ್ಯೂಸ್: 12 ಆಟಗಾರರು ಕಣಕ್ಕಿಳಿಯುವುದು ಖಚಿತ

IPL 2021: ಐಪಿಎಲ್ ಅಭಿಮಾನಿಗಳಿಗೆ ಗುಡ್​ ನ್ಯೂಸ್: 12 ಆಟಗಾರರು ಕಣಕ್ಕಿಳಿಯುವುದು ಖಚಿತ
ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.

IPL 2021 Schedule: ಕೊರೋನಾ ಕಾರಣದಿಂದ ಮೊಟಕುಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ 29 ಪಂದ್ಯಗಳನ್ನು ಆಡಲಾಗಿತ್ತು. ಇದೀಗ ಉಳಿದ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಅದರಂತೆ ಉಳಿದಿರುವ 31 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ನಡೆಯಲಿದೆ.

TV9kannada Web Team

| Edited By: Zahir PY

Aug 03, 2021 | 2:32 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಆರಂಭವಾಗಲು ಇನ್ನೇನು ತಿಂಗಳುಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಕೆಲ ಆಟಗಾರರು ಐಪಿಎಲ್​ನ ದ್ವಿತಿಯಾರ್ಧಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಎಲ್ಲಾ ವಿದೇಶಿ ಕ್ರಿಕೆಟ್ ಮಂಡಳಿಯನ್ನು ಒಪ್ಪಿಸುವಲ್ಲಿ ಬಿಸಿಸಿಐ (BCCI) ಯಶಸ್ವಿಯಾಗಿದೆ. ಅದರಂತೆ ಸೆಪ್ಟೆಂಬರ್-ಅಕ್ಟೋಬರ್ ನಲ್ಲಿ ನಡೆಯಲಿರುವ ಟೂರ್ನಿಯ ಉಳಿದ ಪಂದ್ಯಗಳಿಗೆ ವಿದೇಶಿ ಆಟಗಾರರು ಲಭ್ಯರಿರಲಿದ್ದಾರೆ. ಈ ಹಿಂದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ಇಸಿಬಿ)​ ನಿರ್ದೇಶಕ ಆ್ಯಶ್ಲೇ ಜೈಲ್ಸ್ ತಮ್ಮ ಆಟಗಾರರು ಐಪಿಎಲ್​ನ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದರು. ಇದೀಗ ಇಸಿಬಿ ಜೊತೆಗಿನ ಮಾತುಕತೆ ಫಲಪ್ರದವಾಗಿದ್ದು, ಅದರಂತೆ ಇಂಗ್ಲೆಂಡ್​ ತಂಡದ ಆಟಗಾರರು ಐಪಿಎಲ್​ನ ಉಳಿದ 31 ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ.

ಐಪಿಎಲ್ 2021 ರಲ್ಲಿ ಇಂಗ್ಲೆಂಡ್‌ನ 12 ಆಟಗಾರರು ಭಾಗವಹಿಸಿದ್ದರು. ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​​ ತಂಡಗಳಲ್ಲಿ ಹೆಚ್ಚಿನ ಇಂಗ್ಲೆಂಡ್ ಆಟಗಾರರಿದ್ದು, ಇದೀಗ ಇಸಿಬಿ ನಿರ್ಧಾರದಿಂದ ಫ್ರಾಂಚೈಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಇಂಗ್ಲೆಂಡ್ ತಂಡದ ಬಾಂಗ್ಲಾದೇಶ ಸರಣಿಯ ವೇಳಾಪಟ್ಟಿ ಕೂಡ ಬದಲಾಗಲಿದೆ.

ಈ ಹಿಂದೆ ಬಾಂಗ್ಲಾ ವಿರುದ್ದದ ಸರಣಿ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಹಾಗೂ ಇಂಗ್ಲೆಂಡ್-ವೇಲ್ಸ್ ಕ್ರಿಕೆಟ್ ಬೋರ್ಡ್​ಗಳ ಜೊತೆ ಮಾತುಕತೆ ನಡೆಸಿ ವೇಳಾಪಟ್ಟಿಯ ಬದಲಾವಣೆಗೆ ಮನವಿ ಮಾಡಿದ್ದರು. ಇದೀಗ ಈ ಮನವಿಗೆ ಸ್ಪಂದಿಸಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಮ್ಮ ಆಟಗಾರರಿಗೆ ಐಪಿಎಲ್​ನಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಇಂಗ್ಲೆಂಡ್ ಆಟಗಾರರಿರುವ ಐಪಿಎಲ್ ತಂಡಗಳು: ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಇಂಗ್ಲೆಂಡ್​ ತಂಡದ ಆಲ್​ರೌಂಡರ್​ಗಳಾದ ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ ಪ್ರತಿನಿಧಿಸುತ್ತಿದ್ದಾರೆ. ಈ ಇಬ್ಬರು ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಹಾಗೆಯೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯೊನ್ ಮೊರ್ಗನ್ ಉಳಿದ ಪಂದ್ಯಗಳಿಗೆ ಲಭ್ಯವಿರುತ್ತಾರೆ. ಇನ್ನು ರಾಜಸ್ಥಾನ್ ರಾಯಲ್ಸ್​ ತಂಡದಲ್ಲಿ ಜೋಸ್ ಬಟ್ಲರ್, ವೇಗದ ಬೌಲರ್ ಜೋಫ್ರಾ ಆರ್ಚರ್, ಬೆನ್ ಸ್ಟೋಕ್ಸ್ ಕಾಣಿಸಿಕೊಳ್ಳಲಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕ್ರಿಸ್ ವೋಕ್ಸ್‌ ಹಾಗೂ ಜಾನಿ ಬೈರ್‌ಸ್ಟೊವ್ ಆಡುತ್ತಿದ್ದಾರೆ. ಇನ್ನು ಟಾಮ್ ಕರ್ರನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್‌, ಡೇವಿಡ್ ಮಲಾನ್ ಪಂಜಾಬ್ ಕಿಂಗ್ಸ್​ ತಂಡದಲ್ಲಿದ್ದಾರೆ.

ಕೊರೋನಾ ಕಾರಣದಿಂದ ಮೊಟಕುಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ 29 ಪಂದ್ಯಗಳನ್ನು ಆಡಲಾಗಿತ್ತು. ಇದೀಗ ಉಳಿದ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಅದರಂತೆ ಉಳಿದಿರುವ 31 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

(IPL 2021: BCCI confirms England players availability for ipl phase 2)

Follow us on

Related Stories

Most Read Stories

Click on your DTH Provider to Add TV9 Kannada