AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC vs RR: ಡೆಲ್ಲಿ ತಂಡದಲ್ಲಿ 3 ವಿದೇಶಿಗರು, ರಾಯಲ್ಸ್ ತಂಡದಲ್ಲಿ 2 ಬದಲಾವಣೆ; ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

IPL 2021: ಉಭಯ ತಂಡಗಳು ಟೂರ್ನಿಯ ಎರಡನೇ ಹಂತವನ್ನು ಗೆಲುವಿನೊಂದಿಗೆ ಆರಂಭಿಸಿದವು. ದೆಹಲಿ, ಸನ್ ರೈಸರ್ಸ್ ವಿರುದ್ಧ ಗೆದ್ದರೆ, ರಾಜಸ್ಥಾನ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಪಡೆದುಕೊಂಡಿತು.

DC vs RR: ಡೆಲ್ಲಿ ತಂಡದಲ್ಲಿ 3 ವಿದೇಶಿಗರು, ರಾಯಲ್ಸ್ ತಂಡದಲ್ಲಿ 2 ಬದಲಾವಣೆ; ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್
ಡಿಸಿ Vs ಆರ್​ಆರ್​
TV9 Web
| Edited By: |

Updated on:Sep 25, 2021 | 4:05 PM

Share

ಐಪಿಎಲ್ 2021 ರ ದ್ವಿತೀಯಾರ್ಧದ ಮೊದಲ ಡಬಲ್ ಹೆಡರ್ ಅನ್ನು ಇಂದು ಆಡಲಾಗುತ್ತಿದೆ. ಮೊದಲ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ತಾನ ಬೌಲಿಂಗ್ ಆಯ್ದುಕೊಂಡಿದೆ. ಎರಡೂ ತಂಡಗಳು ಪ್ಲೇಯಿಂಗ್ ಇಲೆವೆನ್‌ಗೆ ಸಂಬಂಧಿಸಿದಂತೆ ತಮ್ಮ ಕಾರ್ಡ್‌ಗಳನ್ನು ತೆರೆದಿವೆ. ಭಾರತದ ಇಬ್ಬರು ಯುವ ವಿಕೆಟ್ ಕೀಪರ್‌ಗಳ ನಾಯಕತ್ವಕ್ಕೆ ಇಂದಿನ ಪಂದ್ಯವು ದೊಡ್ಡ ಪರೀಕ್ಷೆಯಾಗಿದೆ. ರಿಷಭ್ ಪಂತ್ ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದರೆ, ರಾಜಸ್ಥಾನ ರಾಯಲ್ಸ್ ತಂಡದ ಆಡಳಿತ ಸಂಜು ಸ್ಯಾಮ್ಸನ್ ಕೈಯಲ್ಲಿದೆ. ಇಂದಿನ ಪಂದ್ಯದಲ್ಲಿ ಗೆಲುವು ಎರಡೂ ತಂಡಗಳಿಗೆ ಮುಖ್ಯವಾಗಿದೆ. ಡೆಲ್ಲಿ ಗೆಲುವಿನೊಂದಿಗೆ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತಪಡಿಸಲು ನೋಡುತ್ತದೆ. ಮತ್ತೊಂದೆಡೆ, ರಾಜಸ್ಥಾನ ತನ್ನ ಭರವಸೆಗೆ ರೆಕ್ಕೆಗಳನ್ನು ನೀಡಲು ಗೆಲುವನ್ನು ಹುಡುಕಲು ಪ್ರಯತ್ನಿಸುತ್ತದೆ.

ಉಭಯ ತಂಡಗಳು ಟೂರ್ನಿಯ ಎರಡನೇ ಹಂತವನ್ನು ಗೆಲುವಿನೊಂದಿಗೆ ಆರಂಭಿಸಿದವು. ದೆಹಲಿ, ಸನ್ ರೈಸರ್ಸ್ ವಿರುದ್ಧ ಗೆದ್ದರೆ, ರಾಜಸ್ಥಾನ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಗೆಲುವು ಪಡೆದುಕೊಂಡಿತು.ಈ ಋತುವಿನಲ್ಲಿ ಈ ಎರಡು ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯು ಭಾರತದಲ್ಲಿ ಮೊದಲಾರ್ಧದಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಿತು, ಇದರಲ್ಲಿ ರಾಜಸ್ಥಾನವು ಡೇವಿಡ್ ಮಿಲ್ಲರ್ ಮತ್ತು ಕ್ರಿಸ್ ಮೋರಿಸ್ ಬಲದಿಂದ ದೆಹಲಿಯನ್ನು ಸೋಲಿಸಿತು.

ಎರಡೂ ತಂಡಗಳು ಹೀಗಿವೆ: ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ಇಲೆವೆನ್ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಲಲಿತ್ ಯಾದವ್, ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ಆರ್. ಅಶ್ವಿನ್, ಕಾಗಿಸೊ ರಬಾಡಾ, ಎನ್ರಿಕ್ ನಾರ್ಖಿಯಾ, ಅವೇಶ್ ಖಾನ್

ರಾಜಸ್ಥಾನ ರಾಯಲ್ಸ್ ತಂಡ ಡೇವಿಡ್ ಮಿಲ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಲಿಯಾಮ್ ಲಿವಿಂಗ್ಸ್ಟನ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೇವಟಿಯಾ, ತಬ್ರೇಜ್ ಶಮ್ಸಿ, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ, ಮುಸ್ತಫಿಜುರ್ ರಹಮಾನ್

Published On - 3:21 pm, Sat, 25 September 21

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ