IPL 2021, DC vs CSK: ಇಂದು ಟೇಬಲ್ ಟಾಪರ್​ಗಳ ರೋಚಕ ಕದನ: ಡೆಲ್ಲಿ vs ಚೆನ್ನೈ ಪಂದ್ಯದಲ್ಲಿ ಯಾರಿಗೆ ಗೆಲುವು?

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ 24 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 9 ಮತ್ತು ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021, DC vs CSK: ಇಂದು ಟೇಬಲ್ ಟಾಪರ್​ಗಳ ರೋಚಕ ಕದನ: ಡೆಲ್ಲಿ vs ಚೆನ್ನೈ ಪಂದ್ಯದಲ್ಲಿ ಯಾರಿಗೆ ಗೆಲುವು?
DC vs CSK
Follow us
TV9 Web
| Updated By: Vinay Bhat

Updated on: Oct 04, 2021 | 7:12 AM

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2021) ಇಂದು ನಡೆಯಲಿರುವ 50ನೇ ಪಂದ್ಯದಲ್ಲಿ ರಿಷಭ್ ಪಂತ್ (Rishabh Pant) ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಎಂ. ಎಸ್ ಧೋನಿ (MS Dhoni) ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (DC vs CSK) ತಂಡಗಳು ಸೆಣೆಸಾಟ ನಡೆಸಲಿವೆ. ಪಾಯಿಂಟ್ ಪಟ್ಟಿಯಲ್ಲಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿರುವ ತಂಡಗಳ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣ (Dubai International Cricket Stadium) ಸಾಕ್ಷಿಯಾಗಲಿದೆ. ಡೆಲ್ಲಿ ಈ ಪಂದ್ಯ ಗೆದ್ದು ಮತ್ತೆ ಮೊದಲ ಸ್ಥಾನಕ್ಕೇರುವ ಪ್ಲಾನ್​ನಲ್ಲಿದ್ದರೆ, ಇತ್ತ ಸಿಎಸ್​ಕೆ ಅಗ್ರಸ್ಥಾನವನ್ನು ಭದ್ರಪಡಿಸಿಕೊಳ್ಳಲು ಯೋಜನೆ ಹಾಕಿಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಈವರೆಗೆ ಒಟ್ಟು 12 ಪಂದ್ಯಗಳನ್ನು ಆಡಿದ್ದು 9 ಪಂದ್ಯಗಳಲ್ಲಿ ಗೆದ್ದಿದೆ. ಮೂರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.829 ನೆಟ್​ರೇಟ್​ನೊಂದಿಗೆ ಮೊದಲ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಈವರೆಗೆ ಒಟ್ಟು 12 ಪಂದ್ಯಗಳನ್ನು ಆಡಿದ್ದು ಒಂಬತ್ತರಲ್ಲಿ ಗೆಲುವು ಕಂಡಿದೆ. ಕೇವಲ ಮೂರು ಪಂದ್ಯಗಳಲ್ಲಷ್ಟೆ ಸೋತಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.551 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ.

ಡೆಲ್ಲಿ ತಂಡ ಎಲ್ಲಾ ವಿಭಾಗಗಳಲ್ಲಿ ಬಲಿಷ್ಠದಂತೆ ಗೋಚರಿಸುತ್ತದೆ. ಪೃಥ್ವಿ ಶಾ ಆಡುವ ಬಳಗಕ್ಕೆ ಕಮ್​ಬ್ಯಾಕ್ ಮಾಡಿರುವುದು ತಂಡದ ಬ್ಯಾಟಿಂಗ್ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಸ್ಟೀವ್ ಸ್ಮಿತ್, ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಉತ್ತಮ ಬ್ಯಾಟಿಂಗ್ ಮಾಡುತ್ತಾರೆ. ಶಿಮ್ರೋನ್ ಹೆಟ್ಮೇರ್ ಪಂದ್ಯವನ್ನು ಫಿನಿಶ್ ಮಾಡುವ ಜವಾಬ್ದಾರಿ ಹೊರಬೇಕಷ್ಟೆ. ಕಳೆದ ಪಂದ್ಯದಲ್ಲಿ ಅಕ್ಷರ್ ಪಟೇಲ್ ಬೌಲಿಂಗ್​ನಲ್ಲಿ ಮಿಂಚಿದ್ದರು. ಇವರ ಜೊತೆಗೆ ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ ಹಾಗೂ ಆನ್ರಿಚ್ ನಾರ್ಟ್ಜೆ ಅಪಾಯಕಾರಿಯಾಗಿ ಗೋಚರಿಸಿದ್ದಾರೆ.

ಇನ್ನೂ ಚೆನ್ನೈ ಆಲ್ರೌಂಡರ್ ಪ್ರದರ್ಶನ ನೀಡುತ್ತಿದೆ. ಹೀಗಾಗಿ ತಂಡದಲ್ಲಿ ಇಂದಿನ ಪಂದ್ಯಕ್ಕೆ ಬದಲಾವಣೆ ಅನುಮಾನ. ಆರಂಭಿಕ ರುತುರಾಜ್ ಗಾಯಕ್ವಾಡ್ ಅಬ್ಬರಿಸುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದರು. ಆದರೆ, ರಾಜಸ್ಥಾನ್ ವಿರುದ್ಧ ಸೋತಿರುವುದು ಮರೆಯುವಂತಿಲ್ಲ. ಫಾಫ್ ಡು ಪ್ಲೆಸಿಸ್ ಪ್ರತಿ ಪಂದ್ಯದಲ್ಲಿ ಸ್ಫೋಟಕ ಆರಂಭ ಒದಗಿಸಸುತ್ತಿದ್ದಾರೆ. ಮೊಯಿನ್ ಅಲಿ, ಸುರೇಶ್ ರೈನಾ, ಎಂ. ಎಸ್ ಧೋನಿ, ಅಂಬಟಿ ರಾಯುಡು ಒಳಗೊಂಡ ಬ್ಯಾಟಿಂಗ್ ಪಡೆ ಬಲಿಷ್ಠವಾಗಿದೆ. ಬೌಲಿಂಗ್​ನಲ್ಲಿ ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ಜೋಶ್ ಹ್ಯಾಜ್ಲೆವುಡ್ ಇದ್ದರೆ, ಡ್ವೇನ್ ಬ್ರಾವೋ ಮತ್ತು ಜಡೇಜಾ ತಮ್ಮ ಜವಾಬ್ದಾರಿಯನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ.

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ 24 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 9 ಮತ್ತು ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021: ಸತತ 4 ಆವೃತ್ತಿಗಳಲ್ಲಿ 500 ಕ್ಕೂ ಹೆಚ್ಚು ರನ್! ಕನ್ನಡಿಗ ರಾಹುಲ್ ಹೆಸರಲ್ಲಿ ಮತ್ತೊಂದು ಅದ್ಭುತ ದಾಖಲೆ

(IPL 2021 DC vs CSK Delhi Capitals will take on Chennai Super Kings at the Dubai International Cricket Stadium)

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ