IPL 2021: ರಾಜಸ್ಥಾನ್ ಮಣಿಸಿ ನಂ.1 ಪಟ್ಟಕ್ಕೇರಿದ ಡೆಲ್ಲಿ; ನಾಯಕ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ವ್ಯರ್ಥ

IPL 2021: ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅತ್ಯಧಿಕ ಅಜೇಯ 70 ರನ್ ಗಳಿಸಿದರು. ರಾಜಸ್ಥಾನ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಲಷ್ಟೇ ಶಕ್ತವಾಯಿತು.

IPL 2021: ರಾಜಸ್ಥಾನ್ ಮಣಿಸಿ ನಂ.1 ಪಟ್ಟಕ್ಕೇರಿದ ಡೆಲ್ಲಿ; ನಾಯಕ ಸಂಜು ಸ್ಯಾಮ್ಸನ್ ಏಕಾಂಗಿ ಹೋರಾಟ ವ್ಯರ್ಥ
ಡೆಲ್ಲಿ ಕ್ಯಾಪಿಟಲ್ಸ್
Follow us
TV9 Web
| Updated By: ಪೃಥ್ವಿಶಂಕರ

Updated on: Sep 25, 2021 | 7:37 PM

ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್ 2021) 36 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ 33 ರನ್ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಶ್ರೇಯಸ್ ಅಯ್ಯರ್ ದೆಹಲಿ ಪರ 43 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರು. ಈ ಗೆಲುವಿನೊಂದಿಗೆ ದೆಹಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಅಯ್ಯರ್ 32 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ 43 ರನ್ ಗಳಿಸಿದರೆ, ಹೆಟ್ಮೀರ್ 16 ಎಸೆತಗಳಲ್ಲಿ ಐದು ಬೌಂಡರಿಗಳ ನೆರವಿನಿಂದ 28 ರನ್ ಗಳಿಸಿದರು. ರಾಜಸ್ತಾನ ಪರ ಮುಸ್ತಫಿಜುರ್ ರೆಹಮಾನ್ ಮತ್ತು ಚೇತನ್ ಸಕಾರಿಯಾ ತಲಾ ಎರಡು ವಿಕೆಟ್ ಪಡೆದರು.

ಈ ಗೆಲುವಿನ ನಂತರ, ದೆಹಲಿ ಕ್ಯಾಪಿಟಲ್ಸ್ 16 ಅಂಕಗಳನ್ನು ಹೊಂದಿದೆ ಮತ್ತು ಪ್ಲೇಆಫ್‌ಗೆ ಹೋಗುವುದು ಬಹುತೇಕ ಖಚಿತವಾಗಿದೆ. ರಾಜಸ್ಥಾನ ಪರ ನಾಯಕ ಸಂಜು ಸ್ಯಾಮ್ಸನ್ ಅತ್ಯಧಿಕ ಅಜೇಯ 70 ರನ್ ಗಳಿಸಿದರು. ರಾಜಸ್ಥಾನ ತಂಡ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಯಾನ್ ಪರಾಗ್‌ನಿಂದ ದೊಡ್ಡ ಸ್ಕೋರ್ ನಿರೀಕ್ಷಿಸಲಾಗಿತ್ತು. ಆದರೆ ಅಕ್ಷರ್ ಪಟೇಲ್ ಅವರ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದರು. ಪರಾಗ್ ಕೇವಲ ಎರಡು ರನ್ ಗಳಿಸಿದರು.

ಟಾಸ್ ಗೆದ್ದ ರಾಜಸ್ಥಾನ ಟಾಸ್ ಗೆದ್ದ ರಾಜಸ್ಥಾನ ಬೌಲಿಂಗ್ ಆಯ್ಕೆ ಮಾಡಿದ ನಂತರ ಮೊದಲ ಮೂರು ಓವರ್​ಗಳಲ್ಲಿ ಮುಸ್ತಫಿಜುರ್ ರೆಹಮಾನ್, ಮಹಿಪಾಲ್ ಲೊಮರ್ ಮತ್ತು ಚೇತನ್ ಸಕಾರಿಯಾ ಕೇವಲ 18 ರನ್ ಬಿಟ್ಟುಕೊಟ್ಟರು. ಇದರ ಲಾಭ ಹಿಂದಿನ ಪಂದ್ಯದ ನಾಯಕ, ಯುವ ವೇಗದ ಬೌಲರ್ ಕಾರ್ತಿಕ್ ತ್ಯಾಗಿಗೆ (40 ರನ್​ಗಳಿಗೆ ಒಂದು ವಿಕೆಟ್) ಹೋಯಿತು. ಅವರು ನಾಲ್ಕನೇ ಓವರ್‌ನ ಮೊದಲ ಎಸೆತದಲ್ಲಿ ಅನುಭವಿ ಶಿಖರ್ ಧವನ್‌ ಅವರನ್ನು ಔಟ್ ಮಾಡಿದರು. ಕೊನೆಯ ಐದು ಓವರ್‌ಗಳಲ್ಲಿ ಕೇವಲ ಐದು ಬೌಂಡರಿಗಳನ್ನು ಬಾರಿಸಿದ ನಂತರವೂ ದೆಹಲಿ ತಂಡವು 50 ರನ್ ಗಳಿಸಲು ಸಾಧ್ಯವಾಯಿತು.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ