8 ಪಂದ್ಯಗಳಿಂದ ಕೇವಲ 5 ರನ್​: RCB ತಂಡದಲ್ಲಿ ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್​

RCB: ಆಲ್​ರೌಂಡರ್​ ಡೇನಿಯಲ್ ಕ್ರಿಶ್ಚಿಯನ್ ಸತತ 4 ಪಂದ್ಯಗಳಲ್ಲಿ ಕಣಕ್ಕಿಳಿದರೂ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಅದರಲ್ಲೂ 2 ಬಾರಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಸಿದರೂ ಕಲೆಹಾಕಿದ್ದು ಕೇವಲ 1 ರನ್ ಮಾತ್ರ.

8 ಪಂದ್ಯಗಳಿಂದ ಕೇವಲ 5 ರನ್​: RCB ತಂಡದಲ್ಲಿ ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್​
RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: Oct 10, 2021 | 5:41 PM

ಪ್ಲೇ ಆಫ್ ಪಂದ್ಯಗಳಿಗೆ ಆರ್​ಸಿಬಿ ಸಜ್ಜಾಗಿದೆ. ಶಾರ್ಜಾದಲ್ಲಿ ನಡೆಯಲಿರುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ (RCB vs KKR)​ ವಿರುದ್ದ ಆಡಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡವು 2ನೇ ಕ್ವಾಲಿಫೈಯರ್ ಮ್ಯಾಚ್ ಆಡಲಿದೆ. ಹೀಗಾಗಿ ಕೆಕೆಆರ್​ ವಿರುದ್ದ ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಹಾಗಾಗಿಯೇ ಆರ್​ಸಿಬಿ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ಅನ್ನು ಕಣಕ್ಕಿಳಿಸಬೇಕಾಗುತ್ತದೆ. ಆದರೆ ಪ್ರಸ್ತುತ ತಂಡದಲ್ಲಿರುವ ಬಹುತೇಕ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದಾಗ್ಯೂ ಡೇನಿಯಲ್ ಕ್ರಿಶ್ಚಿಯನ್ ಮಾತ್ರ ಮಿಂಚುವಲ್ಲಿ ಎಡವುತ್ತಿರುವುದು ಆರ್​ಸಿಬಿ ಚಿಂತೆಗೆ ಕಾರಣ.

ಆಲ್​ರೌಂಡರ್​ ಡೇನಿಯಲ್ ಕ್ರಿಶ್ಚಿಯನ್ ಸತತ 4 ಪಂದ್ಯಗಳಲ್ಲಿ ಕಣಕ್ಕಿಳಿದರೂ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಅದರಲ್ಲೂ 2 ಬಾರಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಸಿದರೂ ಕಲೆಹಾಕಿದ್ದು ಕೇವಲ 1 ರನ್ ಮಾತ್ರ. ಅಷ್ಟೇ ಅಲ್ಲ, ಈ ಸೀಸನ್​ನಲ್ಲಿ ಕ್ರಿಶ್ಚಿಯನ್​ 8 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 5 ರನ್​. ಇನ್ನು ಪಡೆದಿರುವುದು 4 ವಿಕೆಟ್ ಮಾತ್ರ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಡೇನಿಯಲ್​ಗೆ ಚಾನ್ಸ್​ ನೀಡಲಿದ್ದಾರಾ ಎಂಬುದೇ ದೊಡ್ಡ ಪ್ರಶ್ನೆ.

ಏಕೆಂದರೆ ಮತ್ತೊಂದೆಡೆ ಸ್ಪೋಟಕ ಬ್ಯಾಟ್ಸ್​ಮನ್ ಎನಿಸಿಕೊಂಡಿರುವ ಟಿಮ್ ಡೇವಿಡ್ ಹಾಗೂ ಸ್ಪಿನ್ನರ್ ವನಿಂದು ಹಸರಂಗ ಬೆಂಚ್ ಕಾಯುತ್ತಿದ್ದಾರೆ. ಇದೀಗ ಎಲಿಮಿನೇಟರ್ ಪಂದ್ಯ ನಡೆಯುತ್ತಿರುವುದು ಶಾರ್ಜಾ ಮೈದಾನದಲ್ಲಿ. ಈ ಮೈದಾನ ಚಿಕ್ಕದಾಗಿದ್ದರೂ ದೊಡ್ಡ ಸ್ಕೋರ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಿಗ್ ಹಿಟ್ಟರ್ ತಂಡದಲ್ಲಿದ್ದರೆ ದೊಡ್ಡ ಸ್ಕೋರ್ ಕಲೆಹಾಕಬಹುದು​. ಇತ್ತ ಡೆತ್ ಓವರ್​ನಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸುವ ಸಾಮರ್ಥ್ಯ ಟಿಮ್ ಡೇವಿಡ್​ ಅವರಿಗಿದೆ. ಆದರೆ ಆರ್​ಸಿಬಿ ಕೊನೆಯ 2 ಪಂದ್ಯಗಳಲ್ಲಿ ತಂಡದಲ್ಲಿ ಬದಲಾವಣೆ ಮಾಡಿಲ್ಲ ಎಂಬುದೇ ಅಚ್ಚರಿ. ಹೀಗಾಗಿ ನಿರ್ಣಾಯಕ ಪಂದ್ಯದಲ್ಲಿ ಬದಲಾವಣೆ ಮಾಡಲಿದ್ದಾರಾ ಎಂಬ ಪ್ರಶ್ನೆ ಕೂಡ ಮೂಡುತ್ತೆ. ಒಟ್ಟಿನಲ್ಲಿ ಸತತ ವೈಫಲ್ಯದ ಹೊರತಾಗಿ ಡೇನಿಯಲ್ ಕ್ರಿಶ್ಚಿಯನ್ ತಂಡದಲ್ಲಿದ್ದರೆ, ಮತ್ತೊಂದು ಅವಕಾಶಕ್ಕಾಗಿ ಟಿಮ್ ಡೇವಿಡ್ ಎದುರು ನೋಡುತ್ತಿದ್ದಾರೆ. ಹೀಗಾಗಿ ಎಲಿಮಿನೇಟರ್ ಪಂದ್ಯದಲ್ಲಿ ಈ ಇಬ್ಬರಲ್ಲಿ ಯಾರಿಗೆ ಚಾನ್ಸ್​ ಸಿಗಲಿದೆ ಕಾದು ನೋಡಬೇಕಿದೆ.

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2021: ಐಪಿಎಲ್​ನಲ್ಲಿ ಹೊಸ ಇತಿಹಾಸ ನಿರ್ಮಿಸಲಿದ್ದಾರೆ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್