IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಸರ್​ಪ್ರೈಸ್ ನೀಡಿದ ಪೈಲಟ್

Mumbai Indians: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿದೆ. ಅದೇ ರೀತಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಸೇರಿದಂತೆ ಶಾರ್ಜಾದಲ್ಲಿ ಒಟ್ಟು 10 ಪಂದ್ಯಗಳನ್ನು ಆಯೋಜಿಸಲಿದೆ.

IPL 2021: ಮುಂಬೈ ಇಂಡಿಯನ್ಸ್ ತಂಡಕ್ಕೆ ಸರ್​ಪ್ರೈಸ್ ನೀಡಿದ ಪೈಲಟ್
ಇನ್ನು ಟಾಪ್​-4ನಲ್ಲಿ ಕಾಣಿಸಿಕೊಳ್ಳಲಿರುವ ಮತ್ತೊಂದು ತಂಡವೆಂದರೆ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್​. ಮುಂಬೈ ಕೂಡ ಪ್ಲೇ ಆಫ್​ ಆಡಲಿದೆ ಎಂದು ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
Follow us
TV9 Web
| Updated By: ಝಾಹಿರ್ ಯೂಸುಫ್

Updated on:Aug 16, 2021 | 2:40 PM

ಇಂಡಿಯನ್ ಪ್ರೀಮಿಯರ್ ಲೀಗ್​​ನ (IPL 2021) ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ಐಪಿಎಲ್​ನ ದ್ವಿತಿಯಾರ್ಧಕ್ಕಾಗಿ ಯುಎಇನತ್ತ ಪ್ರಯಾಣ ಬೆಳೆಸಿದೆ. ಸೆಪ್ಟೆಂಬರ್ 19 ರಿಂದ ಆರಂಭವಾಗಲಿರುವ ದ್ವಿತಿಯಾರ್ಧದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ಅಭ್ಯಾಸಕ್ಕಾಗಿ ಒಂದು ತಿಂಗಳು ಮುಂಚಿತವಾಗಿ ಮುಂಬೈ ಆಟಗಾರರು ಅಬುಧಾಬಿಗೆ ತೆರಳಿದ್ದಾರೆ. ಇನ್ನು ಟೀಮ್ ಇಂಡಿಯಾದಲ್ಲಿರುವ ಆಟಗಾರರು ಇಂಗ್ಲೆಂಡ್​ನಿಂದ ನೇರವಾಗಿ ಅಬುಧಾಬಿಗೆ ಬರಲಿದ್ದಾರೆ. ಆದರೆ ಭಾರತದಿಂದ ಹೊರಟ ಮುಂಬೈ ಆಟಗಾರರನ್ನು ವಿಮಾನದಲ್ಲಿ ಪೈಟಲ್ ಕ್ರಿಕೆಟ್ ಶೈಲಿಯಲ್ಲಿ ವಿಭಿನ್ನವಾಗಿ ಸ್ವಾಗತಿಸಿ ಅಚ್ಚರಿ ಮೂಡಿಸಿದ್ದರು.

ಮುಂಬೈನಿಂದ ಹಾರುವ ಮುನ್ನ ಪೈಲಟ್ ಎಂದಿನಂತೆ “ಮುಂಬೈನಿಂದ ಅಬುಧಾಬಿಗೆ ಫ್ಲೈಟ್ ನಂಬರ್ 9065 ಚಾರ್ಟರ್ ಸೇವೆಯಲ್ಲಿ ನಿಮ್ಮನ್ನು ಸ್ವಾಗತಿಸುತ್ತಿದ್ದೇನೆ ಎಂದಿದ್ದರು. ಆ ಬಳಿಕ ಸ್ವಾಗತ ಮುಂದುವರೆಸಿದ ಪೈಲಟ್, ಇಂದು ಬೆಳಿಗ್ಗೆ ಮಳೆಯಾಗಿದ್ದರಿಂದ, ರೋಹಿತ್ ಶರ್ಮಾ ಮತ್ತು ಕ್ವಿಂಟನ್ ಡಿ ಕಾಕ್ ತಂಡಕ್ಕೆ ಹೇಗೆ ಕೆಲಸ ಮಾಡುತ್ತಾರೋ ಹಾಗೆ ನಾವು ತ್ವರಿತ ಆರಂಭವನ್ನು ನಿರ್ವಹಿಸುತ್ತಿದ್ದೇವೆ” ಎಂದು ಬೇಗನೆ ಹೊರಡುವ ಸೂಚನೆ ನೀಡಿದರು.

ಅಷ್ಟೇ ಅಲ್ಲದೆ ಹಾರಾಟದ ವೇಳೆ ಪ್ರಯಾಣ ವಿವರ ನೀಡಿದ ಪೈಲಟ್, ನಾವು ಏರ್ ಬಸ್ 321 ವಿಮಾನವನ್ನು ಸಮುದ್ರ ಮಟ್ಟದಿಂದ 3000 ಅಡಿ ಎತ್ತರದಲ್ಲಿ ಹಾರಿಸುತ್ತಿದ್ದೇವೆ. ವಿಮಾನವು ಸುಮಾರು 900 ಕಿಮೀ/ಗಂ ವೇಗವನ್ನು ಕಾಯ್ದುಕೊಳ್ಳುತ್ತದೆ. ಇದರಿಂದ 45 ನಿಮಿಷಗಳಲ್ಲಿ ನಾವು ಟೇಕಾಫ್ ಜಾಗವನ್ನು ತಲುಪಬಹುದು. ಅದಾಗ್ಯೂ ಈ ಪ್ರಯಾಣ ಹಾರ್ದಿಕ್ ಪಾಂಡ್ಯ ಅಥವಾ ಇಶಾನ್ ಕಿಶನ್ ಅರ್ಧಶತಕದಷ್ಟು ವೇಗವಾಗಿರಲ್ಲ ಎಂದರು.

ಇಂಡಿಗೋ ವಿಮಾನದ ಪೈಲಟ್ ಮಾತು ಕೇಳಿದ ಮುಂಬೈ ಇಂಡಿಯನ್ಸ್ ಆಟಗಾರರು ಅಚ್ಚರಿ ಕಾದಿತ್ತು. ಇದೇ ಮೊದಲ ಬಾರಿ ಕ್ರಿಕೆಟ್ ಮಿಶ್ರಿತ ಸ್ವಾಗತವನ್ನು ಆಟಗಾರರು ವಿಮಾನದಲ್ಲಿ ಕೇಳಿದ್ದರು. ಇದೀಗ ಪೈಲಟ್​ನ ಕ್ರಿಕೆಟ್ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಕ್ರಿಕೆಟ್ ಅಭಿಮಾನಿ ಪೈಲಟ್ ಆದರೆ ಹೀಗೆ ಸ್ವಾಗತ ಇರಲಿದೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.

ಐಪಿಎಲ್​ನ ದ್ವಿತಿಯಾರ್ಧ ಸೆಪ್ಟೆಂಬರ್ 19 ರಿಂದ ಶುರುವಾಗಲಿದೆ. ಉಳಿದ 31 ಪಂದ್ಯಗಳನ್ನು ಮೂರು ಸ್ಟೇಡಿಯಂನಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಅದರಂತೆ ಶಾರ್ಜಾ, ಅಬುಧಾಬಿ ಹಾಗೂ ದುಬೈನ ಕ್ರಿಕೆಟ್ ಸ್ಟೇಡಿಯಂಲ್ಲಿ ಐಪಿಎಲ್ ಕಾದಾಟ ನಡೆಯಲಿದೆ. ಮೊದಲ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದ್ದು, ಹಾಗೆಯೇ ಅಕ್ಟೋಬರ್ 8 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ಲೀಗ್ ಹಂತದ ಅಂತಿಮ ಪಂದ್ಯ ಆಡಲಿದೆ.

ಇನ್ನು ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ಮೊದಲ ಕ್ವಾಲಿಫೈಯರ್ ಮತ್ತು ಫೈನಲ್ ಸೇರಿದಂತೆ 13 ಪಂದ್ಯಗಳು ನಡೆಯಲಿದೆ. ಅದೇ ರೀತಿ ಎಲಿಮಿನೇಟರ್ ಮತ್ತು ಎರಡನೇ ಕ್ವಾಲಿಫೈಯರ್ ಪಂದ್ಯ ಸೇರಿದಂತೆ ಶಾರ್ಜಾದಲ್ಲಿ ಒಟ್ಟು 10 ಪಂದ್ಯಗಳನ್ನು ಆಯೋಜಿಸಲಿದೆ. ಹಾಗೆಯೇ 8 ಪಂದ್ಯಗಳಿಗೆ ಅಬುಧಾಬಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಸೆಪ್ಟೆಂಬರ್​ 25ರಿಂದ ಡಬಲ್ ಹೆಡರ್​ಗಳು ಆರಂಭವಾಗಲಿದ್ದು, ಒಟ್ಟು ಏಳು ಡಬಲ್ ಹೆಡರ್​ಗಳು ಇರಲಿದೆ. ಫೈನಲ್ ಪಂದ್ಯವು ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಅಕ್ಟೋಬರ್ 15 ರಂದು ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಪಂದ್ಯಗಳು ನಡೆಯಲಿದ್ದು, ಎರಡು ಪಂದಗಳಿದ್ದಾಗ ಮೊದಲ ಪಂದ್ಯವು ಮಧ್ಯಾಹ್ನ 3.30ಕ್ಕೆ ಶುರುವಾಗಲಿದೆ.

ಮುಂಬೈ ಇಂಡಿಯನ್ಸ್ ಸಂಪೂರ್ಣ ತಂಡ: ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕ್ರಿಸ್ ಲಿನ್, ಅನ್ಮೋಲ್‌ಪ್ರೀತ್ ಸಿಂಗ್, ಸೌರಭ್ ತಿವಾರಿ, ಆದಿತ್ಯ ತಾರೆ, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಅನುಕೂಲ್ ರಾಯ್, ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೌಲ್ಟ್, ರಾಹುಲ್ ಚಹರ್, ಜಯಂತ್ ಯಾದವ್, ಧವಲ್ ಕುಲಕರ್ಣಿ, ಮೊಹ್ಸಿನ್ ಖಾನ್, ನೇಥನ್ ಕೌಲ್ಟರ್ ನೈಲ್, ಆಡಮ್ ಮಿಲ್ನೆ, ಪಿಯೂಷ್ ಚಾವ್ಲಾ, ಜೇಮ್ಸ್ ನೀಶಮ್, ಯುದ್‌ವೀರ್ ಚರಕ್, ಮಾರ್ಕೊ ಜಾನ್ಸೆನ್, ಅರ್ಜುನ್ ತೆಂಡೂಲ್ಕರ್.

ಇದನ್ನೂ ಓದಿ: India vs England 2nd Test: ಅಂದು ದಾದಾ, ಇಂದು ಕೊಹ್ಲಿ: ಲಾರ್ಡ್ಸ್​ ಬಾಲ್ಕನಿಯಲ್ಲಿ ಕ್ಯಾಪ್ಟನ್ ಡ್ಯಾನ್ಸ್​

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

ಇದನ್ನೂ ಓದಿ: ಇವರ ಬ್ಯಾಟಿಂಗ್ ಮುಂದೆ, ಗೇಲ್-ಎಬಿಡಿ-ಸೆಹ್ವಾಗ್ ಏನೂ ಅಲ್ಲ: ವಿಶ್ವದ ಅತೀ ವೇಗದ ಶತಕದ ಸರದಾರ

ಇದನ್ನೂ ಓದಿ: Kl Rahul: ಪೂಜಾರ, ರಹಾನೆ ಕಳಪೆ ಫಾರ್ಮ್​ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?

Published On - 2:38 pm, Mon, 16 August 21