AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಂಡ್ಯ ಶೀಘ್ರದಲ್ಲೇ ಬೌಲಿಂಗ್ ಮಾಡಲಿದ್ದಾರೆ ಎಂದ ದೀಪ್ ದಾಸ್‌ಗುಪ್ತಾ; ಅದೇ.. ಯಾವಾಗ ಎಂದು ಪ್ರಶ್ನಿಸಿದ ಗಂಭೀರ್

Hardik Pandya: ಹಾರ್ದಿಕ್ ಟಿ 20 ವಿಶ್ವಕಪ್‌ನಲ್ಲಿ ನೇರವಾಗಿ ಬೌಲಿಂಗ್ ಮಾಡುತ್ತಾರೆಯೇ? ಹಾಗಿದ್ದಲ್ಲಿ, ಇದು ಅವರ ಮೇಲೂ ಒತ್ತಡ ಹೆರುತ್ತದೆ. ಏಕೆಂದರೆ ಅವರು ದೀರ್ಘಕಾಲದಿಂದ ಬೌಲಿಂಗ್ ಮಾಡಿಲ್ಲ ಎಂದರು.

ಪಾಂಡ್ಯ ಶೀಘ್ರದಲ್ಲೇ ಬೌಲಿಂಗ್ ಮಾಡಲಿದ್ದಾರೆ ಎಂದ ದೀಪ್ ದಾಸ್‌ಗುಪ್ತಾ; ಅದೇ.. ಯಾವಾಗ ಎಂದು ಪ್ರಶ್ನಿಸಿದ ಗಂಭೀರ್
ಹಾರ್ದಿಕ್ ಪಾಂಡ್ಯ
TV9 Web
| Edited By: |

Updated on: Oct 03, 2021 | 5:09 PM

Share

ಮುಂಬೈ ಇಂಡಿಯನ್ಸ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ಫಿಟ್ನೆಸ್ ಬಗ್ಗೆ ಇನ್ನೂ ಹಲವು ಪ್ರಶ್ನೆಗಳು ಎದ್ದಿವೆ. ಅವರು ಮೈದಾನದಲ್ಲಿ ಗೋಚರಿಸುತ್ತಾರೆ, ಆದರೆ ಬೌಲಿಂಗ್ ಮಾಡುವುದಿಲ್ಲ. ಟಿ 20 ವಿಶ್ವಕಪ್‌ನಲ್ಲಿ ಹಾರ್ದಿಕ್ ಭಾರತ ತಂಡದ ಭಾಗವಾಗಿದ್ದಾರೆ. ಈ ಕಾರಣದಿಂದಾಗಿ, ಅವರು ಬೌಲಿಂಗ್ ಮಾಡದಿರುವುದು ಗಂಭೀರ ಸಮಸ್ಯೆಯಾಗುತ್ತಿದೆ. ಕ್ರಿಕೆಟ್ ಪ್ರೇಮಿಗಳಿಂದ ಹಿಡಿದು ಪರಿಣಿತರವರೆಗೆ ಅವರ ಫಿಟ್ನೆಸ್ ಅನ್ನು ಪ್ರಶ್ನಿಸಲಾಗುತ್ತಿದೆ. ಈ ಸಮಯದಲ್ಲಿ, ಹಾರ್ದಿಕ್ ಶೀಘ್ರದಲ್ಲೇ ಬೌಲಿಂಗ್ ಮಾಡುವುದಾಗಿ ಜನರಿಗೆ ಭರವಸೆ ನೀಡಿದ್ದಾರೆ. ದೆಹಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮುಂಚಿತವಾಗಿ ಪ್ರಸಾರಕರೊಂದಿಗೆ ಮಾತನಾಡುತ್ತಾ, ಪಾಂಡ್ಯ ಅವರು ಭಾರತದ ಮಾಜಿ ಕ್ರಿಕೆಟಿಗ ಮತ್ತು ಬ್ರಾಡ್‌ಕಾಸ್ಟರ್ ದೀಪ್ ದಾಸ್‌ಗುಪ್ತಾ ಅವರಿಗೆ ಬೌಲಿಂಗ್ ಮಾಡಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿದ ಹಾರ್ದಿಕ್, ಟ್ರೈ ಫುಲ್, ಶೀಘ್ರದಲ್ಲೇ ಬರಲಿದೆ’, ಪಾಂಡ್ಯ ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಬೌಲಿಂಗ್ ಮಾಡಿಲ್ಲ ಏಕೆಂದರೆ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಈ ವರ್ಷ ಅವರು ಕೊನೆಯ ಬಾರಿಗೆ ಇಂಗ್ಲೆಂಡ್ ವಿರುದ್ಧ ಬೌಲಿಂಗ್ ಮಾಡಿದ್ದರು. ಮುಂಬರುವ ಟಿ 20 ವಿಶ್ವಕಪ್‌ಗಾಗಿ ಭಾರತ ತಂಡದಲ್ಲಿ ಪಾಂಡ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಕೂಡ, ಹಾರ್ದಿಕ್ ವಿಶ್ವಕಪ್​ನಲ್ಲಿ ಬೌಲಿಂಗ್ ಮಾಡುತ್ತಾರೆ ಹೇಳಿದ್ದರು.

ಸಮಯ ಯಾವಾಗ ಬರುತ್ತದೆ ಎಂದು ಗಂಭೀರ್ ಗೌತಮ್ ಗಂಭೀರ್ ಸ್ಟಾರ್ ಸ್ಪೋರ್ಟ್ಸ್ ಜೊತೆಯ ಸಂಭಾಷಣೆಯಲ್ಲಿ, ಸಮಯ ಬೇಗ ಬರುತ್ತದೆ ಆದರೆ ಅದು ಯಾವಾಗ ಎಂದು ಕೇಳಿದರು. ಏಕೆಂದರೆ ಐಪಿಎಲ್ 2021 ರಲ್ಲಿ, ಗುಂಪು ಹಂತದಲ್ಲಿ ಯಾವುದೇ ಪಂದ್ಯಗಳು ಉಳಿದಿಲ್ಲ. ಮುಂಬೈ ಪ್ಲೇಆಫ್‌ಗೆ ಅರ್ಹತೆ ಪಡೆಯದಿದ್ದರೆ, ಹಾರ್ದಿಕ್ ಟಿ 20 ವಿಶ್ವಕಪ್‌ನಲ್ಲಿ ನೇರವಾಗಿ ಬೌಲಿಂಗ್ ಮಾಡುತ್ತಾರೆಯೇ? ಹಾಗಿದ್ದಲ್ಲಿ, ಇದು ಅವರ ಮೇಲೂ ಒತ್ತಡ ಹೆರುತ್ತದೆ. ಏಕೆಂದರೆ ಅವರು ದೀರ್ಘಕಾಲದಿಂದ ಬೌಲಿಂಗ್ ಮಾಡಿಲ್ಲ ಎಂದರು.

ಬೌಲಿಂಗ್​ನಿಂದಾಗಿ ಬ್ಯಾಟಿಂಗ್ ಸಮಸ್ಯೆಯಾಗಬಹುದು ಮುಂಬೈ ಇಂಡಿಯನ್ಸ್ ತಂಡದ ಮುಖ್ಯ ತರಬೇತುದಾರ ಮಹೇಲಾ ಜಯವರ್ಧನೆ ಶುಕ್ರವಾರ ಹಾರ್ದಿಕ್ ಬೌಲಿಂಗ್ ಮಾಡಲು ಹೆಚ್ಚು ಶ್ರಮಪಟ್ಟರೆ ಬ್ಯಾಟಿಂಗ್ ಮಾಡಲು ಕಷ್ಟವಾಗಬಹುದು ಎಂದು ಹೇಳಿದ್ದಾರೆ. ಏಕೆಂದರೆ ಶ್ರೀಲಂಕಾ ಪ್ರವಾಸದಲ್ಲೂ ಹಾರ್ದಿಕ್ ಬೌಲಿಂಗ್ ಮಾಡಿಲ್ಲ. ನಾವು ಬಿಸಿಸಿಐ ಜೊತೆ ಮಾತನಾಡುತ್ತಿದ್ದೇವೆ ಮತ್ತು ಅವರು ಬೇಗನೆ ಫಿಟ್ ಆಗುತ್ತಾರೆ ಎಂದು ಖಚಿತಪಡಿಸಿಕೊಳ್ಳುತ್ತಿದ್ದೇವೆ. ಹಾರ್ದಿಕ್ ಐಪಿಎಲ್‌ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾದರೆ, ಅವರು ಹೇಗೆ ಮುಂದುವರೆಯುತ್ತಾರೆ ಎಂಬುದನ್ನು ನಾವು ನೋಡಬೇಕು ಎಂದರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ