IPL 2021, MI vs DC: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ಗೆ ಪ್ಲೇ ಆಫ್​ ತಲುಪಿರುವ ಡೆಲ್ಲಿ ಸವಾಲ್

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ 29 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 16 ಪಂದ್ಯಗಳಲ್ಲಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ.

IPL 2021, MI vs DC: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ಗೆ ಪ್ಲೇ ಆಫ್​ ತಲುಪಿರುವ ಡೆಲ್ಲಿ ಸವಾಲ್
MI vs DC

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2021) ಎರಡು ಮಹತ್ವದ ಪಂದ್ಯಗಳು ಜರುಗಲಿದೆ. ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ (Rohit Sharma) ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ರಿಷಭ್ ಪಂತ್ (Rishabh Pant) ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ (MI vs DC) ತಂಡವನ್ನು ಎದುರಿಸಲಿದೆ. ಡೆಲ್ಲಿ ಈಗಾಗಲೇ ಪ್ಲೇ ಆಫ್​ಗೆ ಲಗ್ಗೆಯಿಟ್ಟಿದೆ. ಇದನ್ನು ಗೆದ್ದು ಅಗ್ರಸ್ಥಾನ ಕಾಯ್ದುಕೊಳ್ಳುವ ಯೋಜನೆಯಲ್ಲಿದೆ. ಆದರೆ, ಇತ್ತ ಮುಂಬೈಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಗೆದ್ದರೆ ಪ್ಲೇ ಆಫ್ (Playoffs) ಸುತ್ತು ಪ್ರವೇಶಿಸುವ ಅವಕಾಶ ಇನ್ನೂ ಇರಲಿದೆ. ಸೋತರೆ ಇತರೆ ತಂಡಗಳ ಫಲಿತಾಂಶದ ಮೇಲೆ ಮುಂಬೈ ಭವಿಷ್ಯ ನಿಲ್ಲಲಿದೆ.

ಸದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಒಟ್ಟು 11 ಪಂದ್ಯಗಳನ್ನು ಆಡಿದ್ದು ಎಂಟು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಮೂರು ಪಂದ್ಯಗಳಲ್ಲಿ ಸೋತಿದೆ. ಒಟ್ಟು 16 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ +0.562 ನೆಟ್​ರೇಟ್​ನೊಂದಿಗೆ ಎರಡನೇ ತಂಡವಾಗಿ ಪ್ಲೇ ಆಫ್ ಸುತ್ತು ಪ್ರವೇಶಿಸಿದೆ. ಮುಂಬೈ ಇಂಡಿಯನ್ಸ್ ಈವರೆಗೆ ಒಟ್ಟು 11 ಪಂದ್ಯಗಳನ್ನು ಆಡಿದ್ದು ಕೇವಲ 5 ಪಂದ್ಯಗಳನ್ನಷ್ಟೆ ಗೆದ್ದಿದೆ. ಆರು ಪಂದ್ಯಗಳಲ್ಲಿ ಸೋಲುಂಡಿದೆ. ಒಟ್ಟು 10 ಅಂಕ ಸಂಪಾದಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ -0.453 ನೆಟ್​ರೇಟ್​ನೊಂದಿಗೆ ಆರನೇ ಸ್ಥಾನದಲ್ಲಿದೆ.

ರೋಹಿತ್ ಪಡೆಗೆ ಬ್ಯಾಟರ್​ಗಳ ಕಳಪೆ ಪ್ರದರ್ಶನವೇ ದೊಡ್ಡ ತಲೆನೋವಾಗಿದೆ. ಅದರಲ್ಲೂ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಯಾವೊಂದು ಪಂದ್ಯದಲ್ಲಿ ಮಿಂಚುತ್ತಿಲ್ಲ. ಓಪನರ್​ಗಳಾದ ರೋಹಿತ್ ಶರ್ಮಾ ಹಾಗೂ ಕ್ವಿಂಟರ್ ಡಿಕಾಕ್ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ. ಹಾರ್ದಿಕ್ ಪಾಂಡ್ಯ ಲಯ ಕಂಡುಕೊಂಡಿದ್ದಾರೆ. ಕೀರೊನ್ ಪೊಲಾರ್ಡ್ ಕೂಡ ಫಾರ್ಮ್​ನಲ್ಲಿಲ್ಲ. ಸೌರಭ್ ತಿವಾರಿ ಸ್ಥಾನ ಇನ್ನೂ ಖಚಿತವಾಗಿಲ್ಲ. ಆದ್ರೆ, ಮುಂಬೈ ಬೌಲಿಂಗ್​ನಲ್ಲಿ ಬಲ ಪಡೆದುಕೊಂಡಿದೆ. ಜಸ್​ಪ್ರೀತ್ ಬುಮ್ರಾ ಹಾಗೂ ರಾಹುಲ್ ಚಹಾರ್ ವಿಕೆಟ್ ಟೇಕಿಂಗ್ ಬೌಲರ್​ಗಳಾದರೆ, ಕ್ರುನಾಲ್ ಪಾಂಡ್ಯ ಹಾಗೂ ಟ್ರೆಂಟ್ ಬೌಲ್ಟ್ ಇವರಿಗೆ ಸಾಥ್ ನೀಡುತ್ತಿದ್ದಾರೆ.

ಇತ್ತ ಡೆಲ್ಲಿ ತಂಡ ಎಲ್ಲಾ ವಿಭಾಗಗಳಲ್ಲಿ ಬಲಿಷ್ಠದಂತೆ ಗೋಚರಿಸುತ್ತದೆ. ಸ್ಟೀವ್ ಸ್ಮಿತ್, ಶಿಖರ್ ಧವನ್, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಉತ್ತಮ ಬ್ಯಾಟಿಂಗ್ ಮಾಡುತ್ತಾರೆ. ಶಿಮ್ರೋನ್ ಹೆಟ್ಮೇರ್ ಪಂದ್ಯವನ್ನು ಫಿನಿಶ್ ಮಾಡುವ ಜವಾಬ್ದಾರಿ ಹೊರಬೇಕಷ್ಟೆ. ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ ಹಾಗೂ ಆನ್ರಿಚ್ ನಾರ್ಟ್ಜೆ ಅಪಾಯಕಾರಿಯಾಗಿ ಗೋಚರಿಸಿದ್ದಾರೆ.

ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ 29 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 16 ಪಂದ್ಯಗಳಲ್ಲಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 13 ಪಂದ್ಯಗಳಲ್ಲಿ ಗೆದ್ದ ಇತಿಹಾಸವಿದೆ. ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

IND W vs AUS W: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್‌; 2ನೇ ದಿನದಾಟ ಅಂತ್ಯ.. ಪ್ರಾಬಲ್ಯ ಮೇರೆದ ಭಾರತ ವನಿತೆಯರ ತಂಡ

(IPL 2021 MI vs DC Mumbai Indians and Delhi Capitals face off on Saturday first match in Sharjah)

Read Full Article

Click on your DTH Provider to Add TV9 Kannada