IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ

IPL 2021 New Schedule: ಇನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಮ್ಮ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದು, ಹೀಗಾಗಿ ರಾಷ್ಟ್ರೀಯ ತಂಡದಲ್ಲಿರುವ ಪ್ರಮುಖ ಪ್ಲೇಯರ್ಸ್ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕಾಣಿಸಿಕೊಳ್ಳುವುದು ಅನುಮಾನ.

IPL 2021: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಸ್ಟಾರ್ ಆಟಗಾರರು ಕಣಕ್ಕಿಳಿಯುವುದು ಖಚಿತ
ರಾಯಲ್ ಚಾಲೆಂಜರ್ಸ್ ಬೆಂಗಳೂರು
Follow us
| Updated By: ಝಾಹಿರ್ ಯೂಸುಫ್

Updated on: Aug 01, 2021 | 8:49 PM

ಐಪಿಎಲ್ 2021 (IPL 2021) ರ ಎರಡನೇ ಹಂತದ ಪಂದ್ಯಗಳು ಯುಎಇಯಲ್ಲಿ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ನಡೆಯಲಿವೆ. ಏಪ್ರಿಲ್​ನಲ್ಲಿ ಶುರುವಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ್ನು ಕೊರೋನಾ ಕಾರಣದಿಂದ ಮೇ 4 ರಂದು ಮುಂದೂಡಲಾಯಿತು. ಇದೀಗ ಟೂರ್ನಿಯನ್ನು ಯುಎಇಗೆ ಸ್ಥಳಾಂತರಿಸಿ ಬಿಸಿಸಿಐ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ಅಬುಧಾಬಿ, ಶಾರ್ಜಾ ಹಾಗೂ ದುಬೈನ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ಐಪಿಎಲ್​ನ 31 ಪಂದ್ಯಗಳು ಜರುಗಲಿವೆ. ಆದರೆ ಅತ್ತ ಇಂಗ್ಲೆಂಡ್​ ಆಟಗಾರರು ಟೂರ್ನಿಯ ದ್ವಿತಿಯಾರ್ಧದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಇತ್ತೀಚೆಗಷ್ಟೇ ಇಸಿಬಿ ನಿರ್ದೇಶಕ ಆ್ಯಶ್ಲೆ ಜೈಲ್ಸ್ ತಿಳಿಸಿದ್ದರು. ಇದರಿಂದ ಕೆಲ ತಂಡಗಳ ಪ್ರಮುಖ ಆಟಗಾರರು ಅಲಭ್ಯರಾಗುವುದು ಬಹುತೇಕ ಖಚಿತ. ಆದರೆ ಇತ್ತ ತಮ್ಮ ರಾಷ್ಟ್ರದ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ನ್ಯೂಜಿಲೆಂಡ್ ಕ್ರಿಕೆಟ್ ಬೋರ್ಡ್ ಸ್ಪಷ್ಟಪಡಿಸಿದೆ.

ಸೆಪ್ಟೆಂಬರ್-ಅಕ್ಟೋಬರ್ ನಡುವೆ ನ್ಯೂಜಿಲ್ಯಾಂಡ್ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ. ಪಾಕ್​ ವಿರುದ್ದ ನ್ಯೂಜಿಲೆಂಡ್ ಮೂರು ಏಕದಿನ ಪಂದ್ಯಗಳು ಮತ್ತು ಟಿ 20 ಪಂದ್ಯಗಳನ್ನು ಆಡಬೇಕಿದೆ. ಹೀಗಾಗಿ ಕಿವೀಸ್ ಆಟಗಾರರು ಲಭ್ಯರಿರುವುದು ಅನುಮಾನ ಎನ್ನಲಾಗಿತ್ತು. ಆದರೆ ಇದೀಗ ನ್ಯೂಜಿಲೆಂಡ್​ನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ಡೇವಿಡ್ ವೈಟ್ ತಮ್ಮ ಆಟಗಾರರು ಐಪಿಎಲ್​ ದ್ವಿತಿಯಾರ್ಧಕ್ಕೆ ಲಭ್ಯರಿರಲಿದ್ದಾರೆ ಎಂದು ಬಿಸಿಸಿಐಗೆ ತಿಳಿಸಿದೆ.

ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕೈಲ್ ಜೇಮಿಸನ್ ಹಾಗೂ ಫಿನ್ ಅಲೆನ್ ಆಡುವುದು ಖಚಿತವಾಗಿದೆ. ಇನ್ನು ಐಪಿಎಲ್​ನಲ್ಲಿ ಆಡುತ್ತಿರುವ ನ್ಯೂಜಿಲೆಂಡ್ ಕ್ರಿಕೆಟರುಗಳಾದ ಎಸ್​ಆರ್​ಹೆಚ್​ ತಂಡದ ಕೇನ್ ವಿಲಿಯಮ್ಸನ್, ಮುಂಬೈ ತಂಡದ ಆ್ಯಡಂ ಮಿಲ್ನೆ, ಟ್ರೆಂಟ್​ ಬೌಲ್ಟ್, ಕೆಕೆಆರ್​ ತಮಡ ಟಿಮ್ ಸೀಫರ್ಟ್​, ಲಾಕಿ ಫರ್ಗುಸನ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಿಚೆಲ್ ಸ್ಯಾಂಟ್ನರ್ ಕೂಡ ಐಪಿಎಲ್​ನ ದ್ವಿತಿಯಾರ್ಧಕ್ಕೆ ಲಭ್ಯರಿರಲಿದ್ದಾರೆ.

ಇನ್ನು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಮ್ಮ ಆಟಗಾರರು ಅಲಭ್ಯರಾಗಲಿದ್ದಾರೆ ಎಂದು ತಿಳಿಸಿದ್ದು, ಹೀಗಾಗಿ ರಾಷ್ಟ್ರೀಯ ತಂಡದಲ್ಲಿರುವ ಪ್ರಮುಖ ಪ್ಲೇಯರ್ಸ್ ಐಪಿಎಲ್​ನ ದ್ವಿತಿಯಾರ್ಧದಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಇಂಗ್ಲೆಂಡ್ ತಂಡ ಸೆಪ್ಟೆಂಬರ್ 10 ರಿಂದ14 ರವರೆಗೆ ಭಾರತದ ವಿರುದ್ಧ ಐದು ಪಂದ್ಯಗಳ ಸರಣಿಯ ಕೊನೆಯ ಟೆಸ್ಟ್ ಆಡಲಿದೆ. ಈ ಸರಣಿ ಬಳಿಕ ಆಟಗಾರರು ವಿಶ್ರಾಂತಿ ಬಯಸಿದರೆ ಅಥವಾ ಕೊರೋನಾಂತಕದ ಕಾರಣದಿಂದ ಹೊರಗುಳಿಯುವ ಸಾಧ್ಯತೆ ಕೂಡ ಇದೆ. ಒಂದು ವೇಳೆ ಇಂಗ್ಲೆಂಡ್ ಆಟಗಾರರು ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಕ್ಟೋಬರ್​ ಮೊದಲ ವಾರದಲ್ಲೇ ಹಿಂತಿರಬೇಕಾಗುತ್ತದೆ. ಏಕೆಂದರೆ ಅಕ್ಟೋಬರ್ 14 ರಿಂದ ಇಂಗ್ಲೆಂಡ್ ಪಾಕಿಸ್ತಾನದ ವಿರುದ್ಧ ಟಿ20 ಸರಣಿಯನ್ನು ಆಡಬೇಕಿದೆ. ಹೀಗಾಗಿ ಇಂಗ್ಲೆಂಡ್ ತಂಡದಲ್ಲಿರುವ ರಾಷ್ಟ್ರೀಯ ಆಟಗಾರರ ಪಾಲ್ಗೊಳ್ಳುವಿಕೆ ಬಹುತೇಕ ಅನುಮಾನ.

ಹೀಗಾಗಿ ಪ್ರಸ್ತುತ ಐಪಿಎಲ್​ ತಂಡದಲ್ಲಿ ಇಂಗ್ಲೆಂಡ್​ನ ಸ್ಟಾರ್ ಆಟಗಾರರಾದ ಜೋಸ್​ ಬಟ್ಲರ್, ಜೋಫ್ರಾ ಆರ್ಚರ್, ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ ಐಪಿಎಲ್ ಎರಡನೇ ಹಂತದಲ್ಲಿ ಕಣಕ್ಕಿಳಿಯುವುದು ಡೌಟ್. ಇವರಲ್ಲಿ ಬಟ್ಲರ್, ಜೋಫ್ರಾ ಆರ್ಚರ್ ರಾಜಸ್ಥಾನ ರಾಯಲ್ಸ್ ( Rajasthan Royals ) ತಂಡದ ಪರ ಆಡುತ್ತಿದ್ದರೆ, ಮೊಯೀನ್ ಅಲಿ ಮತ್ತು ಸ್ಯಾಮ್ ಕರನ್ CSK ಪರ ಆಡುತ್ತಿದ್ದಾರೆ. ಹೀಗಾಗಿ ಈ ಎರಡು ತಂಡಗಳು ಬದಲಿ ಆಟಗಾರರನ್ನು ಖರೀದಿಸುವ ಸಾಧ್ಯತೆ ಹೆಚ್ಚಿದೆ.

ಕೊರೋನಾ ಕಾರಣದಿಂದ ಮೊಟಕುಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲಾರ್ಧದಲ್ಲಿ 29 ಪಂದ್ಯಗಳನ್ನು ಆಡಲಾಗಿತ್ತು. ಇದೀಗ ಉಳಿದ ಪಂದ್ಯಗಳನ್ನು ಯುಎಇಗೆ ಸ್ಥಳಾಂತರಿಸಲಾಗಿದ್ದು, ಅದರಂತೆ ಉಳಿದಿರುವ 31 ಪಂದ್ಯಗಳು ಶಾರ್ಜಾ, ಅಬುಧಾಬಿ ಮತ್ತು ದುಬೈ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 15 ರವರೆಗೆ ನಡೆಯಲಿದೆ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

ಇದನ್ನೂ ಓದಿ: LICಯ ವಿಶೇಷ ಯೋಜನೆ: 200 ರೂ. ಹೂಡಿಕೆ ಮಾಡಿ, 28 ಲಕ್ಷ ರೂ. ಪಡೆಯಿರಿ

(IPL 2021: New Zealand cricketers will be available for IPL in UAE)

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ