AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021: ಚೆನ್ನೈ vs ಮುಂಬೈ ಮದಗಜಗಳ ಕಾದಾಟಕ್ಕೆ ಇದೆಯೇ ಮಳೆಯ ಕಾಟ: ಇಲ್ಲಿದೆ ಹವಾಮಾನ ವರದಿ

Chennai Super Kings vs Mumbai Indians: ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಾಟ ಇದೆಯೇ ಎಂಬುದನ್ನು ನೋಡುವುದಾದರೆ, ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ಹೇಳಿದೆ.

IPL 2021: ಚೆನ್ನೈ vs ಮುಂಬೈ ಮದಗಜಗಳ ಕಾದಾಟಕ್ಕೆ ಇದೆಯೇ ಮಳೆಯ ಕಾಟ: ಇಲ್ಲಿದೆ ಹವಾಮಾನ ವರದಿ
IPL 2021 CSK vs MI
TV9 Web
| Updated By: Vinay Bhat|

Updated on: Sep 19, 2021 | 11:21 AM

Share

ಇಂಡಿಯನ್ ಪ್ರೀಮಿಯರ್ ಲೀಗ್ 14ನೇ (Indian Premier League) ಆವೃತ್ತಿಯ  ಎರಡನೇ ಚರಣಕ್ಕೆ ಇಂದು ಚಾಲನೆ ಸಿಗಲಿದೆ. ಕಳೆದ ಏಪ್ರಿಲ್ 9ರಂದು ಆರ್​ಸಿಬಿ (RCB) ಮತ್ತು ಮುಂಬೈ ಇಂಡಿಯನ್ಸ್ (Mumbai Indians) ತಂಡಗಳ ನಡುವೆ ನಡೆದ ಪಂದ್ಯದ ಮೂಲಕ ಆರಂಭವಾಗಿದ್ದ ಐಪಿಎಲ್ 2021 (IPL 2021) ಟೂರ್ನಿ 29 ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆಯಿಲ್ಲದೆ ನಡೆದಿತ್ತು. ಆದರೆ, ಈ ಸಂದರ್ಭ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ (BCCI) ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತು. ಹೀಗೆ ಭಾರತದಲ್ಲಿ ಅರ್ಧಕ್ಕೆ ನಿಂತಿದ್ದ ಐಪಿಎಲ್​ ಈಗ ಯುಎಇನಲ್ಲಿ (UAE) ಮುಂದುವರೆಯುತ್ತಿದೆ. ಹ್ಯಾಟ್ರಿಕ್ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿರುವ ಮುಂಬೈ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್‌ಕಿಂಗ್ಸ್ (MI vs CSK) ಮುಖಾಮುಖಿಯೊಂದಿಗೆ ಐಪಿಎಲ್ 14ನೇ ಆವೃತ್ತಿಯ 2ನೇ ಭಾಗಕ್ಕೆ ಅರಬ್ ನಾಡಿನಲ್ಲಿ ಭಾನುವಾರ ಚಾಲನೆ ಲಭಿಸಲಿದೆ.

ಮುಂಬೈ ತಂಡ ಕಳೆದ ವರ್ಷ ಯುಎಇಯಲ್ಲೇ ಪ್ರಶಸ್ತಿ ಗೆದ್ದ ಬಲ ಹೊಂದಿದ್ದರೆ, ಸಿಎಸ್‌ಕೆ ತಂಡ ಕಳೆದ ವರ್ಷ ಮೊದಲ ಬಾರಿಗೆ ಪ್ಲೇಆಫ್​ಗೇರಲು ವಿಫಲವಾಗಿತ್ತಲ್ಲದೆ 7ನೇ ಸ್ಥಾನಕ್ಕೆ ತೃಪ್ತಿಪಟ್ಟಿತ್ತು. ಇದಲ್ಲದೆ ಟೂರ್ನಿಯ ಮೊದಲ ಭಾಗದಲ್ಲಿ ಗೆದ್ದ ಬಲವೂ ಮುಂಬೈ ತಂಡಕ್ಕಿದೆ. ಹೀಗಾಗಿ ಚೆನ್ನೈ ತಂಡ ಯಾವ ರೀತಿಯಲ್ಲಿ ಪುಟಿದೇಳಲಿದೆ ಮತ್ತು ಸೇಡು ತೀರಿಸಿಕೊಳ್ಳಲಿದೆ ಎಂಬ ಕುತೂಹಲವಿದೆ.

ಚೆನ್ನೈ ಹಾಗೂ ಮುಂಬೈ ಕಾಳಗದಲ್ಲಿ ಯಾರಿಗೆ ವಿಜಯ ಲಕ್ಷ್ಮೀ ಒಲಿಯಲಿದೆ ಎಂಬುದು ಗ್ರಹಿಸಲು ಸಾಧ್ಯವಿಲ್ಲ. ಆದರೆ, ಮೇಲ್ನೋಟಕ್ಕೆ ಧೋನಿ ಪಡೆ ಬಲಿಷ್ಠವಿರುವಂತೆ ಕಾಣುತ್ತದೆ. ಆದರೆ, ಅಂಕಿಅಂಶಗಳನ್ನು ಗಮನಿಸಿದರೆ ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ ಒಟ್ಟು 32 ಬಾರಿ ಮುಖಾಮುಖಿ ಆಗಿವೆ. ಈ ಪೈಕಿ 19 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಹೀಗಾಗಿ ಬ್ಯಾಟ್ಸ್‌ಮನ್‌ಗಳು ರನ್ ಗಳಿಸಲು ತುಸು ಹೆಚ್ಚಿನ ಶ್ರಮಪಡಬೇಕಾಗುತ್ತದೆ. ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡುವುದು ಉತ್ತಮ ನಿರ್ಧಾರ. ಯಾಕಂದ್ರೆ ಇಲ್ಲಿ ನಡೆದ 93 ಪಂದ್ಯಗಳಲ್ಲಿ ಸೆಕೆಂಡ್ ಬ್ಯಾಟಿಂಗ್ ಮಾಡಿದ ತಂಡ 54 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಮೊದಲು ಬ್ಯಾಟ್ ಮಾಡಿದ ತಂಡ ಗೆದ್ದಿರುವುದು ಕೇವಲ 38 ಪಂದ್ಯಗಳನ್ನಷ್ಟೆ.

ಇನ್ನೂ ಈ ಹೈವೋಲ್ಟೇಜ್ ಪಂದ್ಯಕ್ಕೆ ವರುಣನ ಕಾಟ ಇದೆಯೇ ಎಂಬುದನ್ನು ನೋಡುವುದಾದರೆ, ಮಳೆಯ ಸಾಧ್ಯತೆ ಕಡಿಮೆ ಎಂದು ಹವಾಮಾನ ಇಲಾಖೆ ಹೇಳಿದೆ. ಸರಾಸರಿ ತಾಪಮಾನ 42 ಡಿ. ಸೆಲ್ಸಿಯೆಸ್ ಇರಲಿದೆ.

Rohit Sharma: ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ದಾಖಲೆ ಬರೆಯಲು ಸಜ್ಜಾದ ಹಿಟ್​ಮ್ಯಾನ್ ರೋಹಿತ್ ಶರ್ಮಾ

IPL 2021: ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್: ಯಾವ ತಂಡ ಬಲಿಷ್ಠ?, ಪಿಚ್ ವರದಿ, ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

(IPL 2021 CSK vs MI Match 30 in Dubai Weather Forecast Pitch Report Toss Timing Squads For Chennai Super Kings vs Mumbai Indians)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ