Dominic Drakes: ಸಿಎಸ್​ಕೆ ಮಾಸ್ಟರ್ ಪ್ಲಾನ್: ಕೊನೇಯ ಹಂತದಲ್ಲಿ ಧೋನಿ ತಂಡಕ್ಕೆ ಬಂದ ಅಪಾಯಕಾರಿ ಆಲ್ರೌಂಡರ್

ಕಳೆದ ರಾಜಸ್ಥಾನ ರಾಯಲ್ಸ್ ಎದುರಿನ ಪಂದ್ಯದ ವೇಳೆ ಸ್ಯಾಮ್ ಕರನ್ ಬೆನ್ನು ನೋವಿಗೆ ತುತ್ತಾಗಿದ್ದರು. ಸದ್ಯ ಇವರ ಜಾಗಕ್ಕೆ ವೆಸ್ಟ್​ ಇಂಡೀಸ್​ನಲ್ಲಿ ಬಾರ್ಬಡಿಯನ್ ತಂಡದ ಪರ ಆಡುತ್ತಿರುವ ಸ್ಟಾರ್ ಆಲ್ರೌಂಡರ್ ಡಾಮಿನಿಕ್ ಡ್ರಾಕ್ಸ್ ಅವರನ್ನು ಸೇರಿಸಲಾಗಿದೆ.

Dominic Drakes: ಸಿಎಸ್​ಕೆ ಮಾಸ್ಟರ್ ಪ್ಲಾನ್: ಕೊನೇಯ ಹಂತದಲ್ಲಿ ಧೋನಿ ತಂಡಕ್ಕೆ ಬಂದ ಅಪಾಯಕಾರಿ ಆಲ್ರೌಂಡರ್
Dominic Drakes CSK
Follow us
TV9 Web
| Updated By: Vinay Bhat

Updated on: Oct 07, 2021 | 11:18 AM

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಟೂರ್ನಿ ಅಂತಿಮ ಹಂತಕ್ಕೆ ತಲುಪುತ್ತಿದೆ. ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings), ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದಿದೆ. ನಾಲ್ಕನೇ ಸ್ಥಾನಕ್ಕಾಗಿ ಕಠಿಣ ಪೈಪೋಟಿ ಏರ್ಪಟ್ಟಿದೆ. ಸಿಎಸ್​ಕೆ (CSK) ತಂಡಕ್ಕೆ ಇತ್ತೀಚೆಗಷ್ಟೆ ದೊಡ್ಡ ಆಘಾತವೊಂದು ಬಂದಪ್ಪಳಿಸಿತು. ಬೆನ್ನು ನೋವಿನಿಂದ ಬಳಲುತ್ತಿದ್ದ ಇಂಗ್ಲೆಂಡ್ ಆಲ್ರೌಂಡರ್, ಸಿಎಸ್​ಕೆಯ ಪ್ರಮುಖ ಆಟಗಾರ ಸ್ಯಾಮ್ ಕರನ್ (Sam Curran), ಐಪಿಎಲ್‌ನ ಉಳಿದ ಭಾಗದಿಂದ ಹೊರಬಿದ್ದರು. ಅಲ್ಲದೆ ಮುಂಬರುವ ಟಿ-20 ವಿಶ್ವಕಪ್ (T20 World Cup) ಟೂರ್ನಿಗೂ ಇವರು ಅಲಭ್ಯರಾಗಿದ್ದಾರೆ. ಹೀಗಾಗಿ ಸದ್ಯ ಧೋನಿ (MS Dhoni) ಪಡೆ ಇವರ ಜಾಗಕ್ಕೆ ಅಂತಿಮ ಹಂತದಲ್ಲಿ ಬದಲಿ ಆಟಗಾರನನ್ನು ಆಯ್ಕೆ ಮಾಡಿದೆ. ವೆಸ್ಟ್​ ಇಂಡೀಸ್​ನಲ್ಲಿ (West Indies) ಬಾರ್ಬಡಿಯನ್ ತಂಡದ ಪರ ಆಡುತ್ತಿರುವ ಸ್ಟಾರ್ ಆಲ್ರೌಂಡರ್ ಡಾಮಿನಿಕ್ ಡ್ರಾಕ್ಸ್ (Dominic Drakes) ಅವರನ್ನು ಕರನ್ ಜಾಗಕ್ಕೆ ಸಿಎಸ್​ಕೆ ಬದಲಿ ಆಟಗಾರನಾಗಿ ಆಯ್ಕೆ ಮಾಡಿದೆ.

ಹೌದು, ಕಳೆದ ರಾಜಸ್ಥಾನ ರಾಯಲ್ಸ್ ಎದುರಿನ ಪಂದ್ಯದ ವೇಳೆ ಸ್ಯಾಮ್ ಕರನ್ ಬೆನ್ನು ನೋವಿಗೆ ತುತ್ತಾಗಿದ್ದರು. ಬಳಿಕ ನಡೆಸಿದ ಸ್ಕ್ಯಾನಿಂಗ್ ನಲ್ಲಿ ಗಾಯಗೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಇವರು ಐಪಿಎಲ್​ನಿಂದ ಹೊರ ನಡೆದಿದ್ದಾರೆ. ಸದ್ಯ ಇವರ ಜಾಗಕ್ಕೆ ಕಳೆದ ಆವೃತ್ತಿಯ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅಮೋಘ ಪ್ರದರ್ಶನ ನೀಡಿದ ಡಾಮಿನಿಕ್ ಡ್ರಾಕ್ಸ್ ಅವರನ್ನು ಸೇರಿಸಲಾಗಿದೆ.

ಸಿಪಿಎಲ್ 2021 ರಲ್ಲಿ ಇವರು ಸ್ಯಾಟ್ ಕಿಟ್ಸ್ ಮತ್ತು ನೆವಿಸ್ ತಂಡದ ಪರ ಆಡುತ್ತಿದ್ದರು. ಇದರಲ್ಲಿ ಡಾಮಿನಿಕ್ 11 ಪಂದ್ಯಗಳಿಂದ 16 ವಿಕೆಟ್ ಕಬಳಿಸಿದ್ದರು. ಅಲ್ಲದೆ ಫೈನಲ್ ಪಂದ್ಯದಲ್ಲಿ ಕೇವಲ 24 ಎಸೆತಗಳಲ್ಲಿ 48 ರನ್ ಚಚ್ಚಿದ್ದರು. ಸದ್ಯ ಈ ಅಪಾಯಕಾರಿ ಆಟಗಾರನನ್ನು ಚೆನ್ನೈ ತನ್ನ ತಂಡಕ್ಕೆ ಸೇರಿಸಿಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಆಟ ಪ್ರದರ್ಶಿಸುತ್ತಿದೆ. ಈವರೆಗೆ ಒಟ್ಟು 13 ಪಂದ್ಯಗಳನ್ನು ಆಡಿದ್ದು 10 ಪಂದ್ಯಗಳಲ್ಲಿ ಗೆದ್ದಿದೆ. ಮೂರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 18 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.739 ನೆಟ್​ರೇಟ್​ನೊಂದಿಗೆ ಎರಡನೇ ಸ್ಥಾನದಲ್ಲಿದೆ. ಧೋನಿ ಪಡೆ ಇಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಕೆ. ಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.

ಸಿಎಸ್​ಕೆ ಲೀಗ್​ನಲ್ಲಿ ಆಡುತ್ತಿರುವ ಕೊನೇಯ ಪಂದ್ಯ ಇದಾಗಿದ್ದು, ಪಂಜಾಬ್ ವಿರುದ್ಧ ಗೆದ್ದು ಅಗ್ರಸ್ಥಾನಕ್ಕೇರುವ ಪ್ಲಾನ್​ನಲ್ಲಿದೆ. ತಂಡ ಸೇರಿಕೊಂಡಿರುವ ಹೊಸ ಆಟಗಾರ ಡಾಮಿನಿಕ್ ಡ್ರಾಕ್ಸ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿದರೆ ಅಚ್ಚರಿ ಪಡಬೇಕಿಲ್ಲ. ಇತ್ತ ಟೂರ್ನಿಯಿಂದ ಬಹುತೇಕ ಹೊರಬಿದ್ದಿರುವ ಪಂಜಾಬ್​ ಈ ಪಂದ್ಯ ಸೋತರೆ ಅಧಿಕೃತವಾಗಿ ತನ್ನ ಪ್ರಯಾಣವನ್ನು ಅಂತ್ಯಗೊಳಿಸಲಿದೆ.

Umran Malik: ಬುಮ್ರಾ, ಶಮಿಗೂ ಆಗಲಿಲ್ಲ: ತನ್ನ 2ನೇ ಪಂದ್ಯದಲ್ಲೇ ಐಪಿಎಲ್​ನಲ್ಲಿ ದಾಖಲೆ ಬರೆದ ಉಮ್ರಾನ್ ಮಲಿಕ್

Virat Kohli: ಎಸ್​ಆರ್​ಹೆಚ್ ವಿರುದ್ಧ ಸೋಲು: ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ದೂರಿದ್ದು ಯಾರನ್ನ ಗೊತ್ತಾ?

(Dominic Drakes has joined Chennai Super Kings CSK as a replacement for injured Sam Curran in IPL 2021)

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?