Shreyas Iyer: ದುಬೈನಲ್ಲಿ ಶ್ರೇಯಸ್ ಅಯ್ಯರ್ ಸಿಕ್ಸರ್ ಅಬ್ಬರ: ಸ್ಟೇಡಿಯಂನಿಂದಲೇ ಹೊರಹೋದ ಚೆಂಡು

IPL 2021 Phase 2: ಶ್ರೇಯಸ್ ಅಭ್ಯಾಸದ ವೇಳೆ ಅಯ್ಯರ್ ಅವರು ಭರ್ಜರಿ ಹೊಡೆತಗಳ ಮೂಲಕ ಗಮನ ಸೆಳೆದರು. ಅದರಲ್ಲೂ ಡೆಲ್ಲಿ ಬಾಯ್ ಸಿಡಿಸಿದ ಒಂದು ಸಿಕ್ಸ್​ ಅಮೋಘವಾಗಿತ್ತು. ಇದು ಸ್ಟೇಡಿಯಂನಿಂದಲೇ ಹೊರಕ್ಕೆ ಹೋಗಿದ್ದು ಕಂಡು ಅಲ್ಲಿರುವವರು ಅಚ್ಚರಿಗೊಂಡರು.

Shreyas Iyer: ದುಬೈನಲ್ಲಿ ಶ್ರೇಯಸ್ ಅಯ್ಯರ್ ಸಿಕ್ಸರ್ ಅಬ್ಬರ: ಸ್ಟೇಡಿಯಂನಿಂದಲೇ ಹೊರಹೋದ ಚೆಂಡು
Shreyas Iyer
Follow us
TV9 Web
| Updated By: Digi Tech Desk

Updated on:Aug 19, 2021 | 11:48 AM

ಇಂಡಿಯನ್ ಪ್ರೀಮಿಯರ್ ಲೀಗ್ 2021 (IPL 2021) ಪುನರಾರಂಭಕ್ಕೆ ವೇದಿಕೆ ಸಜ್ಜಾಗಿದೆ. ಮುಂಬರುವ ಸೆಪ್ಟೆಂಬರ್ 19 ರಿಂದ ಬಾಕಿ ಉಳಿದಿರುವ 14ನೇ ಆವೃತ್ತಿಯ ಐಪಿಎಲ್​ ಯುಎಇನಲ್ಲಿ ನಡೆಯಲಿದ್ದು, ಕೆಲ ಆಟಗಾರರು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಆಗಸ್ಟ್ 21 ರಂದು ಯುಎಇಗೆ ಪ್ರಯಾಣ ಬೆಳೆಸಲಿದೆ. ಆದರೆ, ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಆಗಸ್ಟ್ 14 ರಂದೇ ದುಬೈಗೆ ತೆರಳಿದ್ದು, ಐಸಿಸಿ ಅಕಾಡೆಮಿ ಗ್ರೌಂಡ್​ನಲ್ಲಿ ಪ್ರ್ಯಾಕ್ಟೀಸ್ ನಡೆಸುತ್ತಿದ್ದಾರೆ.

ಅಭ್ಯಾಸದ ವೇಳೆ ಅಯ್ಯರ್ ಅವರು ಭರ್ಜರಿ ಹೊಡೆತಗಳ ಮೂಲಕ ಗಮನ ಸೆಳೆದರು. ಅದರಲ್ಲೂ ಡೆಲ್ಲಿ ಬಾಯ್ ಸಿಡಿಸಿದ ಒಂದು ಸಿಕ್ಸ್​ ಅಮೋಘವಾಗಿತ್ತು. ಇದು ಸ್ಟೇಡಿಯಂನಿಂದಲೇ ಹೊರಕ್ಕೆ ಹೋಗಿದ್ದು ಕಂಡು ಅಲ್ಲಿರುವವರು ಅಚ್ಚರಿಗೊಂಡರು. ಇವರ ಸಿಕ್ಸರ್​ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಭಾರತದಲ್ಲಿ ಐಪಿಎಲ್ 2021 ಆರಂಭವಾಗುವ ಮುನ್ನ ಫೆಬ್ರವರಿಯಲ್ಲಿ ಅಯ್ಯರ್ ಇಂಜುರಿಗೆ ತುತ್ತಾಗಿದ್ದರು. ಹೀಗಾಗಿ ಟೂರ್ನಿಯಿಂದ ಸಂಪೂರ್ಣ ಹೊರಗಿಳಿಯಬೇಕಾಗಿ ಬಂತು. ಆದರೆ, ಟೂರ್ನಿ ಅರ್ಧಕ್ಕೆ ನಿಂತು ಈಗ ಮತ್ತೆ ಆರಂಭವಾಗುತ್ತಿದೆ. ಹೀಗಾಗಿ ಚೇತರಿಸಿಕೊಂಡಿರುವ ಅಯ್ಯರ್ ಡೆಲ್ಲಿ ಪರ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಐಪಿಎಲ್ 2021ರ ಫೇಸ್ 1 ರಲ್ಲಿ ಅಯ್ಯರ್ ಅವರ ಅಲಭ್ಯತೆಯಿಂದ ರಿಷಭ್ ಪಂತ್ ನಾಯಕತ್ವದ ಜವಾಬ್ದಾರಿ ಹೊತ್ತಿದ್ದರು. ಇದರ ಅಂಡರ್​ನಲ್ಲಿ ಡೆಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಆಡಿದ 8 ಪಂದ್ಯಗಳಲ್ಲಿ ಕೇವಲ 2 ರಲ್ಲಿ ಸೋತು ಆರರಲ್ಲಿ ಗೆದ್ದು ಬೀಗಿ ಅಗ್ರಸ್ಥಾನದಲ್ಲಿದೆ. ಸದ್ಯ ಅಯ್ಯರ್ ತಂಡ ಸೇರಿಕೊಂಡರೆ ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಪಂತ್ ಮುನ್ನಡೆಸುತ್ತಾರ ಎಂಬುದು ನೋಡಬೇಕಿದೆ.

ಇನ್ನೂ ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರ ಈ ಬಾರಿಯ ಐಪಿಎಲ್ ವೀಕ್ಷಿಸಲು ಸ್ಟೇಡಿಯಂನಲ್ಲಿ ಶೇ. 60 ರಷ್ಟು ಜನರಿಗೆ ಅವಕಾಶ ನೀಡುತ್ತಿದೆ ಎಂದು ಘೋಷಿಸಿದೆ. ಈ ಬಗ್ಗೆ ನಾವು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆ ಮಾತುಕತೆ ನಡೆಸಿ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಹೇಳಿದೆ.

ಕಳೆದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ 14ನೇ ಆವೃತ್ತಿಯ ಐಪಿಎಲ್ ಟೂರ್ನಿ ಕೊರೊನಾ ವೈರಸ್ ಕಾರಣದಿಂದಾಗಿ ಅರ್ಧದಲ್ಲಿಯೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

ಕೋವಿಡ್ ಕಾರಣದಿಂದ ಅರ್ಧದಲ್ಲಿ ಸ್ಥಗಿತಗೊಂಡಿದ್ದ 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮುಂದಿನ ಭಾಗ ಯುಎಇ ನಲ್ಲಿ ನಡೆಯಲಿದೆ. ಇದೇ ಸೆಪ್ಟೆಂಬರ್ 19ರಿಂದ ಐಪಿಎಲ್ 2021 ಪುನರಾರಂಭವಾಗಲಿದ್ದು, ಸಿದ್ದತೆಗಳು ಭರ್ಜರಿಯಾಗಿ ನಡೆಯುತ್ತಿದೆ.

T20 World Cup: ಐಸಿಸಿ ಟಿ-20 ವಿಶ್ವಕಪ್​ಗೆ ಟೀಮ್ ಇಂಡಿಯಾ ಯಾವಾಗ ಪ್ರಕಟ?: ಇಲ್ಲಿದೆ ಮಾಹಿತಿ

The Hundred: ಬ್ಯಾಟ್ಸ್​ಮನ್ ಬಾರಿಸಿದ ಸಿಕ್ಸ್​ಗೆ ಗ್ಯಾಲರಿಯಲ್ಲಿದ್ದ ಅಭಿಮಾನಿಯಿಂದ ಡೈವ್ ಹೊಡೆದು ಅದ್ಭುತ ಕ್ಯಾಚ್

(IPL 2021 Delhi Capitals Shreyas Iyer smashes a huge six in a practice session in UAE)

Published On - 11:41 am, Thu, 19 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ