IPL 2021: 56 ಲೀಗ್ ಪಂದ್ಯಗಳಿಗೆ ತೆರೆ: ಡೆಲ್ಲಿ-ಚೆನ್ನೈ ಕ್ವಾಲಿಫೈಯರ್​ಗೆ, ಆರ್​ಸಿಬಿ-ಕೆಕೆಆರ್ ಎಲಿಮಿನೇಟರ್​ನಲ್ಲಿ ಮುಖಾಮುಖಿ

ಅಂತಿಮ ಹಂತಕ್ಕೆ ತಲುಪಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2021 ಸಾಕಷ್ಟು ರೋಚಕತೆಯಿಂದ ಕೂಡಿದೆ. ಈ ಬಾರಿ ಯಾರ ಮಡಿಲಿಗೆ ಟ್ರೋಫಿ ಎಂಬುದು ಇನ್ನೇನು ಕೆಲವೇ ದಿನಗಳಲ್ಲಿ ಬಹಿರಂಗವಾಗಲಿದೆ.

IPL 2021: 56 ಲೀಗ್ ಪಂದ್ಯಗಳಿಗೆ ತೆರೆ: ಡೆಲ್ಲಿ-ಚೆನ್ನೈ ಕ್ವಾಲಿಫೈಯರ್​ಗೆ, ಆರ್​ಸಿಬಿ-ಕೆಕೆಆರ್ ಎಲಿಮಿನೇಟರ್​ನಲ್ಲಿ ಮುಖಾಮುಖಿ
DC vs CSK and RCB vs KKR
Follow us
TV9 Web
| Updated By: Vinay Bhat

Updated on: Oct 09, 2021 | 7:34 AM

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ (IPL 2021) ಅಂತಿಮ ಹಂತಕ್ಕೆ ಬಂದು ನಿಂತಿದೆ. 56 ಲೀಗ್ ಪಂದ್ಯಗಳಿಗೆ ಶುಕ್ರವಾರ ತೆರೆಬಿದ್ದಿದ್ದು, ಇನ್ನುಂದೆ ಕ್ವಾಲಿಫೈಯರ್ ಪಂದ್ಯಗಳು ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ (Delhi Capitals), ಚೆನ್ನೈ ಸೂಪರ್ ಕಿಂಗ್ಸ್ (Chennai Super Kings), ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡ ಈ ಬಾರಿ ಕಪ್ ಗೆಲ್ಲುವ ರೇಸ್​ನಲ್ಲಿದೆ. ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಪ್ಲೇ ಆಫ್ ಪ್ರವೇಶಿಸುವ ಕೊನೇಯ ಕಠಿಣ ಅವಕಾಶ ಇತ್ತಾದರು ನಿನ್ನೆ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ವಿಫಲವಾಗಿ ಟೂರ್ನಿಯಿಂದ ಹೊರಬಿತ್ತು. ಸದ್ಯ ಪ್ಲೇ ಆಫ್ ಪಂದ್ಯಗಳ ಮೇಲೆ ಎಲ್ಲರ ಕಣ್ಣಿದೆ.

ಮೊದಲ ಕ್ವಾಲಿಫೈಯರ್​ನಲ್ಲಿ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಲಿದೆ. ಇಲ್ಲಿ ಗೆದ್ದ ತಂಡ ನೇರವಾಗಿ ಫೈನಲ್​ಗೆ ಲಗ್ಗೆಯಿಡಲಿದೆ. ಇನ್ನು ಎಲಿಮಿನೇಟರ್ ಪಂದ್ಯದಲ್ಲಿ ಆರ್​ಸಿಬಿ ಮತ್ತು ಕೆಕೆಆರ್ ಸೆಣೆಸಾಟ ನಡೆಸಲಿದ್ದು, ಇಲ್ಲಿ ಸೋತ ತಂಡ ನೇರವಾಗಿ ಟೂರ್ನಿಯಿಂದ ಹೊರಬಿದ್ದರೆ ಗೆದ್ದ ತಂಡ ಮೊದಲ ಕ್ವಾಲಿಫೈಯರ್​ನಲ್ಲಿ ಸೋತ ತಂಡದೊಂದಿಗೆ ಫೈನಲ್​ಗೇರಲು ಹೋರಾಟ ನಡೆಸಬೇಕಿದೆ.

ಡೆಲ್ಲಿ ಮತ್ತು ಚೆನ್ನೈ ತಂಡಗಳು ಮೊದಲ ಕ್ವಾಲಿಫೈಯರ್​ನಲ್ಲಿ ಅಕ್ಟೋಬರ್ 10 ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಖಾಮುಖಿ ಆಗಲಿದೆ. ಆರ್​​ಸಿಬಿ ಮತ್ತು ಕೆಕೆಆರ್ ಅಕ್ಟೋಬಬರ್ 11 ರಂದು ಎಲಿಮಿನೇಟರ್ ಪಂದ್ಯದಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಣೆಸಾಟ ನಡೆಸಲಿದೆ. ಕ್ವಾಲಿಫೈಯರ್ 2 ಪಂದ್ಯ ಅ. 13 ರಂದು ನಡೆದರೆ ಅಂತಿಮ ಫೈನಲ್ ಕದನ ಅ. 15 ರಂದು ಜರುಗಲಿದೆ.

ಈ ಬಾರಿಯ ಮೊದಲ ಕ್ವಾಲಿಫೈಯರ್ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಯಾಕಂದ್ರೆ ಐಪಿಎಲ್ 2021 ರಲ್ಲಿ ಡೆಲ್ಲಿ-ಚೆನ್ನೈ ಎರಡು ಬಾರಿ ಮುಖಾಮಖಿ ಆಗಿತ್ತು. ಈ ಎರಡೂ ಪಂದ್ಯದಲ್ಲಿ ಧೋನಿ ಪಡೆ ಪಂತ್ ವಿರುದ್ಧ ಸೋಲು ಕಂಡಿದೆ. ಇತ್ತ ಚೊಚ್ಚಲ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿರುವ ಆರ್​ಸಿಬಿ ಪಾಸಿಟಿವ್ ಆಗಿದೆ. ನಾಯಕನಾಗಿ ವಿರಾಟ್ ಕೊಹ್ಲಿಗೆ ಇದು ಕೊನೇಯ ಐಪಿಎಲ್ ಕೂಡ ಹೌದು. ಈ ಬಾರಿಯ ಲೀಗ್ ಪಂದ್ಯಗಳ ಮುಖಾಮುಖಿಯಲ್ಲಿ ಒಮ್ಮೆ ಕೆಕೆಆರ್ ಗೆದ್ದರೆ, ಮತ್ತೊಮ್ಮೆ ಆರ್​ಸಿಬಿ ಗೆದ್ದಿದೆ.

ಒಟ್ಟಾರೆ ಅಂತಿಮ ಹಂತಕ್ಕೆ ತಲುಪಿರುವ ಇಂಡಿಯನ್ ಪ್ರೀಮಿಯರ್ ಲೀಗ್ 2021 ಸಾಕಷ್ಟು ರೋಚಕತೆಯಿಂದ ಕೂಡಿದೆ. ಈ ಬಾರಿ ಯಾರ ಮಡಿಲಿಗೆ ಟ್ರೋಫಿ ಎಂಬುದು ಇನ್ನೇನು ಕೆಲವೇ ದಿನಗಳಲ್ಲಿ ಬಹಿರಂಗವಾಗಲಿದೆ.

SRH vs MI: ಮನೀಶ್ ಪಾಂಡೆ ಏಕಾಂಗಿ ಹೋರಾಟ ವ್ಯರ್ಥ; ಗೆಲುವಿನೊಂದಿಗೆ ಐಪಿಎಲ್ ಪಯಣ ಮುಗಿಸಿದ ಮುಂಬೈ

RCB vs DC, IPL 2021: ಕೊನೆಯ ಎಸೆತದಲ್ಲಿ ಸಿಕ್ಸ್​: ಡೆಲ್ಲಿ ವಿರುದ್ದ ಆರ್​ಸಿಬಿಗೆ ರೋಚಕ ಜಯ

(IPL 2021 league matches Ended DC vs CSK in Qualifier 1 and RCB vs KKR in eliminator Match)

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ