IPL 2021: ಐಪಿಎಲ್ ಅಭಿಮಾನಿಗಳಿಗೆ ಗುಡ್​ ನ್ಯೂಸ್: 12 ಆಟಗಾರರು ಕಣಕ್ಕಿಳಿಯುವುದು ಖಚಿತ

| Updated By: ಝಾಹಿರ್ ಯೂಸುಫ್

Updated on: Aug 03, 2021 | 2:32 PM

IPL 2021 Schedule: ಕೊರೋನಾ ಕಾರಣದಿಂದ ಮೊಟಕುಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ 29 ಪಂದ್ಯಗಳನ್ನು ಆಡಲಾಗಿತ್ತು. ಇದೀಗ ಉಳಿದ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಅದರಂತೆ ಉಳಿದಿರುವ 31 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ನಡೆಯಲಿದೆ.

IPL 2021: ಐಪಿಎಲ್ ಅಭಿಮಾನಿಗಳಿಗೆ ಗುಡ್​ ನ್ಯೂಸ್: 12 ಆಟಗಾರರು ಕಣಕ್ಕಿಳಿಯುವುದು ಖಚಿತ
ಈಗಾಗಲೇ ದ್ವಿತಿಯಾರ್ಧಕ್ಕಾಗಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಮಹೇಂದ್ರ ಸಿಂಗ್ ಧೋನಿಯ ಚೆನ್ನೈ ಸೂಪರ್ ಕಿಂಗ್ಸ್ , ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಯುಎಇಗೆ ತೆರಳಿದೆ. ಇತ್ತ ಹಲವು ಆಟಗಾರರು ಎರಡನೇ ಹಂತದ ಪಂದ್ಯಗಳಿಗೆ ಅಲಭ್ಯರಾಗಿದ್ದು, ಅವರ ಬದಲಿ ಆಟಗಾರರನ್ನು ಫ್ರಾಂಚೈಸಿಗಳು ಆಯ್ಕೆ ಮಾಡಿಕೊಂಡಿದೆ.
Follow us on

ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಆರಂಭವಾಗಲು ಇನ್ನೇನು ತಿಂಗಳುಗಳು ಮಾತ್ರ ಉಳಿದಿವೆ. ಇದರ ಬೆನ್ನಲ್ಲೇ ಕೆಲ ಆಟಗಾರರು ಐಪಿಎಲ್​ನ ದ್ವಿತಿಯಾರ್ಧಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಎಲ್ಲಾ ವಿದೇಶಿ ಕ್ರಿಕೆಟ್ ಮಂಡಳಿಯನ್ನು ಒಪ್ಪಿಸುವಲ್ಲಿ ಬಿಸಿಸಿಐ (BCCI) ಯಶಸ್ವಿಯಾಗಿದೆ. ಅದರಂತೆ ಸೆಪ್ಟೆಂಬರ್-ಅಕ್ಟೋಬರ್ ನಲ್ಲಿ ನಡೆಯಲಿರುವ ಟೂರ್ನಿಯ ಉಳಿದ ಪಂದ್ಯಗಳಿಗೆ ವಿದೇಶಿ ಆಟಗಾರರು ಲಭ್ಯರಿರಲಿದ್ದಾರೆ. ಈ ಹಿಂದೆ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ (ಇಸಿಬಿ)​ ನಿರ್ದೇಶಕ ಆ್ಯಶ್ಲೇ ಜೈಲ್ಸ್ ತಮ್ಮ ಆಟಗಾರರು ಐಪಿಎಲ್​ನ ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದರು. ಇದೀಗ ಇಸಿಬಿ ಜೊತೆಗಿನ ಮಾತುಕತೆ ಫಲಪ್ರದವಾಗಿದ್ದು, ಅದರಂತೆ ಇಂಗ್ಲೆಂಡ್​ ತಂಡದ ಆಟಗಾರರು ಐಪಿಎಲ್​ನ ಉಳಿದ 31 ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ.

ಐಪಿಎಲ್ 2021 ರಲ್ಲಿ ಇಂಗ್ಲೆಂಡ್‌ನ 12 ಆಟಗಾರರು ಭಾಗವಹಿಸಿದ್ದರು. ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​​ ತಂಡಗಳಲ್ಲಿ ಹೆಚ್ಚಿನ ಇಂಗ್ಲೆಂಡ್ ಆಟಗಾರರಿದ್ದು, ಇದೀಗ ಇಸಿಬಿ ನಿರ್ಧಾರದಿಂದ ಫ್ರಾಂಚೈಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಇಂಗ್ಲೆಂಡ್ ತಂಡದ ಬಾಂಗ್ಲಾದೇಶ ಸರಣಿಯ ವೇಳಾಪಟ್ಟಿ ಕೂಡ ಬದಲಾಗಲಿದೆ.

ಈ ಹಿಂದೆ ಬಾಂಗ್ಲಾ ವಿರುದ್ದದ ಸರಣಿ ಹಿನ್ನೆಲೆಯಲ್ಲಿ ಇಂಗ್ಲೆಂಡ್ ತಂಡದ ಆಟಗಾರರು ಐಪಿಎಲ್​ಗೆ ಅಲಭ್ಯರಾಗಲಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಹಾಗೂ ಇಂಗ್ಲೆಂಡ್-ವೇಲ್ಸ್ ಕ್ರಿಕೆಟ್ ಬೋರ್ಡ್​ಗಳ ಜೊತೆ ಮಾತುಕತೆ ನಡೆಸಿ ವೇಳಾಪಟ್ಟಿಯ ಬದಲಾವಣೆಗೆ ಮನವಿ ಮಾಡಿದ್ದರು. ಇದೀಗ ಈ ಮನವಿಗೆ ಸ್ಪಂದಿಸಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ತಮ್ಮ ಆಟಗಾರರಿಗೆ ಐಪಿಎಲ್​ನಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್ ನೀಡಿದೆ.

ಇಂಗ್ಲೆಂಡ್ ಆಟಗಾರರಿರುವ ಐಪಿಎಲ್ ತಂಡಗಳು:
ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಇಂಗ್ಲೆಂಡ್​ ತಂಡದ ಆಲ್​ರೌಂಡರ್​ಗಳಾದ ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ ಪ್ರತಿನಿಧಿಸುತ್ತಿದ್ದಾರೆ. ಈ ಇಬ್ಬರು ಸಿಎಸ್​ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಹಾಗೆಯೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯೊನ್ ಮೊರ್ಗನ್ ಉಳಿದ ಪಂದ್ಯಗಳಿಗೆ ಲಭ್ಯವಿರುತ್ತಾರೆ. ಇನ್ನು ರಾಜಸ್ಥಾನ್ ರಾಯಲ್ಸ್​ ತಂಡದಲ್ಲಿ ಜೋಸ್ ಬಟ್ಲರ್, ವೇಗದ ಬೌಲರ್ ಜೋಫ್ರಾ ಆರ್ಚರ್, ಬೆನ್ ಸ್ಟೋಕ್ಸ್ ಕಾಣಿಸಿಕೊಳ್ಳಲಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕ್ರಿಸ್ ವೋಕ್ಸ್‌ ಹಾಗೂ ಜಾನಿ ಬೈರ್‌ಸ್ಟೊವ್ ಆಡುತ್ತಿದ್ದಾರೆ. ಇನ್ನು ಟಾಮ್ ಕರ್ರನ್ ಮತ್ತು ಸ್ಯಾಮ್ ಬಿಲ್ಲಿಂಗ್ಸ್ ಡೆಲ್ಲಿ ಕ್ಯಾಪಿಟಲ್ಸ್‌, ಡೇವಿಡ್ ಮಲಾನ್ ಪಂಜಾಬ್ ಕಿಂಗ್ಸ್​ ತಂಡದಲ್ಲಿದ್ದಾರೆ.

ಕೊರೋನಾ ಕಾರಣದಿಂದ ಮೊಟಕುಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ 29 ಪಂದ್ಯಗಳನ್ನು ಆಡಲಾಗಿತ್ತು. ಇದೀಗ ಉಳಿದ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಅದರಂತೆ ಉಳಿದಿರುವ 31 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

 

(IPL 2021: BCCI confirms England players availability for ipl phase 2)