PBKS vs RR: ಕಿಂಗ್ಸ್ಗೆ ರಾಯಲ್ಸ್ ಸವಾಲು: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ
PBKS vs RR Predicted Playing 11: ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ಪರ ಮೊದಲಾರ್ಧದಲ್ಲಿ ಕಣಕ್ಕಿಳಿದ ಜೋಸ್ ಬಟ್ಲರ್ ಸೇರಿದಂತೆ ಕೆಲ ಸ್ಟಾರ್ ಆಟಗಾರರು ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಎವಿನ್ ಲೂಯಿಸ್ ಆಗಮನ ತಂಡಕ್ಕೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಸೀಸನ್ನ (Indian Premier League) 32ನೇ ಪಂದ್ಯದಲ್ಲಿ ಕೆ. ಎಲ್ ರಾಹುಲ್ (KL Rahul) ನಾಯಕತ್ವದ ಪಂಜಾಬ್ ಕಿಂಗ್ಸ್ (Punjab Kings) ಮತ್ತು ಸಂಜು ಸ್ಯಾಮ್ಸನ್ (Sanju Samson) ನೇತೃತ್ವದ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡಗಳು ಮುಖಾಮುಖಿಯಾಲಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಜಯಗಳಿಸುವ ಮೂಲಕ ದ್ವಿತಿಯಾರ್ಧದಲ್ಲಿ ಶುಭಾರಂಭ ಮಾಡಲು ಉಭಯ ತಂಡಗಳು ಯೋಜನೆ ರೂಪಿಸಿಕೊಂಡಿದೆ.
ಉಭಯ ತಂಡಗಳು ಇದುವರೆಗೆ ಒಟ್ಟು 22 ಬಾರಿ ಮುಖಾಮುಖಿಯಾಗಿದೆ. ಅದರಲ್ಲಿ ಪಂಜಾಬ್ ಕಿಂಗ್ಸ್ 10 ಪಂದ್ಯಗಳಲ್ಲಿ ಜಯ ದಾಖಲಿಸಿದರೆ ಮತ್ತು ರಾಜಸ್ಥಾನ್ ರಾಯಲ್ಸ್ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಮೊದಲಾರ್ಧದ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ 4 ರನ್ಗಳ ರೋಚಕ ಜಯ ಸಾಧಿಸಿತ್ತು. ಇದಾಗ್ಯೂ ಮೊದಲಾರ್ಧದ ಅಂಕ ಪಟ್ಟಿಯಲ್ಲಿ ಎರಡೂ ತಂಡಗಳು ಸಮಬಲ ಹೊಂದಿದೆ ಎನ್ನಬಹುದು. ಏಕೆಂದರೆ ರಾಜಸ್ಥಾನ್ ರಾಯಲ್ಸ್ ತಂಡವು 7 ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿ 6ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ 8 ಪಂದ್ಯಗಳಲ್ಲಿ ಮೂರು ಗೆಲುವು ದಾಖಲಿಸಿ 7ನೇ ಸ್ಥಾನದಲ್ಲಿದೆ. ಹೀಗಾಗಿ ಪ್ಲೇ ಆಫ್ ಪ್ರವೇಶಿಸಲು ಉಭಯ ತಂಡಗಳಿಗೂ ಇಂದಿನ ಪಂದ್ಯ ಮಹತ್ವದ್ದಾಗಿದೆ.
ಇನ್ನು ಉಭಯ ತಂಡಗಳ ಬಲಾಬಲವನ್ನು ನೋಡಿದರೆ ಪಂಜಾಬ್ ಕಿಂಗ್ಸ್ ಪಾಲಿಗೆ ಬ್ಯಾಟ್ಸ್ಮನ್ಗಳ ಪ್ರಮುಖ ಅಸ್ತ್ರ ಎನ್ನಬಹುದು. ಏಕೆಂದರೆ ತಂಡದಲ್ಲಿ ಸ್ಟಾರ್ ಆಟಗಾರರಾಗಿ ನಾಯಕ ಕೆ. ಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡರಂತಹ ಬ್ಯಾಟ್ಸ್ಮನ್ ದಂಡೇ ಇದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಒಬ್ಬರೇ ಅನುಭವಿ. ಇದೀಗ ಆದಿಲ್ ರಶೀದ್ ತಂಡಕ್ಕೆ ಎಂಟ್ರಿ ಕೊಟ್ಟಿರುವುದು ಪಂಜಾಬ್ ಬೌಲಿಂಗ್ ಬಲವನ್ನು ಹೆಚ್ಚಿಸಿದೆ.
ಇನ್ನೊಂದೆಡೆ ರಾಜಸ್ಥಾನ್ ರಾಯಲ್ಸ್ ಪರ ಮೊದಲಾರ್ಧದಲ್ಲಿ ಕಣಕ್ಕಿಳಿದ ಜೋಸ್ ಬಟ್ಲರ್ ಸೇರಿದಂತೆ ಕೆಲ ಸ್ಟಾರ್ ಆಟಗಾರರು ದ್ವಿತಿಯಾರ್ಧದಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಎವಿನ್ ಲೂಯಿಸ್ ಆಗಮನ ತಂಡಕ್ಕೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯಿದೆ. ಇನ್ನು ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ಶಿವಂ ದುವೆ, ಲ್ಯಾಮ್ ಲಿವಿಂಗ್ಸ್ಟನ್, ರಾಹುಲ್ ತೇವಾಟಿಯಾ ಮತ್ತು ಕ್ರಿಸ್ ಮೊರೀಸ್ ಅಂತಹ ಆಟಗಾರರು ಆರ್ಆರ್ ಬಳಗದಲ್ಲಿದೆ. ಅದೇ ಬೌಲಿಂಗ್ ವಿಭಾಗದಲ್ಲಿ ಮುಸ್ತಫಿಜುರ್ ರೆಹಮಾನ್ ಹಾಗೂ ಚೇತನ್ ಸಕರಿಯಾ ಉತ್ತಮ ಫಾರ್ಮ್ನಲ್ಲಿರುವುದು ವಿಶೇಷ. ಹೀಗಾಗಿ ಉಭಯ ತಂಡಗಳಿಂದ ರೋಚಕ ಹೋರಾಟ ನಿರೀಕ್ಷಿಸಬಹುದು.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ: ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ ಇಲೆವೆನ್: ಕೆಎಲ್ ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಶಾರುಖ್ ಖಾನ್, ಆದಿಲ್ ರಶೀದ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ
ರಾಜಸ್ಥಾನ ರಾಯಲ್ಸ್ ಇಲೆವೆನ್: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿವಂ ದುಬೆ, ಲಿಯಾಮ್ ಲಿವಿಂಗ್ ಸ್ಟೋನ್, ರಾಹುಲ್ ತೇವಾಟಿಯಾ, ಕ್ರಿಸ್ ಮೋರಿಸ್, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ, ಮುಸ್ತಫಿಜುರ್ ರಹಮಾನ್.
ಇದನ್ನೂ ಓದಿ: Virat Kohli: ನಮಗೆ ಸೋಲುಣಿಸಿದ ಆತನೇ ನಮ್ಮ ಪ್ರಮುಖ ಅಸ್ತ್ರ..!
ಇದನ್ನೂ ಓದಿ: Virat Kohli: ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ವಿರಾಟ್ ಕೊಹ್ಲಿ
ಇದನ್ನೂ ಓದಿ: 90 ಕಿ.ಮೀ ಮೈಲೇಜ್ ನೀಡುವ ಕಡಿಮೆ ಬೆಲೆಯ ಬೈಕ್ಗಳ ಪಟ್ಟಿ ಇಲ್ಲಿದೆ
ಇದನ್ನೂ ಓದಿ: IPL 2021: ಪ್ಲೇ ಆಫ್ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್
(IPL 2021, PBKS vs RR Predicted Playing 11)