IPL 2021: ಐಪಿಎಲ್ ಅಭಿಮಾನಿಗಳಿಗೆ ಗುಡ್​ ನ್ಯೂಸ್: ಈ ತಂಡಗಳ ನಡುವೆ ನಡೆಯಲಿದೆ ಮೊದಲ ಪಂದ್ಯ

IPL 2021 Schedule: ಮೊದಲ ಕ್ವಾಲಿಫೈಯರ್ ಪಂದ್ಯವು ಅಕ್ಟೋಬರ್ 10 ರಂದು ದುಬೈನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಹಾಗೆಯೇ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಕ್ರಮವಾಗಿ ಅಕ್ಟೋಬರ್ 11 ಮತ್ತು 13 ರಂದು ಶಾರ್ಜಾದಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 15 ರಂದು ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಡೇಡಿಯಂನಲ್ಲಿ ಫೈನಲ್ ಪಂದ್ಯ ಜರುಗಲಿದೆ.

IPL 2021: ಐಪಿಎಲ್ ಅಭಿಮಾನಿಗಳಿಗೆ ಗುಡ್​ ನ್ಯೂಸ್: ಈ ತಂಡಗಳ ನಡುವೆ ನಡೆಯಲಿದೆ ಮೊದಲ ಪಂದ್ಯ
IPL 2021
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 25, 2021 | 6:58 PM

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಇಷ್ಟೊತ್ತಿಗಾಗಲೇ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 14 ಮುಗಿದು ಸೀಸನ್ 15 ರ ಸಿದ್ಧತೆಗಳ ಆರಂಭವಾಗಬೇಕಿತ್ತು. ಆದರೆ ಕೊರೋನಾ ಮಹಾಮಾರಿ ಬಿಸಿಸಿಐನ ಎಲ್ಲಾ ಲೆಕ್ಕಚಾರಗಳನ್ನು ತಲೆಕೆಳಗಾಗಿಸಿತು. ಸಂಪೂರ್ಣ ಸುರಕ್ಷತೆಯೊಂದಿಗೆ ಏಪ್ರಿಲ್​ನಲ್ಲಿ ಐಪಿಎಲ್ ಆರಂಭಿಸಲಾಗಿತ್ತು. ಇದಾಗ್ಯೂ ಕೆಲ ಆಟಗಾರರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮೇ 4 ರಂದು ಟೂರ್ನಿಯನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. ಇದೀಗ ಯುಎಇನಲ್ಲಿ ಟೂರ್ನಿಯ ದ್ವಿತಿಯಾರ್ಧ ಆರಂಭಿಸಲು ಸಿದ್ದತೆಗಳು ಶುರುವಾಗಿದೆ.

ಸೆಪ್ಟೆಂಬರ್ 19 ರಿಂದ ಟೂರ್ನಿಯ ಉಳಿದ ಪಂದ್ಯಗಳಿಗೆ ಚಾಲನೆ ನೀಡುವುದಾಗಿ ಬಿಸಿಸಿಐ ಘೋಷಿಸಿದೆ. ಉಳಿದ 31 ಪಂದ್ಯಗಳನ್ನು ಮೂರು ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅದರಂತೆ ಶಾರ್ಜಾ, ಅಬುಧಾಬಿ ಹಾಗೂ ದುಬೈನ ಕ್ರಿಕೆಟ್ ಸ್ಟೇಡಿಯಂಲ್ಲಿ ಐಪಿಎಲ್ ಕಾದಾಟ ನಡೆಯಲಿದೆ. ಸದ್ಯ ಐಪಿಎಲ್ ಆಡಳಿತ ಮಂಡಳಿ ವೇಳಾಪಟ್ಟಿ ಸಿದ್ಧತೆಗಳ ಕುರಿತಾಗಿ ಚರ್ಚೆ ನಡೆಸಿದ್ದು, ಅದರಂತೆ ಮೊದಲ ಪಂದ್ಯದಲ್ಲಿ ಯಾರನ್ನು ಕಣಕ್ಕಿಳಿಸುವುದು ಎಂಬುದರ ಬಗ್ಗೆ ಚರ್ಚಿಸಲಾಗಿದೆ.

ಈ ಹಿಂದಿನ ವೇಳಾಪಟ್ಟಿ ಪ್ರಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್ 30ನೇ ಪಂದ್ಯದ ಮೂಲಕ ಮುಖಾಮುಖಿಯಾಗಬೇಕಿತ್ತು. ಆದರೀಗ ಯುಎಇನಲ್ಲಿ ಹೊಸ ವೇಳಾಪಟ್ಟಿ ರೂಪಿಸಲು ಬಿಸಿಸಿಐ ಚಿಂತಿಸಿದೆ. ಅದರಂತೆ ಮೊದಲ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ ಎಂದು ವರದಿಯಾಗಿದೆ.

ಅರದರಂತೆ ಯುಎಇನಲ್ಲಿ ನಡೆಯಲಿರುವ ಉಳಿದ 31 ಪಂದ್ಯಗಳಿಗೆ ಹೊಸ ವೇಳಾಪಟ್ಟಿ ಇರುವುದು ಬಹುತೇಕ ಖಚಿತ ಎನ್ನಬಹುದು. ಸದ್ಯ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನ ಅಲಂಕರಿಸಿದರೆ, ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಇದೆ. ಹಾಗೆಯೇ ಮೂರನೇ ಸ್ಥಾನವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಲಂಕರಿಸಿದೆ. ಇನ್ನು ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನದಲ್ಲಿದೆ. ಅಂದರೆ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಪಡೆ ದ್ವಿತೀಯ ಸ್ಥಾನದಲ್ಲಿರುವ ಧೋನಿ ಪಡೆಯನ್ನು ಎದುರಿಸಲಿದೆ.

ಅದೇ ರೀತಿ ಮೊದಲ ಕ್ವಾಲಿಫೈಯರ್ ಪಂದ್ಯವು ಅಕ್ಟೋಬರ್ 10 ರಂದು ದುಬೈನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಹಾಗೆಯೇ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಕ್ರಮವಾಗಿ ಅಕ್ಟೋಬರ್ 11 ಮತ್ತು 13 ರಂದು ಶಾರ್ಜಾದಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 15 ರಂದು ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಡೇಡಿಯಂನಲ್ಲಿ ಫೈನಲ್ ಪಂದ್ಯ ಜರುಗಲಿದೆ.

ಇದನ್ನೂ ಓದಿ: IPL 2021: ಐಪಿಎಲ್​ ಆರಂಭಕ್ಕೂ ಮುನ್ನವೇ CSK ತಂಡದ ಬಿಗ್​ ಪ್ಲ್ಯಾನ್..!

ಇದನ್ನೂ ಓದಿ: ದ್ರಾವಿಡ್ ಗರಡಿ ಹುಡುಗರು ಎಡವಿದೆಲ್ಲಿ: ಭಾರತದ ಸೋಲಿಗೆ ಇದುವೇ ಪ್ರಮುಖ ಕಾರಣ..!

(IPL 2021: IPL Second phase of the competition to kick off with CSK vs MI clash in Dubai)

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ