IPL 2021: ಮುಂಬೈ ಇಂಡಿಯನ್ಸ್​​ಗೆ ಪ್ಲೇಆಫ್​ ಸಂ-ಕಷ್ಟ..!

mumbai indians playoff chances: ಐದು ಬಾರಿಯ ಐಪಿಎಲ್ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ಹಲವು ಬಾರಿ ಕಂಬ್ಯಾಕ್ ಮಾಡಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಇತಿಹಾಸವಿದೆ.

IPL 2021: ಮುಂಬೈ ಇಂಡಿಯನ್ಸ್​​ಗೆ ಪ್ಲೇಆಫ್​ ಸಂ-ಕಷ್ಟ..!
Rohit sharma
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 28, 2021 | 2:24 PM

ಐಪಿಎಲ್​ನ (IPL 2021) ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ​ ಸತತ ಸೋಲಿನಿಂದ ಕಂಗೆಟ್ಟಿದೆ. ದ್ವಿತಿಯಾರ್ಧದಲ್ಲಿ ಆಡಿದ 3 ಪಂದ್ಯಗಳಲ್ಲಿ ಸೋಲನುಭವಿಸುವಾಗ ಸಂಕಷ್ಟಕ್ಕೆ ಸಿಲುಕಿದೆ. ಅಷ್ಟೇ ಅಲ್ಲದೆ ಮೊದಲಾರ್ಧದಲ್ಲಿ 4ನೇ ಸ್ಥಾನದಲ್ಲಿದ್ದ ತಂಡವು ಇದೀಗ 7ನೇ ಸ್ಥಾನಕ್ಕೆ ಕುಸಿದಿದೆ. ಆಡಿರುವ 10 ಪಂದ್ಯಗಳಲ್ಲಿ ನಾಲ್ಕರಲ್ಲಿ ಮಾತ್ರ ಗೆದ್ದಿರುವ ರೋಹಿತ್​ ಪಡೆಗೆ ಇನ್ನು ಉಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಹೀಗಾಗಿಯೇ ಮುಂಬೈಗೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಏಕೆಂದರೆ ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಸೋತರೆ ಪ್ಲೇ ಆಫ್​ ಕನಸು ಭಗ್ನಗೊಳ್ಳುವ ಸಾಧ್ಯತೆಯಿದೆ.

ಈಗಾಗಲೇ ಸಿಎಸ್​ಕೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇ ಆಫ್​ ಪ್ರವೇಶವನ್ನು ಬಹುತೇಕ ಖಚಿತಪಡಿಸಿದೆ. ಇನ್ನು ಆರ್​ಸಿಬಿ 12 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇನ್ನುಳಿದ 4 ಪಂದ್ಯಗಳಲ್ಲಿ ಆರ್​ಸಿಬಿ 2 ಗೆದ್ದರೆ ಪ್ಲೇ ಆಫ್​ ಪ್ರವೇಶಿಸಬಹುದು. ಇತ್ತ ಕೆಕೆಆರ್, ಪಂಜಾಬ್ ಕಿಂಗ್ಸ್​​ ತಂಡಗಳು ಕೂಡ 4 ಪಂದ್ಯಗಳನ್ನು ಆಡಬೇಕಿದೆ. ರಾಜಸ್ಥಾನ್, ಪಂಜಾಬ್ ಹಾಗೂ ಕೆಕೆಆರ್​ ತಂಡಗಳಿಗೂ ಪ್ಲೇ ಆಫ್​ ಪ್ರವೇಶಿಸಲು ಅವಕಾಶವಿದ್ದು, ಹೀಗಾಗಿ ಈ ತಂಡಗಳ ವಿರುದ್ದದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಜಯಿಸಲೇಬೇಕಾದ ಅನಿವಾರ್ಯತೆ ಇದೆ. ಒಂದು ವೇಳೆ ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲಿ ಮುಂಬೈ ಸೋತರೆ ಕೆಎಲ್ ರಾಹುಲ್​ ಪಡೆಗೆ ಪ್ಲೇ ಆಫ್​ ಪ್ರವೇಶಿಸುವ ಹಾದಿ ಸುಗಮವಾಗಲಿದೆ. ಹೀಗಾಗಿ ಪಂಜಾಬ್ ಕಿಂಗ್ಸ್​ ವಿರುದ್ದ ಪಂದ್ಯವು ಮುಂಬೈ ಪಾಲಿಗೆ ಮಹತ್ವದ್ದು.

ಇನ್ನು ಪಂಜಾಬ್ ವಿರುದ್ದ ಮುಂಬೈ ಗೆದ್ದರೆ, ಉಳಿದ ಮೂರು ಪಂದ್ಯಗಳನ್ನು ಗೆಲ್ಲಬೇಕು. ಅಂದರೆ ಮುಂಬೈ ಇಂಡಿಯನ್ಸ್​ ಮುಂದಿನ 4 ಪಂದ್ಯಗಳನ್ನು ಗೆದ್ದರೆ ಸುಲಭವಾಗಿ ಪ್ಲೇ ಆಫ್​ ಪ್ರವೇಶಿಸುವ ಅವಕಾಶ ಇರಲಿದೆ. ಒಂದು ವೇಳೆ ನಾಲ್ಕರಲ್ಲಿ ಒಂದು ಸೋತು ಉಳಿದ ಮೂರು ಪಂದ್ಯಗಳನ್ನು ಗೆದ್ದುಕೊಂಡರೆ ಪ್ಲೇ ಆಫ್​ನಲ್ಲಿ ನಾಲ್ಕನೇ ಸ್ಥಾನ ಪಡೆಯಲು ರನ್​ ರೇಟ್ ಮೊರೆ ಹೋಗಬೇಕಾಗುತ್ತದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಮುಂಬೈ ಉತ್ತಮ ರನ್​ ರೇಟ್​ನೊಂದಿಗೆ ಗೆಲ್ಲುವುದು ಸಹ ಅನಿವಾರ್ಯ. ಒಟ್ಟಿನಲ್ಲಿ ಐದು ಬಾರಿಯ ಐಪಿಎಲ್ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ಹಲವು ಬಾರಿ ಕಂಬ್ಯಾಕ್ ಮಾಡಿ ಚಾಂಪಿಯನ್​ ಪಟ್ಟ ಅಲಂಕರಿಸಿದ ಇತಿಹಾಸವಿದೆ. ಹೀಗಾಗಿ ಮುಂದಿನ ನಾಲ್ಕು ಪಂದ್ಯಗಳಲ್ಲಿ ರೋಹಿತ್ ಪಡೆಯಿಂದ ಭರ್ಜರಿ ಪ್ರದರ್ಶನ ನಿರೀಕ್ಷಿಸಬಹುದು.

ಇದನ್ನೂ ಓದಿ: IPL 2021: ಇದು ಅಂತಿಂಥ ಗೆಲುವಲ್ಲ…ಮುಂಬೈ ದಾಖಲೆಯನ್ನು ಅಳಿಸಿ ಹಾಕಿದ RCB

ಇದನ್ನೂ ಓದಿ: IPL 2021: RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು ಇವರೇ..!

ಇದನ್ನೂ ಓದಿ: Crime News: ತಾಯಿಗೆ ಅನೈತಿಕ ಸಂಬಂಧ: ಅದನ್ನೇ ಬಂಡವಾಳ ಮಾಡಿಕೊಂಡ ಮಗಳು

(IPL 2021: mumbai indians playoff scenarios)

Published On - 2:23 pm, Tue, 28 September 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್