14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2021) ಕೂಟದ ಯುಎಇ ಚರಣಕ್ಕೆ ಇನ್ನೊಂದು ತಿಂಗಳಷ್ಟೆ ಬಾಕಿಯಿದೆ. ಸೆಪ್ಟೆಂಬರ್ 19ರಿಂದ ದುಬೈನಲ್ಲಿ ಐಪಿಎಲ್ ಮುಂದುವರಿದ ಭಾಗ ಆರಂಭವಾಗಲಿದೆ. ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಹಲವು ಸದಸ್ಯರು ಈಗಾಗಲೇ ದುಬೈ ತಲುಪಿ ಕ್ವಾರಂಟೈನ್ ಕೂಡ ಪೂರ್ಣಗೊಳಿಸಿದ್ದು ಅಭ್ಯಾಸಕ್ಕಿಳಿದಿದೆ.
ಎಲ್ಲರಿಗಿಂತ ಮೊದಲೇ ಐಪಿಎಲ್ ಭಾಗ-2ಕ್ಕೆ ಸಿದ್ದತೆ ನಡೆಸಿರುವ ಧೋನಿ ತಂಡವು ಇದೀಗ ಒಟ್ಟಾಗಿ ಮೈದಾನಕ್ಕಿಳಿದಿದೆ. ಧೋನಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಫೋಟೋಗಳು ಹಾಗೂ ಇತರ ಆಟಗಾರರೊಂದಿಗೆ ಸಮಾಲೋಚಿಸುತ್ತಿರುವ ಫೋಟೋಗಳನ್ನು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಅಲ್ಲದೆ ಯುವ ಆಟಗಾರರಿಗೆ ಧೋನಿ ಬ್ಯಾಟಿಂಗ್ ಟ್ರಿಕ್ಸ್ ಹೇಳಿಕೊಡುತ್ತಿದ್ದಾರೆ.
ಸಿಎಸ್ ಕೆ ತಂಡದ ಪ್ರಮುಖ ಸದಸ್ಯರಾದ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ರಾಬಿನ್ ಉತ್ತಪ್ಪ, ದೀಪಕ್ ಚಾಹರ್, ಋತುರಾಜ್ ಗಾಯಕ್ವಾಡ್ ಮುಂತಾದವರು ದುಬೈನ ಐಸಿಸಿ ಕ್ರಿಕೆಟ್ ಅಕಾಡಮೆ ಮೈದಾನದಲ್ಲಿ ಅಭ್ಯಾಸದಲ್ಲಿ ತೊಡಗಿದರು.
ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ 7 ಪಂದ್ಯಗಳನ್ನಾಡಿ 5 ಗೆಲುವು ಹಾಗೂ 2 ಸೋಲಿನೊಂದಿಗೆ 10 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದು, ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಕಳೆದ ಮೇ ತಿಂಗಳಿನಲ್ಲಿ ಟೂರ್ನಿಯ ಮಧ್ಯ ಭಾಗದಲ್ಲಿದ್ದಾಗ ಕೊರೊನಾವೈರಸ್‌ನ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು. ಹೀಗಾಗಿ ಟೂರ್ನಮೆಂಟ್‌ನ ಉಳಿದ ಪಂದ್ಯಗಳನ್ನು ಯುಎಇನಲ್ಲಿ ಸೆಪ್ಟೆಂಬರ್ 19ರಿಂದ ಆಯೋಜನೆ ಮಾಡಲು ನಿರ್ಧರಿಸಲಾಗಿದೆ. ಎರಡನೇ ಚರಣದ ಈ ಪಂದ್ಯಾವಳಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಕದನದ ಮೂಲಕ ಆರಂಭವಾಗಲಿದೆ.
ಒಟ್ಟು ಮೂರು ತಾಣಗಳಲ್ಲಿ ಇನ್ನುಳಿದ ಪಂದ್ಯಗಳು ನಡೆಯಲಿದೆ. ದುಬೈ, ಅಬುದಾಬಿ ಹಾಗೂ ಶಾರ್ಜಾ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯುತ್ತವೆ. ಅಬುದಾಬಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪಂದ್ಯಗಳಿಗೆ ಚಾಲನೆ ನೀಡಲಿದೆ. 13 ಪಂದ್ಯಗಳು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜನೆಯಾದರೆ ಶಾರ್ಜಾ ಕ್ರೀಡಾಂಗಣದಲ್ಲಿ 10 ಪಂದ್ಯಗಳು ನಡೆಯುತ್ತವೆ. 8 ಪಂದ್ಯಗಳಿಗೆ ಅಬುದಾಬಿ ಆತಿಥ್ಯ ವಹಿಸಲಿದೆ.
Nathan Ellis: ಪಂಜಾಬ್ ಕಿಂಗ್ಸ್ನಲ್ಲಿ ದೊಡ್ಡ ಬದಲಾವಣೆ: ರಾಹುಲ್ ತಂಡ ಸೇರಿದ ಹೊಸ ಸ್ಟಾರ್ ಆಟಗಾರ
(IPL 2021 MS Dhoni gives special batting advice to CSK opener Ruturaj Gaikwad Viral video)